ಜಿಜೆಎಂ ಮುಖ್ಯಸ್ಥ ಗುರುಂಗ್ ನಿವಾಸಕ್ಕೆ ದಾಳಿ, ಶಸ್ತ್ರಾಸ್ತ್ರ ವಶ
Team Udayavani, Jun 15, 2017, 11:29 AM IST
ಕೋಲ್ಕತ : ಪ್ರತ್ಯೇಕ ಗೂರ್ಖಾಲ್ಯಾಂಡ್ ರಾಜ್ಯ ರಚನೆಯನ್ನು ಆಗ್ರಹಿಸುವ ಚಳವಳಿಗೆ ಮರು ಜೀವ ದೊರಕಿರುವ ಹಿನ್ನೆಲೆಯಲ್ಲಿ ಡಾರ್ಜಿಲಿಂಗ್ನಲ್ಲಿ ಪ್ರಕೃತ ಬಂದ್ ನಡೆಯುತ್ತಿರುವಂತೆಯೇ ಪಶ್ಚಿಮ ಬಂಗಾಲ ಪೊಲೀಸರು ಗೂರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ಇದರ ಮುಖ್ಯಸ್ಥ ಬಿಮಲ್ ಗುರುಂಗ್ನ ಪಾಟ್ಲೆàಬಾಸ್ ಪ್ರದೇಶದಲ್ಲಿನ ನಿವಾಸದ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಪಶ್ಚಿಮ ಬಂಗಾಲ ಪೊಲಿಸರು ಮತ್ತು ಸಿಆರ್ಪಿಎಫ್ ಈ ಕಾರ್ಯಾಚರಣೆಯನ್ನು ಜಂಟಿಯಾಗಿ ನಡೆಸಿವೆ. ಅಧಿಕಾರಿಗಳು ಜಿಜೆಎಂ ಮುಖ್ಯಸ್ಥನ ಮನೆಯ ಬೀಗ ಮುರಿದು ಒಳಪ್ರವೇಶಿಸಿ ಬೃಹತ್ ಶೋಧ ಕಾರ್ಯ ನಡೆಸಿದರು. ಮನೆಯೊಳಗೆ ಅಪಾರ ಪ್ರಮಾಣದ ಸ್ಫೋಟಕ ಉಪಕರಣಗಳು, ಬಿಲ್ಲು – ಬಾಣ, ಹರಿತವಾದ ಆಯುಧಗಳು, ಪಟಾಕಿಗಳು ಮತ್ತು ಹಲವು ಮೊಬೈಲ್ ಫೋನ್ಗಳು ಪತ್ತೆಯಾದವು.
ಬಿಮಲ್ ಗುರುಂಗ್ ನೇತೃತ್ವದ ಜಿಜೆಎಂ ನಿನ್ನೆ ಬುಧವಾರ ಗೂರ್ಖಾಲ್ಯಾಂಡ್ ರಾಜ್ಯರಚನೆಯ ತನ್ನ ಬೇಡಿಕೆಯನ್ನು ಆಗ್ರಹಿಸುವ ಚಳವಳಿಯನ್ನು ತೀವ್ರಗೊಳಿಸುವುದಾಗಿ ಹೇಳಿತ್ತು.
ಈ ನಡುವೆ ಅನೇಕ ತೃಣಮೂಲ ಕಾರ್ಯಕರ್ತರು ತಮಗೆ “ದ್ರೋಹಿ’ಗಳೆಂಬ ಹಣೆ ಪಟ್ಟಿ ತಗಲುವ ಸಾಧ್ಯತೆಯ ಭೀತಿಯಲ್ಲಿ ಜಿಜೆಎಂ ಸೇರಲು ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.