ಪಬ್ ನಲ್ಲಿ ಜಗಳವಾಡಿ ಹೊಡೆತ ತಿಂದ್ರಾ ನಟ ಅಜಯ್ ದೇವಗನ್..?
Team Udayavani, Mar 29, 2021, 3:51 PM IST
ನವದೆಹಲಿ : ಕುಡಿದ ಮತ್ತಿನಲ್ಲಿ ಬಾಲಿವುಡ್ ನಟ ಅಜಯ್ ದೇವಗನ್ ಹೊಡೆತ ತಿಂದಿದ್ದಾರೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಎರಡು ಗುಂಪುಗಳ ನಡುವೆ ಜಗಳವಾಗಿದ್ದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅಜಯ್ ದೇವಗನ್ ಕೂಡ ಇದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ದೆಹಲಿಯ ಹೊರ ವಲಯದಲ್ಲಿರುವ ಏರೋ ಸಿಟಿ ಪಬ್ ನಲ್ಲಿ ಘಟನೆ ನಡೆದಿದೆ. ಆದ್ರೆ ಅಜಯ್ ದೇವಗನ್ ವಕ್ತಾರರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಇದು ಸತ್ಯಕ್ಕೆ ದೂರವಾದ ವಿಚಾರ. ಕಳೆದೆ 14 ತಿಂಗಳುಗಳಿಂದ ನಟ ಅಜಯ್ ದೇವಗನ್ ಆ ಪ್ರದೇಶಕ್ಕೆ ಭೇಟಿ ನೀಡಿಲ್ಲ ಎಂದಿದ್ದಾರೆ.
Not really sure if this is #ajaydevgan or not but #Kisanektamorcha agitation seems to be spreading up. Social media floating with this video that drunk @ajaydevgn got beaten up?? #RakeshTikait pic.twitter.com/Fv8j0kG5fv
— lalit kumar (@lalitkumartweet) March 28, 2021
ಈ ಬಗ್ಗೆ ಸ್ಟೇಟ್ ಮೆಂಟ್ ನೀಡಿರುವ ವಕ್ತಾರರು, ಮಾಧ್ಯಮಗಳು ಯಾವುದಾದರೂ ಸುದ್ದಿಯನ್ನು ಪ್ರಸಾರ ಮಾಡುವ ಮುನ್ನ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಪ್ರಕಟಮಾಡಿ. ಈ ವಿಡಿಯೋದಲ್ಲಿ ನಟ ಅಜಯ್ ದೇವಗನ್ ಇದ್ದಾರೆ ಎಂಬುದು ಸುಳ್ಳು ಎಂದಿದ್ದಾರೆ.
ಸದ್ಯ ಅಜಯ್ ದೇವಗನ್, ತನ್ಹಾಜಿ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಇದ್ದಾರೆ. ಈ ಕೆಲಸವನ್ನು ಬಿಟ್ಟು ಪಬ್ ಗೆ ನಟ ಹೋಗಿಲ್ಲ ಎಂದು ಅಜಯ್ ವಕ್ತಾರರು ಸ್ಪಷ್ಟಪಡಿಸಿದ್ದಾರೆ.
ಆ ವಿಡಿಯೋದಲ್ಲಿ ಇರುವುದು ಬಾಲಿವುಡ್ ನಟ ಅಜಯ್ ದೇವಗನ್ ಅಲ್ಲ. ಬದಲಿಗೆ ಕಾರು ಡಿಕ್ಕಿಯ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳವಾಗಿದ್ದು, ಆ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.