ಅಮಿತ್ ಶಾ ರಥಯಾತ್ರೆಗೆ ಅನುಮತಿ ನಿರಾಕರಣೆ
Team Udayavani, Dec 7, 2018, 6:00 AM IST
ಕೋಲ್ಕತ್ತಾ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಪಶ್ಚಿಮ ಬಂಗಾಳದ ಕೂಚ್ಬೆಹರ್ನಿಂದ ಶುಕ್ರ ವಾರ ಆರಂಭ ವಾಗಬೇಕಿದ್ದ ರಥಯಾತ್ರೆಗೆ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಹೈಕೋರ್ಟ್ ಅನುಮತಿ ನಿರಾಕರಿಸಿವೆ. ಹೀಗಾಗಿ, ರಥಯಾತ್ರೆ ಸ್ಥಗಿತಗೊಳಿಸಲಾಗಿದೆ.
ರಥಯಾತ್ರೆಯಿಂದ ಕೋಮು ಗಲಭೆ ಆಗುವ ಸಾಧ್ಯತೆಗಳಿವೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಕಲ್ಕತ್ತಾ ಹೈಕೋರ್ಟ್ಗೆ ಮನವಿ ಸಲ್ಲಿಸಿತ್ತು. ಮನವಿ ಪರಿಶೀಲಿಸಿದ ಹೈಕೋರ್ಟ್, ಅಹಿತಕರ ಘಟನೆ ನಡೆದರೆ ಯಾರು ಹೊಣೆ ಹೊರುತ್ತೀರಿ ಎಂದು ಪ್ರಶ್ನಿಸಿದಾಗ, ಬಿಜೆಪಿ ಪರ ವಕೀಲರು, ಸರ್ಕಾರವೇ ಹೊಣೆ ಹೊರಬೇಕು ಎಂದರು. ಕೊನೆಗೆ ನ್ಯಾಯಾಲಯ, ಯಾತ್ರೆ ಹಾದುಹೋಗುವ 24 ಜಿಲ್ಲೆಗಳ ಎಸ್ಪಿಗಳು ಸಭೆ ನಡೆಸಿ 21ರಂದು ವರದಿ ನೀಡಲಿ. ಆ ಬಗ್ಗೆ ಜ.9ರಂದು ವಿಚಾರಣೆ ನಡೆಸ ಲಾಗು ವುದು. ಅಲ್ಲಿಯವರೆಗೂ ಯಾತ್ರೆಗೆ ಅವಕಾಶವಿಲ್ಲ ಎಂದಿತು. ಇದನ್ನು ಪ್ರಶ್ನಿಸಿ, ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸುವುದಾಗಿ ಬಿಜೆಪಿ ಹೇಳಿದೆ. ಏತನ್ಮಧ್ಯೆ, ಕೂಚ್ಬೆಹರ್ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.