ಸುಪ್ರೀಂ ಮೊರೆ ಹೋದ ಮೈತ್ರಿಪಕ್ಷಗಳು


Team Udayavani, Jul 20, 2019, 3:00 AM IST

Udayavani Kannada Newspaper

ನವದೆಹಲಿ: ರಾಜ್ಯ ರಾಜಕೀಯ ಬಿಕಟ್ಟು ಸದ್ಯಕ್ಕಂತೂ ಕೊನೆಗೊಳ್ಳುವ ಲಕ್ಷಣ ಗೋಚರಿಸುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿರುವ ನಡುವೆಯೇ, ಅದಕ್ಕೆ ಪುಷ್ಟಿ ನೀಡುವಂತೆ ಮತ್ತೂಮ್ಮೆ ಚೆಂಡು ಸುಪ್ರೀಂಕೋರ್ಟ್‌ ಅಂಗಳವನ್ನು ತಲುಪಿದೆ.

ರಾಜ್ಯ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶುಕ್ರವಾರ ಸುಪ್ರೀಂಕೋರ್ಟ್‌ಗೆ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು, ರಾಜಕೀಯ ಗೊಂದಲವು ಇನ್ನಷ್ಟು ದಿನಗಳ ಕಾಲ ಮುಂದುವರಿಯುವ ಸುಳಿವು ನೀಡಿದೆ. 15 ಮಂದಿ ಅತೃಪ್ತ ಶಾಸಕರಿಗೆ ಸಂಬಂಧಿಸಿ ಜುಲೈ 17ರಂದು ಸುಪ್ರೀಂಕೋರ್ಟ್‌ ನೀಡಿದ್ದ ಮಧ್ಯಂತರ ಆದೇಶ ಕುರಿತು ಸ್ಪಷ್ಟನೆ ನೀಡುವಂತೆ ಕೋರಿ ಕರ್ನಾಟಕ ಕಾಂಗ್ರೆಸ್‌ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಇನ್ನೊಂದೆಡೆ, ವಿಶ್ವಾಸಮತ ಯಾಚನೆಗೆ ಸಂಬಂಧಿಸಿದ ಚರ್ಚೆ ಹೇಗೆ ನಡೆಯಬೇಕೆಂದು ವಿಧಾನಸಭೆಗೆ ಸೂಚಿಸುವ ಅಧಿಕಾರ ರಾಜ್ಯಪಾಲರಿಗಿಲ್ಲ ಎಂದು ಹೇಳಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರೂ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ವಿಪ್‌ ಜಾರಿ ನಮ್ಮ ಹಕ್ಕು: ತನ್ನ ಶಾಸಕರಿಗೆ ವಿಪ್‌ ಜಾರಿ ಮಾಡುವುದು ಆಯಾ ರಾಜಕೀಯ ಪಕ್ಷಗಳ ಸಾಂವಿಧಾನಿಕ ಹಕ್ಕು. ಅದನ್ನು ಕೋರ್ಟ್‌ ನಿರ್ಬಂಧಿಸುವಂತಿಲ್ಲ. ಆದರೆ ಜು.17ರಂದು ಸುಪ್ರೀಂಕೋರ್ಟ್‌ ನೀಡಿರುವ ಆದೇಶವು ಪಕ್ಷದ ವಿಪ್‌ಗೆ ಅಡ್ಡಿಪಡಿಸುತ್ತಿದೆ.

ಸಂವಿಧಾನದ 10ನೇ ಶೆಡ್ನೂಲ್‌ ಪ್ರಕಾರ, ಶಾಸಕರಿಗೆ ವಿಪ್‌ ಜಾರಿ ಮಾಡುವ ಅಧಿಕಾರವನ್ನು ರಾಜಕೀಯ ಪಕ್ಷಕ್ಕೆ ನೀಡಲಾಗಿದೆ. ಸಂವಿಧಾನದಡಿ ಸಿಕ್ಕಿರುವ ಈ ಹಕ್ಕಿಗೆ ಯಾವುದೇ ಷರತ್ತು ಹಾಕಿ ಅಥವಾ ನಿರ್ಬಂಧ ಹೇರಿ ಕತ್ತರಿ ಹಾಕಲಾಗದು.

ಹೀಗಾಗಿ, ಜು.17ರಂದು ನ್ಯಾಯಾಲಯವು ನೀಡಿರುವ ಆದೇಶವು, ರಾಜಕೀಯ ಪಕ್ಷಗಳಿಗೆ ನೀಡಿರುವ ಹಕ್ಕುಗಳಿಗೆ ಸಂಬಂಧಿಸಿದ್ದಲ್ಲ ಎಂಬುದನ್ನು ನ್ಯಾಯಾಲಯವೇ ಸ್ಪಷ್ಟಪಡಿಸಬೇಕು. ಅಂದಿನ ಆದೇಶದ ಕುರಿತು ನಮಗೆ ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್‌ ಅರ್ಜಿಯಲ್ಲಿ ಕೋರಿದೆ.

