ರೈಲು ನಿಲ್ದಾಣಕ್ಕೆ ಗಾಳಿಯಿಂದ ನೀರು
Team Udayavani, May 22, 2018, 6:00 AM IST
ನವದೆಹಲಿ: ಒಡಿಶಾದ ರಾಜಧಾನಿಯಿಂದ 460 ಕಿ.ಮೀ ದೂರದ ರೌಲಿ ಎಂಬ ಕುಗ್ರಾಮದಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ನೀರಿನ ಸಮಸ್ಯೆ ವ್ಯಾಪಕವಾಗಿದೆ. ಬೋರ್‌ವೆಲ್ ಕೊರೆಯಲಾಗಿದ್ದರೂ ನೀರಿನ ಸೆಲೆಯೇ ಇಲ್ಲ. ಹೀಗಾಗಿ ಇದೀಗ ಗಾಳಿಯಿಂದ ನೀರನ್ನು ಸೆರೆಹಿಡಿಯುವ ಯಂತ್ರವನ್ನು ಅಳವಡಿಸಲಾಗಿದೆ. ವಾತಾವರಣದಲ್ಲಿನ ತೇವಾಂಶವನ್ನು ಈ ಯಂತ್ರವು ಸೆರೆಹಿಡಿದು, ನೀರನ್ನು ಸಂಗ್ರಹಿಸುತ್ತದೆ. ಏಪ್ರಿಲ್ 25ರಂದು ಈ ಯಂತ್ರವನ್ನು ಸ್ಥಾಪಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಿದೆ. ಇಲ್ಲಿ ಪ್ರತಿ ದಿನ ಮೂರು ರೈಲುಗಳು ನಿಲ್ಲುತ್ತವೆ. ಇದೇ ತಂತ್ರವನ್ನು ನೀರಿನ ಕೊರತೆ ಇರುವ ಇತರ ರೈಲು ನಿಲ್ದಾಣಗಳಲ್ಲೂ ಅಳವಡಿಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಈಸ್ಟ್ ಕೋಸ್ಟ್ ರೈಲ್ವೆ ಪ್ರಧಾನ ವ್ಯವಸ್ಥಾಪಕ ಉಮೇಶ್ ಸಿಂಗ್ ಹೇಳಿದ್ದಾರೆ.
ಈ ಯಂತ್ರವು 30-35 ಡಿಗ್ರಿ ತಾಪಮಾನದಲ್ಲಿ ಒಂದು ದಿನದಲ್ಲಿ 120 ಲೀಟರ್ ನೀರನ್ನು ಉತ್ಪಾದಿಸಬಲ್ಲದು. ಯಂತ್ರಕ್ಕೆ 2 ಲಕ್ಷ ರೂ. ವೆಚ್ಚವಾಗುತ್ತದೆ. ಇದಕ್ಕೂ ಮೊದಲು ಸಮೀಪದಲ್ಲಿ ಹರಿಯುತ್ತಿದ್ದ ತೊರೆಯ ನೀರನ್ನು ಬಳಸಲಾಗುತ್ತಿತ್ತು. ಆದರೆ ಇದು ಕುಡಿಯುವುದಕ್ಕೆ ಸೂಕ್ತವಾಗಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.