ಏರ್ಇಂಡಿಯಾದಲ್ಲಿ ಇನ್ನು ಸಸ್ಯಾಹಾರ ಮಾತ್ರ
Team Udayavani, Jul 11, 2017, 10:36 AM IST
ಹೊಸದಿಲ್ಲಿ: ಕೇಂದ್ರ ಸರಕಾರದ ತೆಕ್ಕೆಯಿಂದ ಖಾಸಗಿಯವರ ಪಾಲಾಗುವ ಅಂಚಿನಲ್ಲಿರುವ ಏರ್ ಇಂಡಿಯಾದಲ್ಲಿ ಇನ್ನು ಪ್ರಯಾಣಿಕರಿಗೆ ಸಸ್ಯಾಹಾರ ಮಾತ್ರ ನೀಡಲಾಗುತ್ತದೆ. 52 ಸಾವಿರ ಕೋಟಿ ರೂ. ಸಾಲದ ಹೊರೆ ಹೊತ್ತಿರುವ ಸಂಸ್ಥೆಯಲ್ಲಿ ಖರ್ಚು-ವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ದೇಶದ ಒಳಗಿನ ವಿಮಾನಯಾನಕ್ಕೆ ಅದರಲ್ಲೂ ಎಕಾನಮಿ ಕ್ಲಾಸ್ನಲ್ಲಿ ಪ್ರಯಾಣಿಸುವವರಿಗೆ ಇದು ಅನ್ವಯ. ಬಿಸಿನೆಸ್ ಕ್ಲಾಸ್ನಲ್ಲಿ ಪ್ರಯಾಣಿಸುವವರಿಗೆ ಸಸ್ಯಾಹಾರ ಮತ್ತು ಮಾಂಸಾಹಾರದ ಆಯ್ಕೆ ಮುಂದುವರಿಯಲಿದೆ. ಸಿಬಂದಿ ಮೇಲಿನ ಹೊರೆ ತಗ್ಗಿಸುವುದಕ್ಕಾಗಿ 2015ರ ಡಿಸೆಂಬರ್ನಲ್ಲಿ ಸರಕಾರಿ ಸ್ವಾಮ್ಯದ ಸಂಸ್ಥೆ ದೇಶದ ಒಳಗೆ 90 ನಿಮಿಷದ ಒಳ ಗಿನ ವಿಮಾನಯಾನಕ್ಕೆ ಸಸ್ಯಾಹಾರದ ಅಡುಗೆ ನೀಡುವುದಾಗಿ ಘೋಷಿಸಿತ್ತು. ನಿರ್ಧಾರ ಸಮರ್ಥಿಸಿಕೊಂಡ ಹಿರಿಯ ಅಧಿ ಕಾರಿ, ಟೇಕಾಫ್, ಲ್ಯಾಂಡಿಂಗ್ ಹೊರತುಪಡಿಸಿ ಪ್ರಯಾಣದ ಅವಧಿ ಇರುವುದು ಕೇವಲ 30 ನಿಮಿಷ. ಈ ಅವಧಿಯಲ್ಲಿ ಪ್ರಯಾಣಿಕರಿಗೆ ಬೇಕಾದ್ದನ್ನು ಕೊಡುವುದು ಅಸಾಧ್ಯ. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.