Ayodhya; ರಾಮ ಮಂದಿರಕ್ಕೆ ಭೇಟಿ ನೀಡಿದ ಇಸ್ರೇಲ್ ರಾಯಭಾರಿ ಅಜರ್
ಭಾರತದಂತೆ ಇಸ್ರೇಲ್ ಜನರೂ ಪ್ರಾಚೀನ ಧರ್ಮ ಪರಂಪರೆ ಹೊಂದಿದ್ದಾರೆ...
Team Udayavani, Oct 16, 2024, 11:54 AM IST
ಅಯೋಧ್ಯೆ : ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ರುವೆನ್ ಅಜರ್ ಅವರು ಬುಧವಾರ(ಅ16) ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದರು.
ಭೇಟಿ ಬಳಿಕ ಮಾತನಾಡಿದ ಅಜರ್ ”ಭಗವಾನ್ ರಾಮನ ಈ ಭವ್ಯವಾದ ದೇವಾಲಯಕ್ಕೆ ಭೇಟಿ ನೀಡಿರುವುದು ನನಗೆ ನಿಜವಾಗಿಯೂ ಗೌರವ ತಂದಿದೆ. ಪ್ರತಿ ದಿನವೂ ಬರುವ ಯಾತ್ರಿಕರ ಸಂಖ್ಯೆ ನೋಡಿದೆ ಇದು ಹಿಂದೂ ನಂಬಿಕೆಗೆ ಸ್ಥಳದ ಪ್ರಾಮುಖ್ಯತೆಗೆ ಸಾಕ್ಷಿಯಾಗಿದೆ. ಭಾರತದ ಜನರಂತೆ ಇಸ್ರೇಲ್ ಜನರು ಪ್ರಾಚೀನ ಧರ್ಮ, ಸಂಪ್ರದಾಯ ಮತ್ತು ಪರಂಪರೆಯನ್ನು ಹೊಂದಿದ್ದಾರೆ. ನಮ್ಮ ಪರಂಪರೆಯ ಬಗ್ಗೆ ನಮಗೆ ಹೆಮ್ಮೆಯಿರುವಂತೆ, ನಿಮ್ಮ ಪರಂಪರೆಯ ಬಗ್ಗೆಯೂ ನೀವು ಹೆಮ್ಮೆಪಡುತ್ತೀರಿ” ಎಂದರು.
”ಬಹಳ ಮುಖ್ಯವಾದ ವಿಷಯವೆಂದರೆ ಭಕ್ತಿಯು ನಿಮಗೆ ಶಕ್ತಿ ಮತ್ತು ದೃಢತೆಯನ್ನು ನೀಡುತ್ತದೆ. ಆದ್ದರಿಂದ, ಇಲ್ಲಿಗೆ ಭೇಟಿ ನೀಡಲು ಮತ್ತು ಯಾತ್ರಾರ್ಥಿಗಳು ಮತ್ತು ಆರಾಧಕರ ಭಕ್ತಿಯನ್ನು ನೋಡಲು ನಾನು ನಿಜವಾಗಿಯೂ ಉತ್ಸುಕನಾಗಿದ್ದೆ” ಎಂದರು.
#WATCH | Ayodhya, Uttar Pradesh: Ambassador of Israel to India Reuven Azar says, “I was really honoured to visit this magnificent temple in Ayodhya for the Lord Ram. I was moved to see the no. of pilgrims that are coming every day… This is a testament to the importance of this… pic.twitter.com/MAboNc9mgS
— ANI (@ANI) October 16, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.