Instagram Liveನಲ್ಲಿ ಅಕ್ಷಯ್ ಕುಮಾರ್ ಬಹಿರಂಗಪಡಿಸಿದರು ಒಂದು ರಹಸ್ಯ: ಏನದು ?
Team Udayavani, Sep 10, 2020, 9:00 PM IST
ನವದೆಹಲಿ: ಬಾಲಿವುಡ್ ನಟ ಅಕ್ಷಯ್ ಕುಮಾರ್ ರಹಸ್ಯವೊಂದನ್ನು ಬಿಚ್ಚಿಟ್ಟಿದ್ದಾರೆ. ಇನ್ ಸ್ಟಾಗ್ರಾಂ ಲೈವ್ ನಲ್ಲಿ ಹುಮಾ ಖುರೇಶಿ ಮತ್ತು ಬೇರ್ ಗ್ರಿಲ್ಸ್ ಜೊತೆಗಿನ ಸಂವಾದದಲ್ಲಿ ತಾನು ಪ್ರತಿನಿತ್ಯ ಗೋಮೂತ್ರ ಸೇವಿಸುವುದಾಗಿ ತಿಳಿಸಿದ್ದಾರೆ.
ಬೇರ್ ಗ್ರಿಲ್ಸ್ ಜೊತೆಗಿನ ಇನ್ ಟು ದ ವೈಲ್ಡ್ ಕಾರ್ಯಕ್ರಮದಲ್ಲಿ ಅಕ್ಷಯ್ ಅತ್ಯದ್ಭುತ ಸಾಹಸ ಪ್ರದರ್ಶಿಸಿದ್ದರು. ಮರ ಮತ್ತು ಹಗ್ಗದ ಏಣಿಯನ್ನು ಹತ್ತಿ ಹೊಳೆಯನ್ನು ದಾಟುವುದರ ಜೊತೆಗೆ ಅಕ್ಷಯ್ ಕುಮಾರ್ ಅವರು elephant-poop ಚಹಾವನ್ನು ಸಹ ಸೇವಿಸಿದ್ದರು.
ಈ ಕುರಿತು ಆಶ್ಚರ್ಯ ವ್ಯಕ್ತಪಡಿಸಿದ ಹುಮಾ ಖುರೇಶಿ ಇದೆಲ್ಲಾ ಹೇಗೆ ಸಾಧ್ಯವಾಯಿತು ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರ ನೀಡಿದ ಅಕ್ಷಯ್, ಆಯುರ್ವೇದದ ಕಾರಣದಿಂದ ಪ್ರತಿದಿನ ಗೋಮೂತ್ರ ಸೇವಿಸುತ್ತೇನೆ ಎಂದು ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಇದೇ ಮೊದಲ ಬಾರಿಗೆ ಪ್ರಸ್ತಾಪಿಸಿದ್ದರಿಂದ ಅಭಿಮಾನಿಗಳಲ್ಲಿ ಕೂಡ ಆಶ್ಚರ್ಯ ವ್ಯಕ್ತವಾಗಿದೆ.
ವಿಶೇಷ ಚಹಾವನ್ನು ಸೇವಿಸುವಾಗ ನನಗೆ ಚಿಂತೆಯಾಗಲಿಲ್ಲ. ಯಾಕೆಂದರೇ ನಾನು ತುಂಬಾ ಉತ್ಸುಕನಾಗಿದ್ದೆ. ಆಯುರ್ವೇದ ಕಾರಣಗಳಿಗಾಗಿ, ನಾನು ಪ್ರತಿದಿನ ಗೋಮೂತ್ರವನ್ನು ಕುಡಿಯುತ್ತೇನೆ ಎಂದಿದ್ದಾರೆ.
ಇನ್ ಟು ದ ವೈಲ್ಡ್ ಕಾರ್ಯಕ್ರಮವು ಸೆಪ್ಟೆಂಬರ್ 11 ಮತ್ತು 14ರಂದು ಪ್ರಸಾರವಾಗಲಿದ್ದು, ಈ ಕಾರಣಕ್ಕಾಗಿ ಅಕ್ಷಯ್ ಕುಮಾರ್, ಹುಮಾ ಖುರೇಶಿ, ಬೇರ್ ಗ್ರಿಲ್ಸ್ ಇನ್ ಸ್ಟಾಗ್ರಾಂ ಲೈವ್ ನಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.