ಮಿಷನ್ 2019ನತ್ತ ಬಿಜೆಪಿ; 363 ಸೀಟುಗಳ ಮೇಲೆ ಕಣ್ಣು
Team Udayavani, Apr 5, 2017, 10:20 AM IST
ಹೊಸದಿಲ್ಲಿ: ಉತ್ತರಪ್ರದೇಶ, ಉತ್ತರಾಖಂಡ ವಿಧಾನಸಭೆಯಲ್ಲಿ ಅಭೂತಪೂರ್ವ ಗೆಲುವು ಹಾಗೂ ಪಂಚರಾಜ್ಯಗಳ ಪೈಕಿ ನಾಲ್ಕರಲ್ಲಿ ಸರ್ಕಾರ ರಚಿಸಿರುವ ಉತ್ಸಾಹದಲ್ಲಿರುವ ಬಿಜೆಪಿ ಇನ್ನು ಹಿಂದಿರುಗಿ ನೋಡದೇ ಇರಲು ನಿರ್ಧರಿಸಿದೆ. ಅದರಂತೆ, 2019ರ ಲೋಕಸಭೆ ಚುನಾವಣೆಗೆ ಈಗಲೇ ಸಿದ್ಧತೆ ಆರಂಭಿಸಿದೆ. ದೇಶದ ಮೂಲೆ ಮೂಲೆಗಳಲ್ಲಿ ಕೇಸರಿ ಅಲೆ ವ್ಯಾಪಿಸುವಂತೆ ಮಾಡಿ, 363 ಸೀಟುಗಳ ಗಡಿಯನ್ನು ದಾಟುವ ಗುರಿ ಹಾಕಿಕೊಂಡಿರುವ ಬಿಜೆಪಿ, ಪಕ್ಷದ ‘ಮಿಷನ್ 2019’ನ ಮುಂದಿನ ಸ್ಟಾಪ್ ಆಗಿ ಒಡಿಶಾವನ್ನು ಆಯ್ದುಕೊಂಡಿದೆ. ಅದಕ್ಕಾಗಿಯೇ ತನ್ನ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಭುವನೇಶ್ವರದಲ್ಲಿ ಹಮ್ಮಿಕೊಂಡಿರುವುದು. ಇದೇ 15 ಮತ್ತು 16ರಂದು ಕಾರ್ಯಕಾರಿಣಿ ಜರುಗಲಿದ್ದು, ಕೇಂದ್ರ ಸಚಿವರು, ಆರೆಸ್ಸೆಸ್ ನಾಯಕರು, ಬಿಜೆಪಿ ಆಡಳಿತವಿರುವ ರಾಜ್ಯಗಳ ಸಿಎಂಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.
11 ಕೋಟಿ ಸದಸ್ಯರ ಗುರಿ: ಬಿಜೆಪಿಯ ಸ್ಥಾಪನಾ ದಿನವಾದ ಎ.6 ಮತ್ತು ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ರ ಜನ್ಮ ಶತಮಾನೋತ್ಸವ ದಿನವಾದ ಎ.14ರಂದು ಬೃಹತ್ ಅಭಿಯಾನವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ತನ್ನ ಸದಸ್ಯರ ಸಂಖ್ಯೆಯನ್ನು 11 ಕೋಟಿಗೇರಿಸುವುದು ಈ ಅಭಿಯಾನದ ಮೂಲ ಉದ್ದೇಶ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲುಂಡಿರುವ 200ರಷ್ಟು ಸೀಟುಗಳೇ ಪಕ್ಷದ ಟಾರ್ಗೆಟ್ ಆಗಿದೆ. ಹೀಗಾಗಿ, ಹಿರಿಯ ನಾಯಕರು ಅಲ್ಲಿಗೆ ತೆರಳಿ ಬಿಜೆಪಿಯನ್ನು ಬಲಿಷ್ಠಗೊಳಿಸುವ ಕಾರ್ಯದಲ್ಲಿ ನಿರತರಾಗಲಿದ್ದಾರೆ.
ರಿಪೋರ್ಟ್ ಕಾರ್ಡ್ ಬಿಡುಗಡೆಗೆ ಬಿಜೆಪಿ ಇಂಗಿತ
ಮುಂದಿನ ತಿಂಗಳು ಮೋದಿ ನೇತೃತ್ವದ ಸರಕಾರಕ್ಕೆ 3 ವರ್ಷ ಪೂರ್ಣವಾಗಲಿರುವ ಹಿನ್ನಲೆಯಲ್ಲಿ ಸಾಧನೆಗಳನ್ನು ಜನರಿಗೆ ತಿಳಿಸಲು ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲು ಬಿಜೆಪಿ ಮುಂದಾಗಿದೆ.3 ವರ್ಷಗಳ ಅವಧಿಯಲ್ಲಿ ಏನು ಅಗಿಲ್ಲ ಬರಿ ಮಾತೆ ಸಾಧನೆ ಎಂಬ ವಿರೋಧ ಪಕ್ಷಗಳ ಟೀಕೆಗೆ ಬೀಗ ಹಾಕುವುದು ಮತ್ತು ಸಾಧನೆಗಳನ್ನು ಜನರಿಗೆ ವಿವರಿಸುವುದು ಇದರ ಮುಖ್ಯ ಉದ್ದೇಶ. ಪ್ರತಿ ಸಚಿವಾಲಯವೂ ಮಾಡಿರುವ ಸಾಧನೆಗಳನ್ನು ತಿಳಿಯಪಡಿಸಿ ವಿರೋಧಪಕ್ಷಗಳು ಮಾಡುತ್ತಿರುವ ಅಪಪ್ರಚಾರದಲ್ಲಿ ಯಾವುದೆ ಸತ್ಯವಿಲ್ಲ ಎಂಬುದನ್ನು ಮನವರಿಕೆ ಮಾಡಿಕೊಡಲು ಪಕ್ಷ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.