ಕೋವಿಡ್ 2ನೇ ಅಲೆ ಭೀತಿ ನಡುವೆ ರೋಹ್ಟಕ್ ನಲ್ಲಿ ನಿಗೂಢ ಜ್ವರಕ್ಕೆ 28 ಮಂದಿ ಸಾವು!
ನೆರೆಯ ಗ್ರಾಮಗಳಿಗೆ ಹರಡದಿರಲು ಮುಂಜಾಗ್ರತಾ ಕ್ರಮವಾಗಿ ಇಡೀ ಗ್ರಾಮವನ್ನೇ ಕಂಟೈನ್ ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.
Team Udayavani, May 11, 2021, 12:13 PM IST
ರೋಹ್ಟಕ್:ಭಾರತದಲ್ಲಿ ಕೋವಿಡ್ 19 ಮಾರಣಾಂತಿಕ ಎರಡನೇ ಅಲೆ ಕ್ಷಿಪ್ರವಾಗಿ ಹರಡುತ್ತಿರುವ ನಡುವೆಯೇ ಹರ್ಯಾಣದ ರೋಹ್ಟಕ್ ನಲ್ಲಿ ಕಳೆದ 10 ದಿನಗಳಲ್ಲಿ ನಿಗೂಢ ಜ್ವರಕ್ಕೆ 25ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ.
ಇದನ್ನೂ ಓದಿ:ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶಮುಖ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ED
ರೋಹ್ಟಕ್ ನ ಟಿಟೋಳಿ ಗ್ರಾಮದಲ್ಲಿ ಈ ಆಘಾತಕಾರಿ ಸಾವಿನ ಘಟನೆ ಸಂಭವಿಸಿದ್ದು, ಜಿಲ್ಲಾಡಳಿತ ಈ ಗ್ರಾಮವನ್ನು ಸೀಲ್ಡ್ ಮಾಡಿರುವುದಾಗಿ ವರದಿ ತಿಳಿಸಿದೆ. ಗ್ರಾಮದಲ್ಲಿನ ನಿಗೂಢ ಸಾವಿನ ಬಗ್ಗೆ ರೋಹ್ಟಕ್ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ತನಿಖೆ ನಡೆಸುತ್ತಿದೆ.
ನಿಗೂಢ ಜ್ವರಕ್ಕೆ 28ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ನಿಗೂಢ ಜ್ವರ ನೆರೆಯ ಗ್ರಾಮಗಳಿಗೆ ಹರಡದಿರಲು ಮುಂಜಾಗ್ರತಾ ಕ್ರಮವಾಗಿ ಇಡೀ ಗ್ರಾಮವನ್ನೇ ಕಂಟೈನ್ ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.
ಸ್ಥಳೀಯ ಗ್ರಾಮಸ್ಥರ ಹೇಳಿಕೆ ಪ್ರಕಾರ, ಕಳೆದ ಎರಡು ದಿನಗಳಲ್ಲಿ ಕಾಣಿಸಿಕೊಂಡ ಜ್ವರಕ್ಕೆ ಯುವಕರು ಸೇರಿದಂತೆ 40ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಏಕಾಏಕಿ ಸಂಭವಿಸಿದ ಸಾವಿನ ದುರಂತ ಪ್ರಕರಣದಿಂದ ಗ್ರಾಮಸ್ಥರು ಭೀತಿಗೆ ಒಳಗಾಗಿರುವುದಾಗಿ ವರದಿ ತಿಳಿಸಿದೆ.
ಆದರೆ ಈ ಸಾವು ಸಂಭವಿಸಲು ಕೋವಿಡ್ 19 ಸೋಂಕು ಕಾರಣವಾಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಶವಗಳ ಮರಣೋತ್ತರ ಪರೀಕ್ಷೆ ಮತ್ತು ತನಿಖೆ ಮುಂದುವರಿದಿದ್ದು, ಈ ಸಾವಿಗೆ ಏನು ಕಾರಣ ಎಂಬುದು ಪತ್ತೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ ಈ ಸಾವು ಸಂಭವಿಸಲು ಕೋವಿಡ್ 19 ಸೋಂಕು ಕಾರಣವಾಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಶವಗಳ ಮರಣೋತ್ತರ ಪರೀಕ್ಷೆ ಮತ್ತು ತನಿಖೆ ಮುಂದುವರಿದಿದ್ದು, ಈ ಸಾವಿಗೆ ಏನು ಕಾರಣ ಎಂಬುದು ಪತ್ತೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಟಿಟೋಳಿ ಗ್ರಾಮದ ಪ್ರವೇಶ ಮಾರ್ಗ ಮತ್ತು ಹೊರ ಹೋಗುವ ಮಾರ್ಗವನ್ನು ಸಂಪೂರ್ಣವಾಗಿ ಸೀಲ್ಡ್ ಮಾಡಿರುವುದಾಗಿ ಜಿಲ್ಲಾಡಳಿತ ತಿಳಿಸಿದೆ. ದೆಹಲಿಯಿಂದ 60 ಕಿಲೋ ಮೀಟರ್ ದೂರದಲ್ಲಿರುವ ಈ ಗ್ರಾಮದಲ್ಲಿ ಕೋವಿಡ್ 19 ಸೆಂಟರ್ ತೆರೆಯಲು ಜಿಲ್ಲಾಡಳಿತ ಸಿದ್ಧತೆ ನಡೆಸುತ್ತಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.