Amazon Manager: ದುಷ್ಕರ್ಮಿಗಳಿಂದ ಅಮೆಜಾನ್ ಮ್ಯಾನೇಜರ್ ಹತ್ಯೆ: ಪೊಲೀಸರಿಂದ ಶೋಧ ಕಾರ್ಯ
Team Udayavani, Aug 30, 2023, 10:27 AM IST
ನವದೆಹಲಿ: ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ನವದೆಹಲಿಯ 36 ವರ್ಷದ ವ್ಯಕ್ತಿಯನ್ನು ದೆಹಲಿಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಹರ್‌ಪ್ರೀತ್ ಗಿಲ್(36) ಹತ್ಯೆಯಾದ ವ್ಯಕ್ತಿಯಾಗಿದ್ದು ಈತ ತನ್ನ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಹತ್ಯೆಗೈದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಭಜನಪುರ ಪ್ರದೇಶದ ಸುಭಾಷ್ ವಿಹಾರ್ ಬಳಿ ಹರ್‌ಪ್ರೀತ್ ಗಿಲ್ ಹಾಗು ಆತನ ಸ್ನೇಹಿತ ಮೋಟಾರ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ಗುಂಡಿನ ದಾಳಿ ನಡೆಸಿದ್ದಾರೆ ಈ ವೇಳೆ ಹರ್‌ಪ್ರೀತ್ ತಲೆಗೆ ಗುಂಡು ತಗುಲಿದ್ದು ಆತ ಸ್ಥಳದಲ್ಲೇ ಮೃತಪಟ್ಟಿದ್ದು ಆತನ ಸ್ನೇಹಿತನ ಗೋವಿಂದ್ ಸಿಂಗ್ ಆತನ ಬಲ ಕಿವಿಗೆ ಗುಂಡು ತಗುಲಿ ಗಾಯವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಗಾಯಗೊಂಡ ಗೋವಿಂದ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಘಟನೆ ನಡೆದ ಸ್ಥಳಗಳ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: PM Modi: ಪ್ರಧಾನಮಂತ್ರಿ ಮೋದಿಯವರ ಭವ್ಯ ದೂರದೃಷ್ಟಿ…ಭಾರತದ ಸುವರ್ಣ ಯುಗ…
#WATCH | Delhi | A 36-year-old man – Harpreet Gill – shot dead in Subhash Vihar, Bhajanpura and another man injured and admitted to a hospital after five youths on two-wheelers opened unprovoked firing at them before fleeing the spot. CCTV footage in the area are being scanned.… pic.twitter.com/EzuzvqX6at
— ANI (@ANI) August 30, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.