ಬ್ಯಾಂಡೇಜ್ ಒಳಗೆ 26 ಲಕ್ಷ ಚಿನ್ನ: ವಿಮಾನ ಪ್ರಯಾಣಿಕ ಸೆರೆ
Team Udayavani, Nov 6, 2017, 4:26 PM IST
ಕೊಯಮುತ್ತೂರು : ಏರ್ ಅರೇಬಿಯ ವಿಮಾನದಲ್ಲಿ ಪ್ರಯಾಣಿಸಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಇಳಿದ ಪ್ರಯಾಣಿಕನೋರ್ವನಿಂದ ಕಸ್ಟಮ್ಸ್ ಅಧಿಕಾರಿಗಳು ಸುಮಾರು 26 ಲಕ್ಷ ರೂ. ಮೌಲ್ಯದ ಚಿನ್ನದ ಪುಡಿಯನ್ನು ವಶಪಡಿಸಿಕೊಂಡರು.
ನಸುಕಿನ 4.30ರ ವೇಳೆಗೆ ವಿಮಾನದಿಂದ ಇಳಿದು ಸಂಶಯಾಸ್ಪದ ರೀತಿಯಲ್ಲಿ ಅತ್ತಿಂದಿತ್ತ ಹೋಗುತ್ತಿದ್ದ ಕೇರಳ ಮೂಲದ ಈ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಡೆದು ಪ್ರಶ್ನಿಸಿದಾಗ ಆತನ ಬಳಿ ಅಕ್ರಮ ಸಾಗಾಟ ಚಿನ್ನದ ಪುಡಿ ಕಂಡುಬಂತು.
ಒಡನೆಯೇ ಅಧಿಕಾರಿಗಳು ಆತನನ್ನು ಬಂಧಿಸಿ ಆತನ ಬಳಿ ಇದ್ದ ಚಿನ್ನದ ಪುಡಿಯನ್ನು ವಶಕ್ಕೆ ತೆಗೆದುಕೊಂಡರು. ಈ ಪುಡಿಯನ್ನು ಆತನು ತನ್ನ ಎರಡೂ ಕಾಲುಗಳಿಗೆ ಕಟ್ಟಲ್ಪಟ್ಟಿದ್ದ ಬ್ಯಾಂಡೇಜ್ ಒಳಗಡೆ ಅವಿತಿರಿಸಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.