ದೆಹಲಿ ಮಾಲಿನ್ಯದಲ್ಲಿ ಸ್ವಲ್ಪಮಟ್ಟಿಗೆ ಸುಧಾರಣೆ
Team Udayavani, Nov 17, 2017, 7:20 AM IST
ನವದೆಹಲಿ: ದೆಹಲಿ ವಾಯುಮಾಲಿನ್ಯದಲ್ಲಿ ಅಲ್ಪ ಮಟ್ಟಿನ ಸುಧಾರಣೆ ಕಂಡಿದ್ದು, ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ಹೇರಿದ್ದ ನಿಷೇಧ ಹಿಂಪಡೆಯಲಾಗಿದೆ. ವಾಯುಮಾಲಿನ್ಯವು ತುರ್ತು ಪರಿಸ್ಥಿತಿ ಸನ್ನಿವೇಶಕ್ಕಿಂತ ಕೆಳಕ್ಕೆ ಇಳಿದಿದೆ.
ಟ್ರಕ್‌ಗಳಿಗೆ ನಗರ ಪ್ರವೇಶ ನಿಷೇಧ ಹಾಗೂ ಪಾರ್ಕಿಂಗ್ ಶುಲ್ಕ ಹೆಚ್ಚಳ ನಿರ್ಧಾರವನ್ನೂ ಹಿಂಪಡೆಯಲಾಗಿದೆ. ಈ ಸಂಬಂಧ ಸುಪ್ರೀಂಕೋರ್ಟ್ ನೇತೃತ್ವದ ಸಮಿತಿ ಆದೇಶ ಹೊರಡಿಸಿದೆ.
ಕೃಷಿ ತ್ಯಾಜ್ಯ ಖರೀದಿಗೆ ನಿರ್ಧಾರ: ಮಾಲಿನ್ಯಕ್ಕೆ ಕಾರಣವಾಗುವ ಕೃಷಿ ತ್ಯಾಜ್ಯ ಸುಡುವುದನ್ನು ತಡೆಯುವ ನಿಟ್ಟಿನಲ್ಲಿ ಕೃಷಿ ತ್ಯಾಜ್ಯ ಖರೀದಿಸಿ ತನ್ನ ವಿದ್ಯುತ್ ಘಟಕದಲ್ಲಿ ಉರುವಲಾಗಿ ಬಳಸಲು ಎನ್‌ಟಿಪಿಸಿ ನಿರ್ಧರಿಸಿದೆ. ಈ ಸಂಬಂಧ ಶೀಘ್ರದಲ್ಲೇ ಟೆಂಡರ್ ಕರೆಯುವುದಾಗಿ ಇಂಧನ ಸಚಿವ ಆರ್.ಕೆ.ಸಿಂಗ್ ಹೇಳಿದ್ದಾರೆ. ಟನ್‌ಗೆ 5,500 ರೂ. ದರದಲ್ಲಿ ಕೃಷಿ ತ್ಯಾಜ್ಯ ಖರೀದಿಸಲಿದೆ.
ಕೋಸ್ಟರಿಕಾ ರಾಯಭಾರಿಗೆ ಬೆಂಗಳೂರಲ್ಲಿ ಚಿಕಿತ್ಸೆ: ದೆಹಲಿ ಮಾಲಿನ್ಯದಿಂದಾಗಿ ಅಸ್ವಸ್ಥಗೊಂಡ ಕೋಸ್ಟರಿಕಾ ರಾಯಭಾರಿ ಮಾರಿಯೆಲಾ ಕ್ರೂಜ್ ಅಲ್ವರೆಜ್ ಬೆಂಗಳೂರಲ್ಲಿ ಚಿಕಿತ್ಸೆ ಪಡೆದಿ ದ್ದಾರೆ. ಈ ಬಗ್ಗೆ ಅವರು ಬ್ಲಾಗ್‌ನಲ್ಲಿ ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.