ಗೊಂದಲ ಮೂಡಿಸಿದ್ದ ಆದೇಶ: ತಮ್ಮ ರಾಜೀನಾಮೆಯನ್ನು ಸ್ಪೀಕರ್‌ ಅಂಗೀಕರಿಸುತ್ತಿಲ್ಲ ಎಂದು ಆರೋಪಿಸಿ ಅತೃಪ್ತ ಶಾಸಕರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ಜು.17ರಂದು ಈ ಬಗ್ಗೆ ಆದೇಶ ಹೊರಡಿಸಿದ್ದ ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠ, “ಬಂಡಾಯ ಶಾಸಕರಿಗೆ ವಿಧಾನಸಭೆ ಕಲಾಪಕ್ಕೆ ಹಾಜರಾಗಲೇಬೇಕು ಎಂದು ಯಾರೂ ಒತ್ತಡ ಹೇರುವಂತಿಲ್ಲ.

ಸದನಕ್ಕೆ ಬರುವುದು, ಬಿಡುವುದು ಅವರ ವಿವೇಚನೆಗೆ ಬಿಟ್ಟಿದ್ದು’ ಎಂದು ಹೇಳಿತ್ತು. ಆದರೆ, ನ್ಯಾಯಾಲಯದ ಆದೇಶವು ಹಲವು ಗೊಂದಲಗಳಿಗೆ ಕಾರಣವಾಗಿದ್ದವು. ಈ ಆದೇಶದ ಪ್ರಕಾರ, ಅತೃಪ್ತ ಶಾಸಕರು ಸದನಕ್ಕೆ ಹಾಜರಾಗದಿದ್ದರೆ, ಅವರು “ವಿಪ್‌ ಉಲ್ಲಂಘನೆಯಿಂದ ವಿನಾಯ್ತಿ’ ಪಡೆಯುತ್ತಾರಾ, ಅನರ್ಹತೆಯ ಶಿಕ್ಷೆಯಿಂದ ಪಾರಾಗುತ್ತಾರಾ ಎಂಬ ಪ್ರಶ್ನೆ ಮೂಡಿದ್ದವು.

ಈ ಕುರಿತು ಭಿನ್ನ, ಭಿನ್ನ ಅಭಿಪ್ರಾಯಗಳೂ ಕೇಳಿ ಬಂದಿದ್ದವು. ಕೆಲವರು ಬಂಡಾಯ ಶಾಸಕರಿಗೆ ವಿಪ್‌ ಅನ್ವಯವಾಗುವುದಿಲ್ಲ ಎಂದರೆ, ಇನ್ನು ಕೆಲವರು ಸುಪ್ರೀಂಕೋರ್ಟ್‌ ಎಲ್ಲೂ “ವಿಪ್‌’ ಎಂಬ ಪದವನ್ನೇ ಆದೇಶದಲ್ಲಿ ಉಲ್ಲೇಖೀಸಿಲ್ಲ. ಹೀಗಾಗಿ, ವಿಪ್‌ ಅತೃಪ್ತರಿಗೆ ಅನ್ವಯವಾಗುತ್ತದೆ ಎಂದು ವಾದಿಸಿದ್ದರು.

ಸಿಎಂ ಅರ್ಜಿಯಲ್ಲಿ ಏನಿದೆ?: ವಿಶ್ವಾಸಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಒಂದಾದ ನಂತರ ಒಂದರಂತೆ ಗಡುವು ವಿಧಿಸಿದ್ದನ್ನು ಸಿಎಂ ಕುಮಾರಸ್ವಾಮಿ ಅರ್ಜಿಯಲ್ಲಿ ಪ್ರಶ್ನಿಸಿದ್ದಾರೆ. ಇಂತಿಷ್ಟು ಗಂಟೆಗೆ ವಿಶ್ವಾಸಮತ ಸಾಬೀತುಪಡಿಸಬೇಕು ಎಂದು ರಾಜ್ಯಪಾಲರು ಸಂದೇಶ ಕಳುಹಿಸಿದ್ದಾರೆ.

ಆದರೆ, ಈಗಾಗಲೇ ವಿಶ್ವಾಸಮತದ ಕುರಿತು ಚರ್ಚೆ ನಡೆಯುತ್ತಿರುವಾಗ ಇಂಥ ಸೂಚನೆ ನೀಡುವ ಅಧಿಕಾರ ರಾಜ್ಯಪಾಲರಿಗಿರುವುದಿಲ್ಲ. ಚರ್ಚೆ ಮುಗಿದ ಬಳಿಕವೇ ವಿಶ್ವಾಸಮತ ಸಾಬೀತು ನಡೆಯುತ್ತದೆ ಎಂದು ಸ್ಪೀಕರ್‌ ಅವರೇ ಸ್ಪಷ್ಟವಾಗಿ ತಿಳಿಸಿರುವಾಗ, ವಿಧಾನಸಭೆಗೆ ಆದೇಶಿಸುವ ಅಧಿಕಾರ ಗವರ್ನರ್‌ಗಿಲ್ಲ.

