ಕಾಶ್ಮೀರ: ವಾಯುಪಡೆ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್!
Team Udayavani, Aug 3, 2019, 6:30 PM IST
ಶ್ರೀನಗರ: ಕಾಶ್ಮೀರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರೆಸೇನಾಪಡೆಗಳನ್ನು ಕೇಂದ್ರ ಸರಕಾರ ನಿಯೋಜಿಸುತ್ತಿರುವಂತೆಯೇ, ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗುತ್ತಿದೆ. ಈಗಾಗಲೇ ಆಯಕಟ್ಟಿನ ಜಾಗದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ಕೇಂದ್ರ ಪಡೆಗಳೇ ಇಡೀ ಕಾನೂನು ಸುವ್ಯವಸ್ಥೆ ಮೇಲೆ ಕಣ್ಣಿಟ್ಟಿದೆ. ಸ್ಥಳೀಯ ಪೊಲೀಸರಿಗಿಂತಲೂ ಹೆಚ್ಚು ಪರಿಸ್ಥಿತಿ ಮೇಲೆ ಕೇಂದ್ರದ ಪಡೆಗಳು ಹದ್ದಿನ ಕಣ್ಣಿಟ್ಟಿವೆ. ಇದರೊಂದಿಗೆ ಸದ್ಯ ವಾಯುಪಡೆ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಮತ್ತೊಂದೆಡೆ ಸರಕಾರಿ ವೈದ್ಯರ ರಜೆಗಳನ್ನು ರದ್ದುಪಡಿಸಲಾಗಿದೆ. ರಜೆ ಹಾಕಬೇಕಾದರೂ ಮೇಲಧಿಕಾರಿಗಳ ಅನುಮತಿ ರಹಿತವಾಗಿ ರಜೆ ಹಾಕುವಂತಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಆಡಳಿತ ಫರ್ಮಾನು ಹೊರಡಿಸಿದೆ. ಇದರಿಂದ ಕಾಶ್ಮೀರದಲ್ಲೇನೋ ನಡೆಯುತ್ತಿದೆ ಎಂಬ ಮಾತುಗಳು ಇನ್ನಷ್ಟು ಬಿಸಿ ಬಿಸಿ ಚರ್ಚೆಯಾಗಲು ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.