Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ

Team Udayavani, Nov 3, 2024, 1:22 PM IST

Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ

ರಾಂಚಿ: ನವೆಂಬರ್ 13 ಹಾಗೂ 20 ರಂದು ನಡೆಯುವ ವಿಧಾನ ಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದ್ದು ಇದರ ನಡುವೆ ಒಂದು (ಭಾನುವಾರ) ನ.೩ ರಂದು ಬಿಜೆಪಿಯ ಪ್ರಣಾಳಿಕೆ (ಸಂಕಲ್ಪ ಪತ್ರ)ಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಡುಗಡೆ ಮಾಡಿದರು.
ಅಮಿತ್ ಶಾ ಅವರು ಶನಿವಾರ ರಾತ್ರಿ ರಾಜ್ಯದ ರಾಜಧಾನಿ ರಾಂಚಿಗೆ ಆಗಮಿಸಿದ್ದು ಭಾನುವಾರ ಬೆಳಿಗ್ಗೆ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ ಈ ವೇಳೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್, ಸಂಜಯ್ ಸೇಠ್ ಮತ್ತು ಬಿಜೆಪಿ ಜಾರ್ಖಂಡ್ ಅಧ್ಯಕ್ಷ ಬಾಬುಲಾಲ್ ಮರಾಂಡಿ ಉಪಸ್ಥಿತರಿದ್ದರು.

ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಅಮಿತ್ ಶಾ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸರಕಾರದ ವಿರುದ್ಧ ಅಸ್ತ್ರ ಎಸೆದಿದ್ದು ಮತದಾರರಲ್ಲಿ ಆಯ್ಕೆಯನ್ನು ನೀಡಿದ್ದಾರೆ, ಅದರಂತೆ ಮತದಾರರಿಗೆ ಭ್ರಷ್ಟಾಚಾರ ತುಂಬಿರುವ ಸರಕಾರ ಬೇಕೇ ಅಥವಾ ರಾಜ್ಯವನ್ನು ಉತ್ತಮ ಅಭಿವೃದ್ಧಿಯತ್ತ ಕೊಂಡೊಯ್ಯುವ ಸರಕಾರ ಬೇಕೇ ಅಲ್ಲದೆ ಗಡಿಭಾಗದಲ್ಲಿ ಒಳನುಸುಳುವಿಕೆಗೆ ಅವಕಾಶ ನೀಡುವ ಮೂಲಕ ಭೂಮಿ ಮತ್ತು ಗ್ರಾಮದ ಮಹಿಳೆಯರಿಗೆ ರಕ್ಷಣೆ ನೀಡದ ಸರಕಾರ ಬೇಕೇ ಅಥವಾ ಗಡಿ ಸೇರಿದಂತೆ ದೇಶದ ಮಹಿಳೆಯರ ರಕ್ಷಣೆಗೆ ಮುಂದಾಗುವ ಬಿಜೆಪಿ ಸರಕಾರ ಬೇಕೇ ಎಂದು ಪ್ರಶ್ನೆ ಮಾಡಿದ್ದು ಆಯ್ಕೆ ನಿಮ್ಮದು ನಮ್ಮ ಪಕ್ಷ ಇತರ ಎಲ್ಲ ಪಕ್ಷಗಳಿಗಿಂತ ಭಿನ್ನವಾಗಿದೆ ಎಂದು ಹೇಳಿದರು.

ರಾಜ್ಯ ರಚನೆಯ 25 ವರ್ಷಗಳನ್ನು ಪೂರ್ಣಗೊಳಿಸಿದ ಸವಿ ನೆನಪಿಗಾಗಿ ಪಕ್ಷವು 25 ನಿರ್ಣಯಗಳನ್ನು ಕೈಗೊಂಡಿದ್ದು ಅದರಂತೆ ‘ಗೋಗೋ ದೀದಿ’ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 2,100 ರೂಪಾಯಿ ನೀಡುವ ಭರವಸೆಯೂ ಇದರಲ್ಲಿ ಸೇರಿದೆ ಎಂದು ಹೇಳಿದರು ಅಷ್ಟು ಮಾತ್ರವಲ್ಲದೆ. ಜಾರ್ಖಂಡ್‌ನ ಎಲ್ಲಾ ಕುಟುಂಬಗಳಿಗೆ 500 ರೂಪಾಯಿಗಳಿಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಒಂದು ವರ್ಷದಲ್ಲಿ ಎರಡು ಉಚಿತ ಸಿಲಿಂಡರ್‌ಗಳನ್ನು ನೀಡಲಾಗುವುದು ಎಂದು ಹೇಳಿದರು.

