ಪಶ್ಚಿಮಘಟ್ಟ ಪರಿಸರ ಸೂಕ್ಷ್ಮ ವಲಯ: 6 ತಿಂಗಳಲ್ಲಿ ಅಧಿಸೂಚನೆ ಹೊರಡಿಸಿ
Team Udayavani, Sep 2, 2018, 6:00 AM IST
ಹೊಸದಿಲ್ಲಿ: ಪ. ಘಟ್ಟದಲ್ಲಿ ಘೋಷಿತ ಪರಿಸರ ಸೂಕ್ಷ್ಮ ವಲಯದ ಪ್ರಮಾಣ ಕಡಿಮೆ ಮಾಡದಂತೆ ಮತ್ತು ಇನ್ನು 6 ತಿಂಗಳಲ್ಲಿ ಅಧಿ ಸೂಚನೆ ಹೊರಡಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ (ಎನ್‌ಜಿಟಿ) ಆದೇಶಿಸಿದೆ. ಕೇರಳ ಹಾಗೂ ಕೊಡಗಿನಲ್ಲಿ ಉಂಟಾದ ಪ್ರವಾಹ ಮತ್ತು ಭೂ
ಕುಸಿತಕ್ಕೆ ಪ. ಘಟ್ಟದಲ್ಲಿ ಉಂಟಾ ಗಿರುವ ಪರಿಸರ ಹಾನಿಯೇ ಕಾರಣ ಎಂದು ಪರಿಸರ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಎನ್‌ಜಿಟಿ ಈ ಆದೇಶ ನೀಡಿದೆ. ಸದ್ಯ ಕರ್ನಾಟಕ ಸಹಿತ ಆರು ರಾಜ್ಯಗಳಲ್ಲಿನ 56,825 ಚದರ ಕಿ.ಮೀ. ಭೂ ಭಾಗವನ್ನು ಪರಿಸರ ಸೂಕ್ಷ್ಮ ವಲಯ ಎಂದು ಪರಿಗಣಿಸಲಾಗಿದೆ. ಅಲ್ಲದೆ ಕರಡು ಅಧಿಸೂಚನೆ ಯಲ್ಲಿ ಯಾವುದೇ ಬದಲಾವಣೆ ಮಾಡದೆ ಮುಂದಿನ ಆರು ತಿಂಗಳಲ್ಲಿ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದೂ ಎನ್‌ಜಿಟಿ ಆದೇಶಿಸಿದೆ. ಗೋವಾ ಫೌಂಡೇಶನ್ ಸಲ್ಲಿಸಿದ ದೂರಿನ ವಿಚಾರಣೆ ವೇಳೆ ಈ ಆದೇಶ ನೀಡಿರುವ ಎನ್‌ಜಿಟಿ, ಗುರುತಿಸಲಾದ ಭೂಭಾಗದಲ್ಲಿ ಇಳಿಕೆ ಮಾಡುವುದಾದಲ್ಲಿ ಮೊದಲು ತನ್ನ ಅನುಮತಿ ಪಡೆಯಬೇಕು ಎಂದೂ ಸೂಚಿಸಿದೆ.
ಪ. ಘಟ್ಟ ವಲಯ ಸಂರಕ್ಷಣೆ ಕುರಿತಂತೆ ಡಾ| ಕಸ್ತೂರಿರಂಗನ್ ವರದಿ ಆಧರಿಸಿ 2017ರ ಫೆ.27 ರಂದು ಅರಣ್ಯ ಮತ್ತು ಹವಾಮಾನ ವೈಪರೀತ್ಯ ಸಚಿವಾಲಯವು 56,825 ಚ.ಕಿ.ಮೀ. ವ್ಯಾಪ್ತಿಯ ಭೂಭಾಗವನ್ನು ಪರಿಸರ ಸೂಕ್ಷ್ಮ ವಲಯ ಎಂಬುದಾಗಿ ಘೋಷಿಸುವ ಕುರಿತು ಕರಡು ಅಧಿಸೂಚನೆ ಹೊರಡಿಸಿತ್ತು. ಇದಕ್ಕೆ ಪ. ಘಟ್ಟ ವ್ಯಾಪ್ತಿಗೆ ಬರುವ ಕರ್ನಾಟಕ, ಗುಜರಾತ್, ಕೇರಳ, ಮಹಾರಾಷ್ಟ್ರ, ಗೋವಾ ಹಾಗೂ ತಮಿಳುನಾಡು ರಾಜ್ಯಗಳಿಂದ ಆಕ್ಷೇಪಣೆ ಕೇಳಿತ್ತು. ಇಸ್ರೋ ಮಾಜಿ ಮುಖ್ಯಸ್ಥ ಕೆ. ಕಸ್ತೂರಿರಂಗನ್ ಸಮಿತಿ 2013ರಲ್ಲಿ ಸಲ್ಲಿಸಿದ್ದ ವರದಿಯಲ್ಲಿ 59,940 ಚ. ಕಿ.ಮೀ. ಭೂಭಾಗವನ್ನು ಪರಿಸರ ಸೂಕ್ಷ್ಮ ವಲಯ ಎಂದು ಗುರುತಿಸಲಾಗಿತ್ತಾದರೂ 2017ರಲ್ಲಿ ಕರಡು ಅಧಿಸೂಚನೆ ಹೊರಡಿಸು ವಾಗ ಈ ಪೈಕಿ ಕೆಲವು ಪ್ರದೇಶಗಳನ್ನು ಕೈಬಿಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.