ಭಾರತ ಸಿರಿಯಾ ಆಗಲಿದೆ; ಶ್ರೀಶ್ರೀ ವಿರುದ್ಧ ದೂರು ದಾಖಲಿಸಿದ ಎಐಎಂಐಎಂ
Team Udayavani, Mar 8, 2018, 5:48 PM IST
ನವದೆಹಲಿ:ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ವಿವಾದ ಇತ್ಯರ್ಥವಾಗಲಿದ್ದರೆ ಭಾರತ ಮುಂದೆ ಸಿರಿಯಾ ಆಗಿ ಮಾರ್ಪಡಲಿದೆ ಎಂದು ಹೇಳಿಕೆ ನೀಡಿದ್ದ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ವಿರುದ್ಧ ಎಐಎಂಐಎಂ(ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮೀನ್ ಪಕ್ಷ) ದೂರು ದಾಖಲಿಸಿದೆ.
ಶ್ರೀಶ್ರೀ ವಿರುದ್ಧ ಆಲ್ ಇಂಡಿಯಾ ಮಜ್ಲಿಸ್ ಎ ಇತ್ತೇಹಾದುಲ್ ಮುಸ್ಲಿಮೀನ್ ಪಕ್ಷದ ಮುಖಂಡ, ಲಕ್ನೋ ನಿವಾಸಿ ತೌಹಿದ್ ಸಿದ್ದಿಖಿ ದೂರು ದಾಖಲಿಸಿರುವುದಾಗಿ ಎಎನ್ ಐ ವರದಿ ಮಾಡಿದೆ.
ರಾಮಜನ್ಮಭೂಮಿ ವಿವಾದ ಬಗೆಹರಿಯುವ ವಿಚಾರ ತುಂಬಾ ನಿಧಾನಗತಿಯಲ್ಲಿ ಸಾಗುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಟೆಲಿವಿಷನ್ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಶ್ರೀ,ಶ್ರೀ ಈ ವಿವಾದ ಬಗೆಹರಿಯದಿದ್ದರೆ ಭಾರತದಲ್ಲಿಯೂ ಸಿರಿಯಾ ರೀತಿ ಪರಿಸ್ಥಿತಿ ತಲೆದೋರಲಿದೆ ಎಂದು ಹೇಳಿದ್ದರು.
ಒಂದು ವೇಳೆ ನ್ಯಾಯಾಲಯ ರಾಮಮಂದಿರದ ವಿರುದ್ಧವಾಗಿ ಆದೇಶ ಕೊಟ್ಟರೆ ರಕ್ತಪಾತವಾಗಲಿದೆ. ಬಹುಸಂಖ್ಯಾತ ಹಿಂದೂಗಳು ಇದನ್ನು ಒಪ್ಪುತ್ತಾರೆ ಎಂದು ಭಾವಿಸುತ್ತೀರಾ?ಹೀಗಾಗಿ ಮುಸ್ಲಿಮರು ತಮ್ಮ ಹಠವನ್ನು ಬಿಡಬೇಕು ಎಂದು ಎಂದು ಹೇಳಿದ್ದರು. ಶ್ರೀಶ್ರೀ ಅವರ ಹೇಳಿಕೆಗೆ ಎಐಎಂಐಎಂ ಸಂಸ್ಥಾಪಕ ಅಸಾದುದ್ದೀನ್ ಒವೈಸಿ ಹಾಗೂ ಶಿವಸೇನಾ ಕೂಡಾ ಟೀಕಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.