Chhattisgarh; ನಕ್ಸಲ್ ಪೀಡಿತ ಪ್ರದೇಶಗಳಿಗೆ ಅಮಿತ್ ಶಾ ಮೂರು ದಿನಗಳ ಭೇಟಿ
ನಕ್ಸಲರನ್ನು ಮುಕ್ತ ಮಾಡಲು ಕಾರ್ಯಾಚರಣೆಗಳು...
Team Udayavani, Dec 12, 2024, 7:24 PM IST
ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 14 ರಿಂದ ಛತ್ತೀಸ್‌ಗಢದ ನಕ್ಸಲ್ ಪೀಡಿತ ಪ್ರದೇಶಗಳಿಗೆ ಮೂರು ದಿನಗಳ ಭೇಟಿ ನೀಡಲಿದ್ದಾರೆ. ಭೇಟಿ ವೇಳೆ ರಾಜ್ಯದಲ್ಲಿನ ಕಾನೂನು-ಸುವ್ಯವಸ್ಥೆ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ ಮತ್ತು ಶರಣಾದ ನಕ್ಸಲರು ಮತ್ತು ಸ್ಥಳೀಯರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ಗುರುವಾರ(ಡಿ12) ತಿಳಿಸಿವೆ.
ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯಿ ಅವರು ಇಲ್ಲಿ ಕಳೆದ ವಾರ ಶಾ ಅವರನ್ನು ಭೇಟಿ ಮಾಡಿದ್ದರು. ಬಸ್ತಾರ್ ಮತ್ತು ಕೊಂಡಗಾಂವ್ ಜಿಲ್ಲೆಗಳು ನಕ್ಸಲರಿಂದ ಸಂಪೂರ್ಣವಾಗಿ ಮುಕ್ತವಾಗಿವೆ ಮತ್ತು ಇತರ ಪ್ರದೇಶಗಳಿಂದ ನಕ್ಸಲರನ್ನು ಮುಕ್ತ ಮಾಡಲು ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ತಿಳಿಸಿದ್ದರು.
ಶಾ ಅವರು ಭೇಟಿಯ ಸಂದರ್ಭದಲ್ಲಿ ಭದ್ರತೆ ಮತ್ತು ಶಾಂತಿಗೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾಯ್‌ಪುರದಲ್ಲಿ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಛತ್ತೀಸ್‌ಗಢ ಪೊಲೀಸರಿಗೆ ರಾಷ್ಟ್ರಪತಿಗಳ ಕಲರ್ ಅವಾರ್ಡ್ ಪ್ರದಾನ ಮಾಡಲಿದ್ದಾರೆ. ಜಗದಲ್ಪುರದಲ್ಲಿ ಶರಣಾದ ನಕ್ಸಲರು, ಸ್ಥಳೀಯರು ಮತ್ತು ಬುದ್ಧಿಜೀವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya: ಜನವರಿ 11 ರಂದು ರಾಮಮಂದಿರದಲ್ಲಿ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವ
Palakkad: ಸಿಮೆಂಟ್ ಲಾರಿ ಪಲ್ಟಿಯಾಗಿ ನಾಲ್ವರು ಶಾಲಾ ವಿದ್ಯಾರ್ಥಿನಿಯರು ಬ*ಲಿ
SC:ಧಾರ್ಮಿಕ ಸ್ಥಳಗಳಿಗೆ ಸಂಬಂಧಿಸಿದ ದಾವೆ; ಕೋರ್ಟ್ ಗಳು ಆದೇಶಗಳನ್ನು ನೀಡಬಾರದು
One Nation One Election ಕೇಂದ್ರ ಸಚಿವ ಸಂಪುಟ ಅನುಮೋದನೆ : ವರದಿ
AAP: ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2100 ರೂ… ಕೇಜ್ರಿವಾಲ್ ಘೋಷಣೆ
MUST WATCH
ಹೊಸ ಸೇರ್ಪಡೆ
Ayodhya: ಜನವರಿ 11 ರಂದು ರಾಮಮಂದಿರದಲ್ಲಿ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವ
Session: ಅಂದು ಸಚಿವ ಸ್ಥಾನ ಇಲ್ಲವೆಂದಾಗ ಎಸ್.ಎಂ.ಕೃಷ್ಣರ ಮನೆ ಬಾಗಿಲು ಒದ್ದಿದ್ದೆ: ಡಿಕೆಶಿ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Chhattisgarh; ನಕ್ಸಲ್ ಪೀಡಿತ ಪ್ರದೇಶಗಳಿಗೆ ಅಮಿತ್ ಶಾ ಮೂರು ದಿನಗಳ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.