ಅಮರನಾಥ ಯಾತ್ರೆಗೆ ಮೆಹಬೂಬ ಮುಫ್ತಿ ಕ್ಯಾತೆ : ಸ್ಥಳೀಯರ ಬದುಕು ತೀವ್ರ ಬಾಧಿತ !
Team Udayavani, Jul 8, 2019, 11:12 AM IST
ಹೊಸದಿಲ್ಲಿ : ಅಮರನಾಥ ಯಾತ್ರೆಗೆ ಸಂಬಂಧಿಸಿದ ಪೂರ್ವ ಸಿದ್ಧತೆಗಳು ಮತ್ತು ವ್ಯಾಪಕ ಭದ್ರತೆಯೇ ಮೊದಲಾದ ಕಾರಣಗಳಿಂದಾಗಿ ಸ್ಥಳೀಯರ ದಿನನಿತ್ಯದ ಬದುಕು ತೀವ್ರವಾಗಿ ಬಾಧಿತವಾಗಿದೆ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಆರೋಪಿಸಿದ್ದಾರೆ.
ಅಮರನಾಥ ಯಾತ್ರಿಕರಿಗೆ ಒಂದೆಡೆ ಉಗ್ರರ ಬೆದರಿಕೆ ಇದೆಯಾದರೆ ಇನ್ನೊಂದೆಡೆ ಪ್ರತಿಕೂಲ ಹವಾಮಾನವನ್ನು ಎದುರಿಸಬೇಕಾದ ಗುರುತರ ಸವಾಲು ಇದೆ. ಇವನ್ನು ನಿಭಾಯಿಸುವ ಸಲುವಾಗಿ ಸರಕಾರ ಪೂರ್ಣ ಪ್ರಮಾಣದಲ್ಲಿ ಯಾತ್ರಿಕರಿಗೆ ಮೂಲ ಸೌಕರ್ಯ, ಭದ್ರತೆ, ಸಾಗಾಟ, ಆಹಾರ, ವೈದ್ಯಕಿಯ ಇತ್ಯಾದಿ ವ್ಯವಸ್ಥೆಗಳನ್ನು ಮಾಡಬೇಕಾಗಿದೆ.
ಆದರೆ ಸರಕಾರದ ಈ ಸಮರೋಪಾದಿಯ ಕಾರ್ಯಾಚರಣೆಯಿಂದ ಸ್ಥಳೀಯರ ದಿನ ನಿತ್ಯದ ಬದುಕು ತೀವ್ರವಾಗಿ ಬಾಧಿತವಾಗಿದೆ ಎಂದು ಮೆಹಬೂಬ ಮುಫ್ತಿ ಟೀಕಿಸಿರುವುದು ವ್ಯಾಪಕ ಚರ್ಚೆ, ಖಂಡನೆಗೆ ಗುರಿಯಾಗಿದೆ.
ವರ್ಷಂಪ್ರತಿಯ 45 ದಿನಗಳ ಅಮರನಾಥ ಯಾತ್ರೆ ಕಳೆದ ವಾರ ಆರಂಭಗೊಂಡಿತ್ತು. ಸಮುದ್ರ ಮಟ್ಟದಿಂದ 3,888 ಮೀಟರ್ ಎತ್ತರದಲ್ಲಿರುವ ವಿಶ್ವ ಪ್ರಸಿದ್ಧ ಹಿಂದೂ ಗುಹಾಲಯಕ್ಕೆ ಕಳೆದ ವಾರ ಸುಮಾರು 67,000 ಯಾತ್ರಿಕರು ತಮ್ಮ ಪವಿತ್ರ ಯಾತ್ರೆಯನ್ನು ಆರಂಭಿಸಿದ್ದರು.
ಅಮರನಾಥ ಯಾತ್ರಿಕರ ಭದ್ರತೆಗಾಗಿ ಸರಕಾರ ಈ ಬಾರಿ ಅಭೂತಪೂರ್ವ ಸಂಖ್ಯೆಯ ಸಿಆರ್‌ಪಿಎಫ್ ಯೋಧರನ್ನು ಕರ್ತವ್ಯಕ್ಕೆ ನಿಯೋಜಿಸಿದೆ.
ಸಿಆರ್‌ಪಿಎಫ್ ಮಾತ್ರವಲ್ಲದೆ ಜಮ್ಮು ಕಾಶ್ಮೀರ ಪೊಲೀಸ್ ಪಡೆ ಕೂಡ ಈ ಬಾರಿ ಗಮನಾರ್ಹ ಸಂಖ್ಯೆಯಲ್ಲಿ ಅಮರನಾಥ ಯಾತ್ರಿಕರ ಭದ್ರತೆ ಮತ್ತು ಸೌಕರ್ಯಕ್ಕಾಗಿ ನಿಯೋಜಿತವಾಗಿದೆ.
ಈ ಬಗ್ಗೆ ಮೆಹಬೂಬ ಮುಫ್ತಿ ಎತ್ತಿರುವ ಆಕ್ಷೇಪದ ಮಾತುಗಳು ಹೀಗಿವೆ : ಅಮರನಾಥ ಯಾತ್ರೆ ಕಳೆದ ಅನೇಕ ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಆದರೆ ಈ ಬಾರಿ ಯಾತ್ರಿಕರ ಭದ್ರತೆ ಮತ್ತು ಸೌಕರ್ಯಕ್ಕಾಗಿ ವ್ಯಾಪಕ ಮತ್ತು ಪೂರ್ಣ ಪ್ರಮಾಣದ ವ್ಯವಸ್ಥೆ ಮಾಡಲಾಗಿದೆ. ಇದರಿಂದಾಗಿ ಸ್ಥಳೀಯ ಜನರ ದಿನನಿತ್ಯದ ಬದುಕು ತೀವ್ರವಾಗಿ ಬಾಧಿತವಾಗಿದೆ’ ಎಂದು ಹೇಳಿರುವುದನ್ನು ಉಲ್ಲೇಖೀಸಿ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.