ಕೃಷಿ ಕಾಯ್ದೆ ವಿರೋಧಿಸಿ ಡಿ.14ರಂದು ರೈತ ಮುಖಂಡರಿಂದ ಉಪವಾಸ ಸತ್ಯಾಗ್ರಹ: ವರದಿ
Team Udayavani, Dec 12, 2020, 7:57 PM IST
ನವದೆಹಲಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ ಎಲ್ಲಾ ರೈತ ಮುಖಂಡರು ಡಿಸೆಂಬರ್ 14 ರಂದು ದೆಹಲಿಯ ಸಿಂಘು ಗಡಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ರೈತ ಮುಖಂಡರೊಬ್ಬರ ಹೇಳಿಕೆಯನ್ನು ಆಧರಿಸಿ ಸುದ್ದಿ ಸಂಸ್ಥೆ ಪಿಟಿಐ ಶನಿವಾರ ವರದಿ ಮಾಡಿದೆ.
ತಮ್ಮ ಬೇಡಿಕೆಗಳಿಗೆ ಈಡೇರಿಕೆಗಾಗಿ ಆಗ್ರಹಿಸಿರುವ ರೈತರು ಸರ್ಕಾರ ಮಾತುಕತೆ ನಡೆಸಲು ಬಯಸಿದರೆ, ನಾವು ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ. ಆದರೇ, ಮೂರು ಕೃಷಿ ಸಂಬಂಧಿತ ಕಾಯ್ದೆಗಳನ್ನು ರದ್ದು ಮಾಡುವ ಕುರಿತು ಮೊದಲು ಚರ್ಚಿಸಬೇಕು ಎಂದು ತಿಳಿಸಿದ್ದಾರೆ. ಇದು ಸಾಧ್ಯವಾಗದಿದ್ದಲ್ಲಿ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲಾಗವುದು ಎಂದು ಎಚ್ಚರಿಸಿದ್ದಾರೆ.
ಈ ಕುರಿತು ಮಾತನಾಡಿದ ರೈತ ಮುಖಂಡ ಕಮಲ್ ಪ್ರೀತ್ ಸಿಂಗ್, ರಾಜಸ್ಥಾನದ ಶಹಜಾನ್ ಪುರದಿಂದ ಜೈಪುರ – ದೆಹಲಿ ಹೆದ್ದಾರಿಯಲ್ಲಿ ನಾಳೆ (ಡಿ. 13) ಬೆಳಗ್ಗೆ 11 ಗಂಟೆಗೆ ಸಾವಿರಾರು ರೈತರು ಟ್ರ್ಯಾಕ್ಟರ್ ಮೂಲಕ ದೆಹಲಿ ಚಲೋ ಮೆರವಣಿಗೆಯನ್ನು ಆರಂಭಿಸಲಿದ್ದಾರೆ. ಆ ಮೂಲಕ ಪ್ರತಿಭಟನೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲಾಗುವುದು. ಈ ವೇಳೆ ಡಿಸೆಂಬರ್ 14ರಂದು ರೈತ ಮುಖಂಡರು ಬೆಳಗ್ಗೆ 8 ರಿಂದ ಸಂಜೆ 5 ರವರೆಗೂ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಕಮಲ್ ಪ್ರೀತ್ ಸಿಂಗ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ಇದನ್ನೂ ಓದಿ: ತೀವ್ರ ಸ್ವರೂಪ ಪಡೆದ ಸಾರಿಗೆ ನೌಕರರ ಮುಷ್ಕರ: ಅಧಿಕಾರಿಗಳ ಮನವಿ ಯತ್ನ ವಿಫಲ
ಸೆಪ್ಟೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಕಳೆದ 17 ದಿನಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
U. T. Khader: ಹೆಬ್ಟಾಳ್ಕರ್-ಸಿ.ಟಿ. ರವಿ ಪ್ರಕರಣ ಹಕ್ಕು ಭಾದ್ಯತಾ ಸಮಿತಿಗೆ: ಖಾದರ್
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.