ಎರಡು ತಿಂಗಳ ಉಚಿತ ಪಡಿತರ, ಟ್ಯಾಕ್ಸಿ ಡ್ರೈವರ್ ಗಳಿಗೆ 5000 ರೂ.: ಮುಖ್ಯಮಂತ್ರಿ ಕೇಜ್ರಿವಾಲ್
Team Udayavani, May 4, 2021, 1:04 PM IST
ನವದೆಹಲಿ: ಲಾಕ್ಡೌನ್ನಿಂದಾಗಿ ಸಂಕಷ್ಟದಲ್ಲಿರುವ ರಾಜ್ಯದ ಜನರಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೆಲವೊಂದು ಸೌಲಭ್ಯಗಳನ್ನು ಘೋಷಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಕೇಜ್ರಿವಾಲ್, ರಾಜ್ಯದ ಎಲ್ಲ ಆಟೋರಿಕ್ಷಾ ಹಾಗೂ ಟ್ಯಾಕ್ಸಿ ಡ್ರೈವರ್ ಗಳಿಗೆ ಆರ್ಥಿಕ ಬೆಂಬಲ ನೀಡಿದ್ದಾರೆ. ಆಟೋರಿಕ್ಷಾ ಹಾಗೂ ಟ್ಯಾಕ್ಸಿ ಡ್ರೈವರ್ ಗಳಿಗೆ ತಲಾ 5000 ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ. ಕೋವಿಡ್ನಿಂದಾಗಿ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಡ್ರೈವರ್ ಗಳಿಗೆ ಈ ಹಣ ಸಹಾಯಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.
ಅದೇ ರೀತಿ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಮುಂದಿನ ಎರಡು ತಿಂಗಳು ಉಚಿತವಾಗಿ ಪಡಿತರ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಹಾಗಂತ ಎರಡು ತಿಂಗಳ ವರೆಗೆ ಲಾಕ್ ಡೌನ್ ಮುಂದುವರೆಯುವುದಿಲ್ಲ. ಇದು ಕೇವಲ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಎರಡು ತಿಂಗಳು ಪಡಿತರ ನೀಡಲಾಗುತ್ತದೆ. ಈ ಸೌಲಭ್ಯವನ್ನು 72 ಜನರು ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೋವಿಡ್ ಮಿತಿ ಮೀರಿ ಹರಡುತ್ತಿದೆ. ಕೋವಿಡ್ ಸೋಂಕಿನ ಸರಪಳಿ ತುಂಡರಿಸುವ ನಿಟ್ಟಿನಲ್ಲಿ ಲಾಕ್ ಡೌನ್ ಘೋಷಣೆಯಾಗಿದೆ. ಅಲ್ಲಿಯ ಸರ್ಕಾರ ಕೋವಿಡ್ ವಿರುದ್ಧದ ಹೋರಾಟ ಚುರುಕುಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.