ಮುಂದಿನ 5 ವರ್ಷಗಳಲ್ಲಿ ಜಾರ್ಖಂಡ್‌ನ ಯುವಕರಿಗೆ 5 ಲಕ್ಷ ಸ್ವಯಂ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗುವುದು. ಇದಲ್ಲದೆ, ನಾವು 2,87,500 ಸರ್ಕಾರಿ ಹುದ್ದೆಗಳಲ್ಲಿ ನ್ಯಾಯಯುತ ಮತ್ತು ಪಾರದರ್ಶಕ ರೀತಿಯಲ್ಲಿ ನೇಮಕಾತಿ ಮಾಡುವ ಮೂಲಕ ಉದ್ಯೋಗ ದೊರಕಿಸುವುದಾಗಿ ಹೇಳಿದರು, ಇದಕ್ಕಾಗಿ ಮೊದಲ ಸಂಪುಟ ಸಭೆಯಲ್ಲಿಯೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ 2025ರ ನವೆಂಬರ್ ವೇಳೆಗೆ 1.5 ಲಕ್ಷ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ ಎಂದು ಹೇಳಿದರು.

ಪ್ರತಿ ವರ್ಷ 1 ಲಕ್ಷ ಜಾರ್ಖಂಡಿನ ಯುವಕರಿಗೆ ಸ್ವಯಂ ಉದ್ಯೋಗ ಅವಕಾಶಗಳನ್ನು ಒದಗಿಸುವ ಅವಧಿಗೆ ಮಾಸಿಕ 2,000 ‘ಯುವ ಸತಿ’ ಭತ್ಯೆ ನೀಡುವ ಭರವಸೆ ನೀಡಿದ್ದಾರೆ.

ಜೆಎಂಎಂ ಸರ್ಕಾರದಲ್ಲಿ ಪ್ರಚಲಿತದಲ್ಲಿರುವ ದುರಾಡಳಿತವನ್ನು ಕೊನೆಗೊಳಿಸುವುದು ಮತ್ತು ಎಲ್ಲರಿಗೂ ವಸತಿ ಖಾತ್ರಿಪಡಿಸುವುದು. ಜಾರ್ಖಂಡ್‌ನ ಪ್ರತಿಯೊಬ್ಬ ನಾಗರಿಕರಿಗೂ ಮನೆ ನಿರ್ಮಿಸಲು ಉಚಿತ ಮರಳನ್ನು ನೀಡಲಾಗುವುದು. ಅದರಂತೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 21 ಲಕ್ಷ ಮನೆಗಳನ್ನೂ ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದ್ದಾರೆ, ಇದಲ್ಲದೆ 2027 ರ ವೇಳೆಗೆ ಜಲ ಜೀವನ್ ಮಿಷನ್‌ನ ಸಂಪೂರ್ಣ ಅನುಷ್ಠಾನದ ಮೂಲಕ 59 ಲಕ್ಷ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕವನ್ನು ಒದಗಿಸಲಾಗುವುದು ಎಂದು ಹೇಳಿದರು.

ಜಾರ್ಖಂಡ್‌ನಲ್ಲಿ ಅಕ್ರಮ ಬಾಂಗ್ಲಾದೇಶದ ಒಳನುಸುಳುವಿಕೆಯನ್ನು ನಿಲ್ಲಿಸಲು ಮತ್ತು ಬುಡಕಟ್ಟು ಸಮುದಾಯಗಳ ಹಕ್ಕುಗಳನ್ನು ರಕ್ಷಿಸಲು, ಸಂತಾಲ್ ಪರಗಣ ಸೇರಿದಂತೆ ಇಡೀ ಜಾರ್ಖಂಡ್‌ನಲ್ಲಿ ಕಟ್ಟುನಿಟ್ಟಾದ ಕಾನೂನು ಪ್ರಕ್ರಿಯೆಯನ್ನು ಜಾರಿಗೊಳಿಸುವ ಮೂಲಕ ನಾವು ಅಕ್ರಮ ಒಳನುಸುಳುವಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟುತ್ತೇವೆ ಎಂದು ಹೇಳಿದರು.

ಅಲ್ಲದೆ ನುಸುಳುಕೋರರು ಆಕ್ರಮಿಸಿಕೊಂಡಿರುವ ಬುಡಕಟ್ಟು ಜನಾಂಗದ ಭೂಮಿಯನ್ನು ಹಿಂದಿರುಗಿಸಲು ಕಾನೂನು ನಿರ್ಮಿಸಲಾಗುತ್ತದೆ. ಜೊತೆಗೆ ಬುಡಕಟ್ಟು ಮಹಿಳೆಯರನ್ನು ಮದುವೆಯಾಗುವ ನುಸುಳುಕೋರರ ಮಕ್ಕಳಿಗೆ ಬುಡಕಟ್ಟು ಸ್ಥಾನಮಾನ ನೀಡುವುದನ್ನು ನಿಷೇಧಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: Director Guruprasad: ಖ್ಯಾತ ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆ*ತ್ಮಹತ್ಯೆ

ಟಾಪ್ ನ್ಯೂಸ್

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.