June 29ರಿಂದ ಅಮರನಾಥ ಯಾತ್ರೆ ಆರಂಭ: ಜಮ್ಮು-ಕಾಶ್ಮೀರದಲ್ಲಿ ಹೈ ಅಲರ್ಟ್
ಜಮ್ಮು-ಶ್ರೀನಗರ ರಾಹೆಯಲ್ಲಿ 360ಡಿಗ್ರಿ ಸಿಸಿ ಕ್ಯಾಮೆರಾ
Team Udayavani, Jun 26, 2024, 5:30 AM IST
ಶ್ರೀನಗರ: ಪ್ರಸಿದ್ಧ ಅಮರನಾಥ ಯಾತ್ರೆಯು ಜೂ.29ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಅಮರನಾಥ ಬೇಸ್‌ಕ್ಯಾಂಪ್‌ಗೂ 3 ಹಂತದ ಭದ್ರತೆ ಒದಗಿಸಲಾಗಿದ್ದು, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ 360 ಡಿಗ್ರಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಯಾತ್ರೆ ಸಾಗುವ ಹೆದ್ದಾರಿಯ ಸುರಕ್ಷತೆ ಖಾತರಿಗಾಗಿ ವಾಹನಗಳನ್ನು ಪರಿಶೀಲಿಸಲು 60 ಕ್ಯಾಮೆರಾಗಳು, ಬಾಡಿ ಸ್ಕ್ಯಾನರ್‌ಗಳನ್ನು ಅಳವಡಿಸಲಾಗಿದೆ. ಅಲ್ಲದೇ, ರಂಭಾನ್ ಜಿಲ್ಲೆಯ ಉಧಂಪುರದಿಂದ ಬನಿಹಾಲ್ ಮಾರ್ಗದವರೆಗೆ 360 ಡಿಗ್ರಿಯ 10 ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು, 24/7 ಕಂಟ್ರೋಲ್ ರೂಂ ರಚಿಸಲಾಗಿದೆ ಎಂದು ಎಸ್‌ಎಸ್‌ಪಿ ರೋಹಿತ್ ಬಾಸ್ಕೋಟ್ರಾ ಹೇಳಿದ್ದಾರೆ.
ಜಮ್ಮುವಿನ ಭಗವತಿ ನಗರವು ಯಾತ್ರಾರ್ಥಿಗಳ ಬೇಸ್‌ಕ್ಯಾಂಪ್ ಆಗಿರುವ ಹಿನ್ನೆಲೆಯಲ್ಲಿ ಅಲ್ಲಿಯೂ ಭದ್ರತೆ ಹೆಚ್ಚಿಸಲಾಗಿದ್ದು, ಯಾತ್ರಾರ್ಥಿಗಳ ಸುರಕ್ಷತೆಗಾಗಿ ತತ್‌ಕ್ಷಣದ ಪ್ರತಿಕ್ರಿಯೆ ತಂಡಗಳನ್ನೂ ರಚಿಸಲಾಗಿದೆ ಎಂದೂ ಹೇಳಿದ್ದಾರೆ.
ಏನೇನು ವ್ಯವಸ್ಥೆ?
– ಉಗ್ರ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ಗುಪ್ತಚರರ ನೇಮಕ
– ನೈಸರ್ಗಿಕ, ಮಾನವ ನಿರ್ಮಿತ ವಿಪತ್ತುಗಳ ನಿರ್ವಹಣೆಗೆ ಯೋಜನೆ
– ಗಡಿ ಪ್ರದೇಶಗಳಲ್ಲೂ ಭದ್ರತಾ ಸಿಬ್ಬಂದಿ ನಿಯೋಜನೆ
– ಗಸ್ತು, ಮೇಲ್ವಿಚಾರಣೆ ಹೆಚ್ಚಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.