ಅಲಿಗಢದ ಉದ್ವಿಗ್ನ ಇಂಟರ್ನೆಟ್ ಸೇವೆ ಸ್ಥಗಿತ
Team Udayavani, Jun 11, 2019, 6:10 AM IST
ಅಲಿಗಢ: ಉತ್ತರಪ್ರದೇಶದ ಅಲಿಗಢದಲ್ಲಿ 3 ವರ್ಷದ ಬಾಲಕಿಯ ಭೀಕರ ಕೊಲೆ ಪ್ರಕರಣ ಸಂಬಂಧ ಉಂಟಾಗಿರುವ ಉದ್ವಿಗ್ನ ಸ್ಥಿತಿ ಇನ್ನೂ ತಣ್ಣಗಾಗಿಲ್ಲ.
ಮಗುವಿನ ಬೀಭತ್ಸ ಕೊಲೆ ಖಂಡಿಸಿ ಮಹಾಪಂಚಾಯತ್ ನಡೆಸಲು ಬಲಪಂಥೀಯ ಸಂಘಟನೆಗಳು ನಡೆಸಿದ ಯತ್ನಕ್ಕೆ ರವಿವಾರ ಪೊಲೀಸರು ಅಡ್ಡಿಪಡಿಸಿದ ಅನಂತರ, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಟಪ್ಪಾಲ್ ಪ್ರದೇಶದಲ್ಲಿ ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಲಾಗಿದ್ದು, ಹೆಚ್ಚುವರಿ ಪಡೆಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಟಪ್ಪಾಲ್‌ನಲ್ಲಿ ಕೋಮು ಹಿಂಸಾಚಾರ ನಡೆಯುವ ಸಾಧ್ಯತೆ ಇರುವ ಕಾರಣ, ನಿಗಾ ವಹಿಸಲಾಗಿದೆ. ಅಲ್ಲದೆ ಇಲ್ಲಿ ನಿಷೇಧಾಜ್ಞೆ ಹೇರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಕಳುಹಿಸುತ್ತಿದ್ದು, ಅಂಥವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಿದ್ದೇವೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಪರಿಹಾರಕ್ಕೆ ಕಾಂಗ್ರೆಸ್ ಒತ್ತಾಯ: ಇದೇ ವೇಳೆ, ಬಾಲಕಿಯ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ರಕ್ಷಣೆ ಒದಗಿಸಬೇಕೆಂದು ಕಾಂಗ್ರೆಸ್‌ನ ದಿಲ್ಲಿ ಘಟಕವು ಕೋರಿದೆ. ಜತೆಗೆ, ಮಾನವ ಹಕ್ಕುಗಳ ಆಯೋಗಕ್ಕೂ ದೂರು ನೀಡಿದೆ. ಸಂತ್ರಸ್ತೆಯ ತಂದೆಯು ಆರೋಪಿಯಿಂದ ಪಡೆದಿದ್ದ 10 ಸಾವಿರ ರೂ. ಮರುಪಾವತಿ ಮಾಡಲಿಲ್ಲ ಎಂಬ ಕಾರಣಕ್ಕೆ, ಆರೋಪಿಯು ಬಾಲಕಿಯನ್ನು ಅಪಹರಿಸಿ, ಭೀಕರವಾಗಿ ಹತ್ಯೆಗೈದಿದ್ದ.
ಪ್ರಧಾನಿಗೆ ಪತ್ರ
ಉತ್ತರಪ್ರದೇಶದ ಅಲಿಗಢದಲ್ಲಿ 3 ವರ್ಷದ ಬಾಲಕಿಯ ಭೀಕರ ಹತ್ಯೆಗೆ ಸಂಬಂಧಿಸಿ, ತಪ್ಪಿತಸ್ಥರಿಗೆ ಮರಣ ದಂಡನೆ ವಿಧಿಸುವಂತೆ ಆಗ್ರಹಿಸಿ ದಿಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಸೋಮವಾರ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. 12ರೊಳಗಿನ ಹೆಣ್ಣುಮಕ್ಕಳ ಅತ್ಯಾಚಾರಿ ಗಳಿಗೆ ಗಲ್ಲುಶಿಕ್ಷೆ ವಿಧಿಸುವ ಸುಗ್ರೀವಾಜ್ಞೆ ಹೊರಡಿಸಿದ ಬಳಿಕ, ಸರಕಾರವು ಇಂಥ ಹೀನ ಕೃತ್ಯಗಳನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ
Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
MUST WATCH
ಹೊಸ ಸೇರ್ಪಡೆ
Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ
Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು
IPL Mega Auction: ನ.24 ಮತ್ತು 25 ಜೆಡ್ಡಾದಲ್ಲಿ ಐಪಿಎಲ್ ಹರಾಜು
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.