ಅಮರನಾಥ ಪ್ರವಾಹದಲ್ಲಿ 15 ಮಂದಿ ಮಾತ್ರ ಸಾವು: ಮನೋಜ್ ಸಿನ್ಹಾ
Team Udayavani, Jul 15, 2022, 7:50 AM IST
ಶ್ರೀನಗರ: ಅಮರನಾಥ ದೇಗುಲಕ್ಕೆ ತೆರಳುವ ಬೇಸ್ ಕ್ಯಾಂಪ್ ಸಮೀಪ ಜು. 8ರಂದು ಉಂಟಾಗಿದ್ದ ಹಠಾತ್ ಪ್ರವಾಹಕ್ಕೆ ಸಂಬಂಧಿಸಿದಂತೆ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿದೆ. ಒಟ್ಟು 15 ಮಂದಿ ಅಸುನೀಗಿದ್ದಾರೆ ಮತ್ತು ಯಾರೂ ನಾಪತ್ತೆಯಾಗಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.
ಕೇಂದ್ರಾಡಳಿತ ಪ್ರದೇಶ ನೀಡಿದ್ದ ಸಹಾಯವಾಣಿಗಳಿಗೆ 200ಕ್ಕೂ ಅಧಿಕ ಕರೆಗಳು ಬಂದಿವೆ. ಕೆಲವು ಯಾತ್ರಿಕರ ವಿವರ ಪರಿಶೀಲಿಸಲಾಗಿದೆ ಮತ್ತು ಕೆಲವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದುದರಿಂದ ಅವರ ಇರವು ಪತ್ತೆ ಹಚ್ಚಲು ಕಷ್ಟವಾಗಿತ್ತು ಎಂದಿದ್ದಾರೆ.
ಘಟನೆಯಲ್ಲಿ ಒಟ್ಟು 55 ಮಂದಿ ಗಾಯಗೊಂಡಿದ್ದಾರೆ ಮತ್ತು ಈ ಪೈಕಿ ಇಬ್ಬರು ಇನ್ನೂ ಆಸ್ಪತ್ರೆಯಲ್ಲಿದ್ದಾರೆ. ಉಳಿದವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಅಸುನೀಗಿದ 14 ಮಂದಿಯ ಮೃತದೇಹಗಳನ್ನು ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದಿದ್ದಾರೆ.
ಯಾತ್ರೆ ರದ್ದು: ಈ ನಡುವೆ ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಗುರುವಾರ ಪಹಲ್‌ಗಾಂವ್ ಮತ್ತು ಬಲ್ತಾಲ್ ಮೂಲಕ ತೆರಳುವ ಯಾತ್ರೆ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಇನ್ನೊಂದೆಡೆ 2 ಪ್ರತ್ಯೇಕ ಘಟನೆಗಳಲ್ಲಿ ಯಾತ್ರೆಗೆ ತೆರಳಿದ್ದ ವಾಹನಗಳು ಅಪಘಾತಕ್ಕೀಡಾಗಿ 13 ಮಂದಿ ಗಾಯಗೊಂಡಿದ್ದಾರೆ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.