ಮತ್ತೆ ಶಾಕ್; ಏರ್ ಇಂಡಿಯಾದಿಂದ ಗಾಯಕ್ವಾಡ್ ಟಿಕೆಟ್ ಕ್ಯಾನ್ಸಲ್
Team Udayavani, Mar 28, 2017, 5:44 PM IST
ನವದೆಹಲಿ: ಏರ್ ಇಂಡಿಯಾ ಸಿಬ್ಬಂದಿಗೆ ಶಿವಸೇನೆಯ ಸಂಸದ ರವೀಂದ್ರ ಗಾಯಕ್ವಾಡ್ ಚಪ್ಪಲಿಯಿಂದ ಥಳಿಸಿದ ಪ್ರಕರಣದ ತಿಕ್ಕಾಟ ಇನ್ನೂ ಕೂಡಾ ಮುಂದುವರಿದಿದ್ದು, ಗಾಯಕ್ವಾಡ್ ಮಂಗಳವಾರ ಮುಂಬೈನಿಂದ ದೆಹಲಿಗೆ ಬುಕ್ ಮಾಡಿದ್ದ ಟಿಕೆಟ್ ಅನ್ನು ಏರ್ ಇಂಡಿಯಾ ಮತ್ತೆ ಕ್ಯಾನ್ಸಲ್ ಮಾಡಿದೆ.
ಶಿವಸೇನೆ ಮುಖಂಡ ಗಾಯಕ್ವಾಡ್ ಬುಧವಾರ ಮುಂಬೈನಿಂದ ದೆಹಲಿಗೆ ತೆರಳಲು ಟಿಕೆಟ್ ಕಾಯ್ದಿರಿಸಿದ್ದರು. ಆದರೆ ಏರ್ ಇಂಡಿಯಾ ಮಂಗಳವಾರ ಟಿಕೆಟ್ ಅನ್ನು ರದ್ದು ಮಾಡಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಆಸನದ ವಿಚಾರಕ್ಕಾಗಿ ಕಳೆದ ಗುರುವಾರ ಖ್ಯಾತೆ ತೆಗೆದಿದ್ದ ಶಿವಸೇನೆ ಸಂಸದ ರವೀಂದ್ರ ಗಾಯಕ್ವಾಡ್ ಏರ್ ಇಂಡಿಯಾದ ಮ್ಯಾನೇಜರ್ ಗೆ ಚಪ್ಪಲಿಯಿಂದ ಥಳಿಸಿದ್ದರು. ಈ ಘಟನೆ ಬಳಿಕ ಭಾರತೀಯ ವಿಮಾನ ಯಾನ ಒಕ್ಕೂಟ ಗಾಯಕ್ವಾಡ್ ವಿಮಾನಯಾನ ಸಂಚಾರಕ್ಕೆ ನಿಷೇಧ ಹೇರಿತ್ತು. ಆದರೆ ಶಿವಸೇನೆ ಪಕ್ಷ ಸಂಸದನ ಕೃತ್ಯವನ್ನು ಬೆಂಬಲಿಸಿತ್ತು. ಅಲ್ಲದೇ ಲೋಕಸಭೆಯಲ್ಲೂ ಸಂಸದನ ಪರವಾಗಿ ಸಮರ್ಥಿಸಿಕೊಂಡು ವಿಮಾನ ಯಾನ ಸಂಸ್ಥೆಯ ವಿರುದ್ದವೇ ಹಕ್ಕುಚ್ಯುತಿ ಮಂಡಿಸಿ ಕ್ಷಮೆಯಾಚಿಸುವಂತೆ ಆಗ್ರಹಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.