ಹಾಲು, ನೀರಿನಲ್ಲಿ ನಿಕ್ಕೆಲ್, ಸೀಸದ ಅಂಶವೇ ಎಲೂರು ಸಮಸ್ಯೆಗೆ ಕಾರಣ
Team Udayavani, Dec 9, 2020, 7:19 AM IST
ಎಲೂರು: ಆಂಧ್ರಪ್ರದೇಶದ ಎಲೂರು ಪಟ್ಟಣದಲ್ಲಿ 500ಕ್ಕೂ ಅಧಿಕ ಮಂದಿ ಅನಾರೋಗ್ಯಕ್ಕೆ ಒಳಗಾಗಲು ಮತ್ತು ಒಬ್ಬನ ಸಾವಿಗೆ ಹಾಲು ಮತ್ತು ನೀರಿನಲ್ಲಿ ಸೀಸ, ನಿಕ್ಕೆಲ್ನ ಅಂಶಗಳು ಸೇರಿಕೊಂಡದ್ದೇ ಕಾರಣ. ನವದೆದಹಲಿಯ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಇತರ ಪ್ರಮುಖ ಸಂಸ್ಥೆಗಳು ನಡೆಸಿದ ಪ್ರಾಥಮಿಕ ಅಧ್ಯಯನದಿಂದ ಈ ಅಂಶ ದೃಢಪಟ್ಟಿದೆ. ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ ರೆಡ್ಡಿ ಅವರಿಗೆ ಈ ವರದಿಯನ್ನು ಸಲ್ಲಿಸಲಾಗಿದೆ.
ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿ ಪ್ರಕಟನೆ ಬಿಡುಗಡೆ ಮಾಡಿದ್ದು, ಎಲೂರಿನಲ್ಲಿನ ಬೆಳವಣಿಗೆ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಿಎಂ ಆದೇಶ ನೀಡಿದ್ದಾರೆ ಎಂದು ಅದರಲ್ಲಿ ಹೇಳಲಾಗಿದೆ. ಜತೆಗೆ ಪ್ರತಿ ಯೊಬ್ಬರ ಆರೋಗ್ಯ ಮತ್ತು ಮಾನಸಿಕ ಸ್ಥಿತಿಯ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆಯೂ ಸಿಎಂ ಸೂಚಿಸಿದ್ದಾರೆ.
ಡಿಸಿಎಂ, ಆರೋಗ್ಯ ಸಚಿವ ಎ.ಕೆ.ಕೆ.ಶ್ರೀನಿವಾಸ ಮಾತ ನಾಡಿ ಅನಾರೋಗ್ಯಕ್ಕೆ ಒಳಗಾದವರು ಚೇತರಿಸಿ ಕೊಳ್ಳುತ್ತಿದ್ದಾರೆ. ಹೀಗಾಗಿ ಭೀತಿಗೆ ಒಳಗಾಗುವ ಅಗತ್ಯ ವಿಲ್ಲ ಎಂದು ಹೇಳಿದ್ದಾರೆ. ಆರೋಗ್ಯ ಇಲಾಖೆ ನೀಡಿದ ಮಾಹಿತಿಯಂತೆ ಒಟ್ಟು 505 ಮಂದಿಗೆ ಅನಾರೋಗ್ಯ ಉಂಟಾಗಿದೆ. ಈ ಪೈಕಿ 370 ಮಂದಿ ಚೇತರಿಸಿ ಕೊಂಡಿದ್ದಾರೆ ಮತ್ತು 120 ಮಂದಿ ಚಿಕಿತ್ಸೆ ಪಡೆ ಯುತ್ತಿದ್ದಾರೆ. 19 ಮಂದಿ ಯನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಜಯವಾಡ ಮತ್ತು ಗುಂಟೂರಿನ ಸರಕಾರಿ ಆಸ್ಪತ್ರೆಗಳಿಗೆ ಕಳು ಹಿಸಲಾಗಿದೆ ಎಂದು ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.