ಇ-ಮಾರುಕಟ್ಟೆ ವಶಕ್ಕೆ ಅಂಬಾನಿ ಸಜ್ಜು
Team Udayavani, Oct 28, 2019, 10:14 PM IST
ನವದೆಹಲಿ: ಭಾರತದಲ್ಲಿ ಅತಿ ದೊಡ್ಡದಾದ ಇ-ಮಾರಾಟ ಜಾಲತಾಣವೊಂದನ್ನು ಆರಂಭಿಸಲು ಸಿದ್ಧತೆ ನಡೆಸಿರುವ ರಿಲಯನ್ಸ್ ಕಂಪನಿಯ ಮುಖ್ಯಸ್ಥ ಮುಖೇಶ್ ಅಂಬಾನಿ, ಅಂದಾಜು, 1,70,000 ಕೋಟಿ ರೂ.ಗಳ ಮೊತ್ತದಲ್ಲಿ ಇ- ಕಾಮರ್ಸ್ ಸಂಸ್ಥೆ ಸ್ಥಾಪಿಸುವ ಮೂಲಕ ದೇಶೀಯ ಇ-ಮಾರುಕಟ್ಟೆ ರಂಗದಲ್ಲಿ ಸ್ಪರ್ಧೆಗಿಳಿಯಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೊಸ ಇ-ಮಾರಾಟ ಜಾಲತಾಣದಿಂದ ಬರುವ ಆದಾಯವನ್ನು ರಿಲಯನ್ಸ್ ಸಂಸ್ಥೆಯ ಮಾಲೀಕತ್ವದಲ್ಲೇ ಇರುವ ಜಿಯೋ ಟೆಲಿಕಾಂ ಕಂಪನಿಗೆ ವರ್ಗಾಯಿಸುವ ಪ್ರಸ್ತಾವನೆಗೆ ರಿಲಯನ್ಸ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ. ಆ ಮೂಲಕ, ಈಗಾಗಲೇ ಮಾರುಕಟ್ಟೆಯಲ್ಲಿ 65,000 ಕೋಟಿ ರೂ. ಮೌಲ್ಯದ ಜಿಯೋ ಕಂಪನಿಯು 2020ರ ಮಾರ್ಚ್ ವೇಳೆಗೆ ಸಂಪೂರ್ಣ ಸಾಲ ಮುಕ್ತವಾಗುವ ಆಶಯವನ್ನು ಕಂಪನಿ ಹೊಂದಿದೆ.
ಇ-ಮಾರುಕಟ್ಟೆಗೆ ರಿಲಯನ್ಸ್ ಕಂಪನಿ ಪ್ರವೇಶ, ಈಗಾಗಲೇ ಈ ಕ್ಷೇತ್ರದಲ್ಲಿ ಮಂಚೂಣಿಯಲ್ಲಿರುವ ಅಮೆಜಾನ್ ಹಾಗೂ ಫ್ಲಿಪ್‌ಕಾರ್ಟ್ ಕಂಪನಿಗಳಿಗೆ ಹೊಸ ಸವಾಲನ್ನು ಒಡ್ಡಲಿದೆ. ಹೊಸ ಇ-ಮಾರಾಟ ವ್ಯವಸ್ಥೆಗಾಗಿ ಬಂಡವಾಳ ತರುವಲ್ಲಿಯೂ ಅಂಬಾನಿ ಸಫಲರಾಗುತ್ತಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.