Kuwait ಅಗ್ನಿ ದುರಂತ: 45 ಭಾರತೀಯರ ಮೃತದೇಹ ಹೊತ್ತು ಕೊಚ್ಚಿಗೆ ಹೊರಟ ವಿಶೇಷ ವಿಮಾನ
Team Udayavani, Jun 14, 2024, 8:43 AM IST
ನವದೆಹಲಿ: ಕುವೈತ್ ಕಟ್ಟಡ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಪಾರ್ಥೀವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನದ ಕುವೈತ್ ನಿಂದ ಶುಕ್ರವಾರ ಮುಂಜಾನೆ ಕೇರಳಕ್ಕೆ ಹೊರಟಿದೆ.
ಈ ವಿಚಾರವನ್ನು ಕೇಂದ್ರ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ‘ಎಕ್ಸ್’ ನಲ್ಲಿ ಖಚಿತಪಡಿಸಿದ್ದಾರೆ. ಅಲ್ಲದೆ ವಿಮಾನ ಇಳಿಯಲಿರುವ ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಮತ್ತು ಆಂಬ್ಯುಲೆನ್ಸ್‌ಗಳ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ ಬುಧವಾರ ಕುವೈತ್ ನ ದಕ್ಷಿಣ ನಗರವಾದ ಮಂಗಾಫ್ ನಗರದ ಆರು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 48 ಜನರು ಸಾವನ್ನಪ್ಪಿದ್ದಾರೆ. ವಸತಿ ಸೌಲಭ್ಯದಲ್ಲಿರುವ 176 ಭಾರತೀಯ ಕಾರ್ಮಿಕರಲ್ಲಿ 45 ಮಂದಿ ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಯಭಾರ ಕಚೇರಿ ತಿಳಿಸಿದೆ. ಉಳಿದವರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಇದಾದ ಬಳಿಕ ಗುರುವಾರ ಕುವೈತ್‌ನ ಅಧಿಕಾರಿಗಳು ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದ 45 ಭಾರತೀಯರು ಮತ್ತು ಮೂವರು ಫಿಲಿಪಿನೋ ಪ್ರಜೆಗಳ ಶವಗಳನ್ನು ಗುರುತಿಸಿದ್ದಾರೆ. ಘಟನೆಯ ಕುರಿತು ತ್ವರಿತವಾಗಿ ತನಿಖೆ ನಡೆಸುವುದಾಗಿ ಕುವೈತ್ ಪ್ರತಿಜ್ಞೆ ಮಾಡಿದೆ ಮತ್ತು ಸಂತ್ರಸ್ತರ ಪಾರ್ಥಿವ ಶರೀರವನ್ನು ಸ್ವದೇಶಕ್ಕೆ ತರಲು ಸಂಪೂರ್ಣ ಬೆಂಬಲವನ್ನು ಭರವಸೆ ನೀಡಿತ್ತು.
ಮೃತರಲ್ಲಿ ಕೇರಳದ 23, ತಮಿಳುನಾಡಿನ ಏಳು, ಉತ್ತರ ಪ್ರದೇಶದ ಮೂವರು, ಒಡಿಶಾದ ಇಬ್ಬರು ಮತ್ತು ಬಿಹಾರ, ಪಂಜಾಬ್, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಹರಿಯಾಣದಿಂದ ತಲಾ ಒಬ್ಬರು ಸೇರಿದ್ದಾರೆ.
ಘಟನೆ ಸಂಭವಿಸಿದ ದಿನವೇ ಕೇಂದ್ರ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಕುವೈತ್ ಗೆ ತೆರಳಿ ಗಾಯಗೊಂಡಿರುವ ಭಾರತೀಯರ ಆರೋಗ್ಯವನ್ನು ವಿಚಾರಿಸಿದ್ದಾರೆ ಅಲ್ಲದೆ ಕುವೈತ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಮೃತಪಟ್ಟಿರುವ ಭಾರತೀಯರ ದೇಹಗಳನ್ನು ಭಾರತಕ್ಕೆ ಕಳುಹಿಸಕೊಡುವ ಪ್ರಕ್ರಿಯೆಯನ್ನು ನಡೆಸಿದ್ದಾರೆ, ಇದರ ಬೆನ್ನಲ್ಲೇ ಭಾರತೀಯರ ಮೃತದೇಹವನ್ನು ತರಲು ಕೇಂದ್ರ ಸರಕಾರ ಭಾರತೀಯ ವಾಯುಪಡೆಯ ವಿಶೇಷ ವಿಮಾನವನ್ನು ಕಳುಹಿಸಿಕೊಟ್ಟಿದ್ದು ಇಂದು( ಶುಕ್ರವಾರ) ನಲವತ್ತೈದು ಭಾರತೀಯರ ಮೃತದೇಹವನ್ನು ಹೊತ್ತ ವಿಶೇಷ ವಿಮಾನ ಕುವೈತ್ ನಿಂದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಹಾರಾಟ ನಡೆಸಿದ್ದು ಮಧ್ಯಾಹ್ನ ಕೊಚ್ಚಿಗೆ ತಲುಪುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
A special IAF aircraft carrying mortal remains of 45 Indian victims in the fire incident in Kuwait has taken off for Kochi.
MoS @KVSinghMPGonda, who coordinated with Kuwaiti authorities ensuring swift repatriation, is onboard the aircraft pic.twitter.com/091hBNWzLL
— India in Kuwait (@indembkwt) June 13, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.