ವಾಯುಪಡೆ ಅಧಿಕಾರ ವಹಿಸಿಕೊಂಡ ಭದೌರಿಯಾ
Team Udayavani, Oct 1, 2019, 5:25 AM IST
ಹೊಸದಿಲ್ಲಿ: ವಾಯುಪಡೆ ಮುಖ್ಯಸ್ಥ ಬಿ.ಎಸ್. ಧನೋವಾ ನಿವೃತ್ತ ರಾದ ಹಿನ್ನೆಲೆಯಲ್ಲಿ ಸೋಮವಾರ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ವಾಯುಪಡೆಯ 26ನೇ ಮುಖ್ಯಸ್ಥರಾಗಿ ಅಧಿಕಾರ ವಹಿಸಿ ಕೊಂಡರು. ಇವರು ವಾಯುಪಡೆ ಸಿಬಂದಿ ವಿಭಾಗದ ಮುಖ್ಯಸ್ಥರಾಗಿದ್ದರು. ಅಧಿಕಾರ ವಹಿಸಿಕೊಳ್ಳುವುದಕ್ಕೂ ಮೊದಲು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮರಿಗೆ ನಮನ ಸಲ್ಲಿಸಿದರು.
ವಿಶಿಷ್ಟ ಸಾಧನೆಗಳು
ರಫೇಲ್ ಯುದ್ಧ ವಿಮಾನವನ್ನು ಚಲಾಯಿಸಿದ ಮೊದಲ ಭಾರತೀಯ ವಾಯುಪಡೆ ಅಧಿಕಾರಿ
ಕಳೆದ ಜುಲೈನಲ್ಲಿ ಫ್ರಾನ್ಸ್ ಮತ್ತು ಭಾರತದ ವಾಯುಪಡೆ ಕವಾಯತಿನಲ್ಲಿ ರಫೇಲ್ ಹಾರಾಟ
ಫ್ರಾನ್ಸ್‌ನಿಂದ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಅಂತಿಮ ರೂಪ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಅಧಿಕಾರಿ
ಮೊದಲ ರಫೇಲ್ ಯುದ್ಧ ವಿಮಾನಕ್ಕೆ ಇವರ ಹೆಸರಿನ ಆದ್ಯಕ್ಷರ ನಾಮಕರಣ – ಆರ್‌ಬಿ 01
1999ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ಜಿಪಿಎಸ್ ಬಳಸಿ ಜಾಗ್ವಾರ್ ಯುದ್ಧ ವಿಮಾನದ ಮೂಲಕ ಬಾಂಬ್ ದಾಳಿ ನಡೆಸುವ ವಿಶಿಷ್ಟ ವಿಧಾನ ಕಂಡುಹಿಡಿದ ಖ್ಯಾತಿ
ಎಲ್ಲದಕ್ಕೂ ನಾವು ಸನ್ನದ್ಧ
ರಫೇಲ್ ಅತ್ಯಂತ ಸಮರ್ಥ ಯುದ್ಧ ವಿಮಾನ. ನಮ್ಮ ಕಾರ್ಯ ನಿರ್ವಹಣೆ ಸಾಮರ್ಥ್ಯದಲ್ಲಿ ಇದು ಮಹತ್ವದ ಬದಲಾವಣೆಗೆ ಕಾರಣವಾಗಬಲ್ಲದು. ಸುಖೋಯ್ ಹಾಗೂ ಇತರ ಯುದ್ಧ ವಿಮಾನಗಳ ಜತೆಗೆ ಇದನ್ನು ಬಳಸಿದಾಗ ನಮ್ಮ ಶಕ್ತಿ ಸಾಮರ್ಥ್ಯ ಹೆಚ್ಚಲಿದೆ. ಇದು ಪಾಕಿಸ್ಥಾನ ಮತ್ತು ಚೀನಗಿಂತ ನಮ್ಮ ಸಾಮರ್ಥ್ಯವನ್ನು ಹೆಚ್ಚಿಸಲಿದೆ. ನಾವು ಯಾವುದೇ ಸನ್ನಿವೇಶಕ್ಕೂ ಸಿದ್ಧರಾಗಿದ್ದೇವೆ. ಸರಕಾರ ಸೂಚಿಸಿದ ಕೂಡಲೇ ಯಾವ ಕಾರ್ಯಾಚರಣೆಯನ್ನು ಬೇಕಿದ್ದರೂ ಮಾಡುತ್ತೇವೆ.
ಭದೌರಿಯಾ ಕುರಿತು…
ಕಳೆದ ತಿಂಗಳು ಸರಕಾರದಿಂದ ನೇಮಕ
ಎರಡು ವರ್ಷಗಳವರೆಗೆ ವಾಯುಪಡೆ ನೇತೃತ್ವ
ಪುಣೆ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ಅಧ್ಯಯನ ನಡೆಸಿದ್ದ ಭದೌರಿಯಾ
4250 ಗಂಟೆಗಳ ವಿಮಾನ ಹಾರಾಟ ಅನುಭವ
26 ವಿಧದ ವಿಮಾನ ಹಾರಾಟ ನಡೆಸಿದ ಗರಿಮೆ
ಭದೌರಿಯಾಗೆ ಸಿಕ್ಕ ಪುರಸ್ಕಾರಗಳು
ಅತಿ ವಿಶಿಷ್ಟ ಸೇವಾ ಪದಕ
ವಾಯು ಸೇನಾ ಪದಕ
ಪರಮ ವಿಶಿಷ್ಟ ಸೇವಾ ಪದಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.