ಈ ಕುರಿತು ನಾನು ಈಗಾಗಲೇ ರಾಜ್ಯಪಾಲರಿಗೂ ಲಿಖೀತ ಮಾಹಿತಿ ನೀಡಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ರಾಜ್ಯದ ರಾಜ್ಯಪಾಲರ ನಡೆಯು ರಾಜ್ಯಪಾಲರ ಅಧಿಕಾರಕ್ಕೆ ಸಂಬಂಧಿಸಿದ ಕಾನೂನಿಗೆ ತದ್ವಿರುದ್ಧವಾಗಿದೆ ಎಂದೂ ಅವರು ಅರ್ಜಿಯಲ್ಲಿ ಉಲ್ಲೇಖೀಸಿದ್ದಾರೆ. ಇದೇ ವೇಳೆ, ಜು.17ರ ಸುಪ್ರೀಂಕೋರ್ಟ್‌ ಆದೇಶದ ಕುರಿತು ಸಿಎಂ ಕೂಡ ತಮ್ಮ ಅರ್ಜಿಯಲ್ಲಿ ಸ್ಪಷ್ಟನೆ ಕೋರಿದ್ದಾರೆ.

ಲೋಕಸಭೆಯಲ್ಲಿ ಕಾಂಗ್ರೆಸ್‌ ಗದ್ದಲ: ಕರ್ನಾಟಕದ ರಾಜಕೀಯ ಬಿಕ್ಕಟ್ಟು ಕುರಿತು ಪ್ರಸ್ತಾಪಿಸುವ ಮೂಲಕ ಲೋಕಸಭೆಯಲ್ಲಿ ಕಾಂಗ್ರೆಸ್‌ ಸದಸ್ಯರು ಶುಕ್ರವಾರ ಗದ್ದಲ ಎಬ್ಬಿಸಿದರು. ಎಲ್ಲೆಲ್ಲಿ ಕಾಂಗ್ರೆಸ್‌ ಆಡಳಿತವಿದೆಯೋ, ಅಂಥ ಎಲ್ಲ ರಾಜ್ಯಗಳಲ್ಲೂ ಸರ್ಕಾರಗಳನ್ನು ಉರುಳಿಸಲು ಬಿಜೆಪಿ ಸಂಚು ರೂಪಿಸಿದೆ ಎಂದು ಲೋಕಸಭೆ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಆರೋಪಿಸಿದರು.

ಕರ್ನಾಟಕದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ವಿಧಾನಸಭೆಯ ಸ್ವಾತಂತ್ರ್ಯದ ಹರಣವಾಗಿದ್ದು, ರಾಜ್ಯದಲ್ಲಿ ಪ್ರಜಾಸತ್ತೆಯ ಕೊಲೆ ನಡೆಯುತ್ತಿದೆ ಎಂದೂ ಚೌಧರಿ ಆರೋಪಿಸಿದರು. ಇದಕ್ಕೂ ಮುನ್ನ ಕಾಂಗ್ರೆಸ್‌ ಸಂಸದರು “ಪ್ರಜಾತಂತ್ರ ಉಳಿಸಿ’, “ನ್ಯಾಯ ಬೇಕು’ ಎಂಬ ಫ‌ಲಕಗಳನ್ನು ಹಿಡಿದು, ಸದನದ ಬಾವಿಗಿಳಿದು ಘೋಷಣೆ ಕೂಗಿದ್ದೂ ಕಂಡು ಬಂತು. ಕಾಂಗ್ರೆಸ್‌ ಸಂಸದರ ಪ್ರತಿಭಟನೆಗೆ ಡಿಎಂಕೆ ಸದಸ್ಯರೂ ಸಾಥ್‌ ನೀಡಿದರು.

ಶ್ರೀಮಂತ ಪಾಟೀಲ್‌ಗೆ ಭದ್ರತೆ: ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್‌ ಶಾಸಕ ಶ್ರೀಮಂತ ಪಾಟೀಲ್‌ಗೆ ಭದ್ರತೆ ಒದಗಿಸಿರುವುದಾಗಿ ಮುಂಬೈ ಪೊಲೀಸರು ತಿಳಿಸಿದ್ದಾರೆ. ಆರಂಭದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ನಂತರ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ. ಅವರಿಗೆ ಸೂಕ್ತ ಭದ್ರತೆ ಒದಗಿಸಲಾಗಿದ್ದು, ಹೇಳಿಕೆಯನ್ನೂ ದಾಖಲಿಸಿಕೊಳ್ಳಲಾಗಿದೆ. ಪಾಟೀಲ್‌ರನ್ನು ಭೇಟಿಯಾಗಿ ಹೇಳಿಕೆ ಪಡೆಯಲು ಕರ್ನಾಟಕದ ಪೊಲೀಸರಿಗೂ ಅವಕಾಶ ಕಲ್ಪಿಸಲಾಗಿದೆ ಎಂದೂ ಮುಂಬೈ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.