ರಾಜ್ಯಸಭೆಗೆ ಅಮಿತ್ ಶಾ, ಬಿಜೆಪಿ ಸಂಸದೀಯ ಸಭೆಯಲ್ಲಿ ನಿರ್ಧಾರ
Team Udayavani, Jul 27, 2017, 7:50 AM IST
ಹೊಸದಿಲ್ಲಿ: ಬಿಹಾರದಲ್ಲಿ ನಡೆದ ಹೈಡ್ರಾಮಾ ಮತ್ತು ರಾಷ್ಟ್ರಪತಿ, ಉಪರಾಷ್ಟ್ರಪತಿ ಹುದ್ದೆಗಳಿಗೆ ಅಚ್ಚರಿಯ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ ಪಾಳಯದಿಂದ ಮತ್ತೂಂದು ನಿರೀಕ್ಷಿಸದ ನಿರ್ಧಾರ ಹೊರಬಿದ್ದಿದೆ. ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಂಸತ್ ಪ್ರವೇಶಕ್ಕೆ ಸಿದ್ಧರಾಗಿದ್ದು, ಗುಜರಾತ್‌ನಿಂದ ಕಣಕ್ಕಿಳಿಯಲಿದ್ದಾರೆ. ಅದಕ್ಕಾಗಿ ಆ.8ರಂದು ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಹಾಲಿ ಕೇಂದ್ರ ಸಚಿವೆ ಸ್ಮತಿ ಇರಾನಿ ಕೂಡ ಪ್ರಧಾನಿ ಮೋದಿ ತವರು ರಾಜ್ಯದಿಂದಲೇ ಸ್ಪರ್ಧಿಸಲಿದ್ದಾರೆ.
ಹೊಸದಿಲ್ಲಿಯಲ್ಲಿ ಬುಧವಾರ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಯಿತು ಎಂದು ಕೇಂದ್ರ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ. 2019ರ ಲೋಕಸಭಾ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಒಂದರ್ಥದಲ್ಲಿ ಅಗ್ನಿಪರೀಕ್ಷೆಯೇ ಆಗಿದ್ದರಿಂದ ಅಮಿತ್ ಶಾ ರಾಷ್ಟ್ರಾಧ್ಯಕ್ಷ ಸ್ಥಾನದ ನಿರ್ವಹಣೆ ಬದಿಗೊತ್ತಿ ರಾಜ್ಯಸಭೆ ಚುನಾವಣೆ ಯಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿತ್ತು. ಅಷ್ಟೇ ಅಲ್ಲ ಮುಂಬರುವ ಐದು ರಾಜ್ಯಗಳ ಚುನಾವಣೆ ಹೊಣೆ ಯೂ ಅವರ ಹೆಗಲಮೇಲಿದ್ದು, ಸ್ಪರ್ಧಿಸುವ ಸಾಧ್ಯತೆ ಇಲ್ಲ ಎಂದು ಬಿಜೆಪಿ ಪಾಳಯದಿಂದಲೇ ಕೇಳಿಬಂ ದಿತ್ತು. ಆದರೆ ಇವೆಲ್ಲದರ ನಡುವೆ ಬುಧವಾರ ಹಠಾತ್ತಾಗಿ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಸಂಬಂಧ ಗುಜರಾತ್ ಶಾಸಕರು ಸೇರಿ ಹಿರಿಯ ನಾಯಕರ ಜತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ನಿತೀಶ್ ಕುಮಾರ್ ಅವರು ಸಿಎಂ ಹುದ್ದೆಗೆ ರಾಜೀನಾಮೆಯೊಂದಿಗೆ ಮಹಾಘಟಬಂದನ್ ಕನಸು ನುಚ್ಚುನೂರಾದ ಬೆನ್ನಲ್ಲೇ ರಾಜಕೀಯ ಸಂಚಲನಕ್ಕೆ ಚಾಲನೆ ಸಿಕ್ಕಿದೆ. ಗುಜರಾತ್‌ನಿಂದ ಆಯ್ಕೆಯಾಗಿರುವ ಕೇಂದ್ರ ಸಚಿವೆ ಸ್ಮತಿ ಇರಾನಿ, ಬಿಜೆಪಿ ನಾಯಕ ದಿಲೀಪ್ ಪಾಂಡ್ಯ ಹಾಗೂ ಕಾಂಗ್ರೆಸ್ ನಾಯಕ ಅಹಮ್ಮದ್ ಪಟೇಲ್ ಅವಧಿ ಮುಂದಿನ ತಿಂಗಳು ಅಂತ್ಯಗೊಳ್ಳಲಿರುವ ಹಿನ್ನೆಲೆ ಯಲ್ಲಿ ಚುನಾವಣೆ ನಡೆಯಲಿದೆ. ಕೇಂದ್ರಾಡಳಿತ ಪಕ್ಷ ಬಿಜೆಪಿಗೆ ಗುಜರಾತ್ ಚುನಾವಣೆ ಸಾಕಷ್ಟು ಪ್ರತಿಷ್ಠೆಯದ್ದಾಗಿದ್ದು, ಅಹಮ್ಮದ್ ಪಟೇಲ್ ಬದಲಾಗಿ ಆಕ್ಷೇತ್ರದಿಂದ ಅಮಿತ್ ಶಾ ಕಣಕ್ಕಿಳಿದು ರಾಜ್ಯಸಭೆ ಪ್ರವೇಶಿಸುವ ಲೆಕ್ಕಾಚಾರ ನಡೆದಿದೆ. ಒಂದೊಮ್ಮೆ ಶಾ ಅಖಾಡಕ್ಕೆ ಇಳಿಯುವುದು ಖಚಿತವಾದಲ್ಲಿ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆಯೇ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.