ಉತ್ತರಪ್ರದೇಶ: ದುಷ್ಕರ್ಮಿಗಳ ಗುಂಡಿಗೆ ಬಿಎಸ್ಪಿ ಮುಖಂಡ ಶಮಿ ಬಲಿ
Team Udayavani, Mar 20, 2017, 11:53 AM IST
ಲಕ್ನೋ: ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಎಸ್ಪಿ ಮುಖಂಡ ಮೊಹಮ್ಮದ್ ಶಮಿಯನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದ ಘಟನೆ ಉತ್ತರಪ್ರದೇಶದ ಅಲಹಾಬಾದ್ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ದುಷ್ಕರ್ಮಿಗಳು ಪರಾರಿಯಾಗಿದ್ದು, ಅವರನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೊಹಮ್ಮದ್ ಶಮಿ ಅವರು ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಹಂತಕರು ಗುಂಡಿಟ್ಟು ಹತ್ಯೆಗೈದಿದ್ದಾರೆ.
ಶಮಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿ ಹೇಳಿದೆ. ಘಟನೆಯ ನಂತರ ಉದ್ರಿಕ್ತ ಜನರು ಅಲಹಾಬಾದ್, ಫೈಜಾಬಾದ್ ಗಡಿ ರಸ್ತೆಯನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ನೂತನವಾಗಿ ಅಸ್ತಿತ್ವಕ್ಕೆ ಬಂದ ಬಿಜೆಪಿ ನೇತೃತ್ವದ ಯೋಗಿ ಆದಿತ್ಯನಾಥ್ ಸರ್ಕಾರದ ಕಾರ್ಯವೈಖರಿ ಬಗ್ಗೆ ಜನರು ಅಸಮಾಧಾನವ್ಯಕ್ತಪಡಿಸಿರುವುದಾಗಿ ಎಬಿಪಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.