ಐಸಿಸ್ ಜತೆ ನಂಟು: ಗಗನಸಖೀ ಬಂಧನ
Team Udayavani, Oct 28, 2017, 6:50 AM IST
ಅಹ್ಮದಾಬಾದ್: ಐಸಿಸ್ ಉಗ್ರರ ಜತೆ ಕೈಜೋಡಿಸಿ ಅಹ್ಮದಾಬಾದ್‌ನಲ್ಲಿರುವ ಯಹೂದಿಗಳ ದೇಗುಲವೊಂದನ್ನು ಸ್ಫೋಟಿಸುವ ಷಡ್ಯಂತ್ರ ರೂಪಿಸಿದ್ದ ಆರೋಪದ ಮೇರೆಗೆ ಗಗನಸಖೀಯೊಬ್ಬಳನ್ನು ಗುಜರಾತ್‌ನ ಉಗ್ರ ನಿಗ್ರಹ ದಳ (ಎಟಿಎಸ್) ಬಂಧಿಸಿದೆ. ಸದ್ಯಕ್ಕೆ ಆಕೆಯ ಹೆಸರನ್ನು ಗೌಪ್ಯವಾಗಿಡಲಾಗಿದೆ.
ಐಸಿಸ್‌ನ ಕೆಲ ಉಗ್ರರು ಭಾರತದಲ್ಲಿ ಚಿನ್ನದ ಕಳ್ಳಸಾಗಣೆ ನಡೆಸಲೂ ಆಕೆ ನೆರವು ನೀಡು ತ್ತಿದ್ದಳೆಂದು ಆರೋಪಿಸಲಾಗಿದೆ. ಈ ಕುಕೃತ್ಯಗಳಿಗೆ ನೆರವು ನೀಡುತ್ತಿದ್ದ ಆಕೆಯ ಸಹವರ್ತಿ, ಸೂರತ್ ಮೂಲದ ಕ್ರಿಮಿನಲ್ ವಕೀಲ ಉಬೈದ್ ಮಿರ್ಜಾ, ಆತನ ಆಪ್ತ , ಲ್ಯಾಬ್ ಟೆಕ್ನೀಷಿಯನ್ ಆಗಿ ಕಾರ್ಯ ನಿರ್ವಹಿ ಸುತ್ತಿದ್ದ ಕಾಸೀಮ್ ಸ್ಟಿಂಬರ್‌ವಾಲಾ ಎಂಬಾತನನ್ನೂ ಬಂಧಿಸಲಾಗಿದೆ.
ಇತ್ತೀಚೆಗೆ, ಉಬೈದ್ ಮಿರ್ಜಾ, ತಮಿಳುನಾಡಿನ ವ್ಯಕ್ತಿಯೊಬ್ಬನ ಜತೆಗೆ ದೂರವಾಣಿಯಲ್ಲಿ ಮಾತುಕತೆ ನಡೆಸುತ್ತಾ, ತಾನು ತಮ್ಮ ಸ್ನೇಹಿತೆ ಗಗನ ಸಖೀಯ ಮೂಲಕ ಭಾರತಕ್ಕೆ ತರಿಸಿರುವ ಚಿನ್ನವನ್ನು ತಮಿಳುನಾಡಿಗೆ ಕಳುಹಿಸುವುದಾಗಿ ತಿಳಿಸಿದ. ಅಲ್ಲದೆ, ತಮ್ಮ ಮಾಲು ಮುಂಬೈ ಕಡೆಗೂ ರವಾನಿಸಬೇಕಿದೆ ಎಂದು ಸೂಚಿಸಿದ್ದ. ಈ ಕರೆಯನ್ನು ಟ್ರಾಪ್ ಮಾಡಿದ ಪೊಲೀಸರು, ಉಬೈದ್ ಹಾಗೂ ಆತನ ಸಹಚರನನ್ನು, ಗಗನಸಖೀಯನ್ನು ಬಂಧಿಸುವಲ್ಲಿ ಯಶಸ್ವಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WMO: 2025ರಲ್ಲೂ ದಾಖಲೆಯ ತಾಪಮಾನ: 10 ವರ್ಷಗಳಿಂದ ಹೆಚ್ಚುತ್ತಿದೆ ಬಿಸಿಯ ಮಾಪಕ
Wayanad ಭೂಕುಸಿತ ಭಾರೀ ಪ್ರಾಕೃತಿಕ ವಿಕೋಪ: 5 ತಿಂಗಳ ಬಳಿಕ ಕೇಂದ್ರ ಘೋಷಣೆ
Telgi stamp paper scam: ಕರ್ನಾಟಕದ ಓರ್ವ ಸೇರಿ 5 ಮಂದಿಗೆ ಸಜೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.