ಅಜಂತಾ-ಎಲ್ಲೋರಾ ಗುಹೆ ವಿಶ್ವ ದರ್ಜೆಗೆ

Team Udayavani, Jul 7, 2019, 3:14 PM IST

0607MUM52

ಮುಂಬಯಿ: 2019-20ರ ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 17 ಭಾರತೀಯ ಪ್ರವಾಸಿ ತಾಣಗಳನ್ನು ವಿಶ್ವ ದರ್ಜೆಯ ತಾಣವಾಗಿ ಅಭಿವೃದ್ಧಿಪಡಿಸುವುದಾಗಿ ಘೋಷಿಸಿದ್ದಾರೆ. ಈ ಸ್ಥಳಗಳಲ್ಲಿ ಮಹಾರಾಷ್ಟ್ರದ ಅಜಂತಾ-ಎಲ್ಲೋರಾ ಗುಹೆಗಳು ಕೂಡ ಸೇರಿವೆ ಎಂದು ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಜಂತಾ-ಎಲ್ಲೋರಾ ಸೇರಿದಂತೆ 17 ಪ್ರತಿಷ್ಠಿತ ಪ್ರವಾಸಿ ತಾಣಗಳನ್ನು ವಿಶ್ವ ದರ್ಜೆಯ ತಾಣವಾಗಿ ರೂಪಿಸಲು “ಮಾಸ್ಟರ್‌ ಪ್ಲಾನ್‌’ ಒಂದನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಹೇಳಿದರು. ಅಜಂತಾ-ಎಲ್ಲೋರಾದ ಗುಹೆಗಳು ಮಹಾರಾಷ್ಟ್ರದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಈ ಆಧಾರದ ಮೇಲೆ ಇದನ್ನು ಜಾಗತಿಕ ಪ್ರವಾಸಿ ನಕ್ಷೆಯಲ್ಲಿ ಗುರುತಿಸಲು ಉಪಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಈ ಯೋಜನೆಯ ಮೇಲೆ ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್‌ಐ), ಕೇಂದ್ರ ಮತ್ತು ರಾಜ್ಯ ಸರಕಾರ ಒಟ್ಟಾಗಿ ಕೆಲಸ ಮಾಡಲಿವೆ. ಅಜಂತಾ-ಎಲ್ಲೋರಾ ಸೇರಿದಂತೆ 17 ತಾಣಗಳನ್ನು ವಿಶ್ವ ಪ್ರವಾಸೋದ್ಯಮದ ದೃಷ್ಟಿಯಿಂದ ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಖಾಸಗಿ ಏಜೆನ್ಸಿಯಿಂದ “ಮಾಸ್ಟರ್‌ಪ್ಲಾನ್‌’ ಖಾಸಗಿ ಏಜೆನ್ಸಿ ಈ ಯೋಜನೆಯನ್ನು ಸಿದ್ಧಪಡಿಸುತ್ತಿದೆ. ಈ ಯೋಜನೆಯಡಿ ಅಜಂತಾ-ಎಲ್ಲೋರಾವನ್ನು ಎಲ್ಲ ರೀತಿಯಲ್ಲೂ ವಿಶ್ವ ದರ್ಜೆಯನ್ನಾಗಿ ಸೃಷ್ಟಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ರಸ್ತೆ ಮತ್ತು ಸಂಚಾರ ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಸಂಸ್ಕೃತಿ ಸಚಿವಾಲಯ ಒಟ್ಟಾಗಿ ಕೆಲಸ ಮಾಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಜಂತಾ-ಎಲ್ಲೋರಾ ಗುಹೆಗಳಿಗೆ ಭೇಟಿ ನೀಡುವ ಜನರ ಸೌಲಭ್ಯಗಳಿಗಾಗಿ ಪ್ರವಾಸೋದ್ಯಮ ಸಚಿವಾಲಯವು ಕಾರ್ಯನಿರ್ವಹಿಸಲಿದ್ದರೆ, ರಸ್ತೆ ಸಚಿವಾಲಯವು ಸ್ಥಳವನ್ನು ತಲುಪಲು ರಸ್ತೆಗಳ ದುರಸ್ತಿ ಬಗ್ಗೆ ನಿಗಾ ವಹಿಸಲಿದೆ. ಇದಲ್ಲದೆ, ಸಾಂಸ್ಕೃತಿಕ ಸಚಿವಾಲಯ ಕೂಡ ಸ್ಥಳದ ಅಭಿವೃದ್ಧಿಗೆ ತನ್ನ ಸೌಲಭ್ಯಗಳನ್ನು ಉಪಲಬ್ಧಗೊಳಿಸಲಿದೆ ಎಂದು ಅಧಿಕಾರಿ ಹೇಳಿದ್ದಾರೆ. ಯೋಜನೆಯ ವ್ಯಾಪ್ತಿಗೆ ಬರುವ ಎಲ್ಲಾ 17 ಸ್ಥಳಗಳನ್ನು ಸಮೀಕ್ಷೆ ಮಾಡಲಾಗಿದೆ ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯೋಜನೆಗೆ ಸಂಪೂರ್ಣ ಆಧಿಕಾರವನ್ನು ನೀಡಲು ಸಚಿವಾಲಯವು ಪ್ರವಾಸೋದ್ಯಮ ತಾಣಗಳ ಸಂಬಂಧಪಟ್ಟ ರಾಜ್ಯ ಸರಕಾರಗಳೊಂದಿಗೆ ಸಂಪರ್ಕದಲ್ಲಿದೆ.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.