ಏರಿಂಡಿಯಾ ಉದ್ಯೋಗಿಗೆ ಲೈಂಗಿಕ ಕಿರುಕುಳ: ತನಿಖೆಗೆ ಸಚಿವ ಪ್ರಭು ಆದೇಶ
Team Udayavani, May 29, 2018, 5:05 PM IST
ಹೊಸದಿಲ್ಲಿ : ಏರಿಂಡಿಯಾ ವಿಮಾನ ಸಂಸ್ಥೆಯ ಹಿರಿಯ ಎಕ್ಸಿಕ್ಯುಟಿವ್ ವಿರುದ್ಧ ಏರ್ ಹೋಸ್ಟೆಸ್ ಒಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಕಳೆದ ಆರು ವರ್ಷಗಳಿಂದ ಆತ ನನ್ನನ್ನು ಲೈಂಗಿಕವಾಗಿ ಸತಾಯಿಸುತ್ತಿದ್ದಾನೆ; ಹಿಂಸೆ, ತಾರತಮ್ಯ ಎಸಗುತ್ತಿದ್ದಾನೆ ಎಂದಾಕೆ ದೂರಿದ್ದಾರೆ. ಸಂತ್ರಸ್ತ ಏರ್ ಹೋಸ್ಟೆಸ್ ಕೆಲವು ದಶಕಗಳಿಂದ ಏರಿಂಡಿಯಾದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
‘ನಾನು ಅನುಭವಿಸುತ್ತಿರುವ ಪಾಡನ್ನು ನನ್ನ ಮಹಿಳಾ ಸಹೋದ್ಯೋಗಿಗಳು ಕೂಡ ಅನುಭವಿಸುತ್ತಿದ್ದಾರೆ’ ಎಂದಾಕೆ ತನ್ನ ದೂರಿನಲ್ಲಿ ಹೇಳಿದ್ದಾರೆ.
ಕೇಂದ್ರ ನಾಗರಿಕ ವಾಯು ಯಾನ ಸಚಿವ ಸುರೇಶ್ ಪ್ರಭು ಅವರು ಈ ಆರೋಪದ ಬಗ್ಗೆ ಕೂಡಲೇ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.
ತಮ್ಮ ಆದೇಶದ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸುರೇಶ್ ಪ್ರಭು ಅವರು, “ಏರಿಂಡಿಯಾ ಸಿಎಂಡಿ ಗೆ ಈ ಬಗ್ಗೆ ಕೂಡಲೇ ತನಿಖೆ ನಡೆಸುವಂತೆ ಸೂಚಿಸಿದ್ದೇನೆ; ಅವಶ್ಯವಿದ್ದರೆ ಇನ್ನೊಂದು ಸಮಿತಿಯನ್ನು ರಚಿಸುತ್ತೇನೆ’ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.