ವಿವಾಹಿತ ಮಹಿಳೆಯೊಂದಿಗೆ ಸಂಬಂಧ: ಕಾರಿನೊಳಗೆ ಕಟ್ಟಿಹಾಕಿ ವ್ಯಕ್ತಿಯ ಸಜೀವ ದಹನ
Team Udayavani, Apr 4, 2023, 3:12 PM IST
ಆಂಧ್ರ ಪ್ರದೇಶ: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನಿಟ್ಟುಕೊಂಡ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕಾರಿನಲ್ಲಿ ಕಟ್ಟಿಹಾಕಿ ಸಜೀವವಾಗಿ ದಹನ ಮಾಡಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ಚಿತ್ತೂರುನಲ್ಲಿ ನಡೆದಿರುವುದು ವರದಿಯಾಗಿದೆ.
ಮೃತರನ್ನು ನಾಗರಾಜು ಎಂದು ಗುರುತಿಸಲಾಗಿದೆ. ನಾಗರಾಜ್ ಅವರ ಕಿರಿಯ ಸಹೋದರ ಪುರುಷೋತ್ತಮ್ ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ರಾಮಚಂದ್ರಪುರಂ ಮಂಡಲದ ನಿವಾಸಿಯಾದ ವಿವಾಹಿತ ಮಹಿಳೆಯೊಬ್ಬರ ಜೊತೆ ಅಕ್ರಮವಾಗಿ ಸಂಬಂಧವನ್ನು ಇಟ್ಟುಕೊಂಡಿದ್ದರು.
ಈ ವಿಚಾರವನ್ನು ವಿವಾಹಿತ ಮಹಿಳೆಯಾಗಿರುವ ರಿಪುಂಜಯ ಅವರ ಮನೆಯವರು ವಿರೋಧಿಸಿದ್ದಾರೆ. ವಿಚಾರವನ್ನು ಬಗೆಹರಿಸುವ ಸಲುವಾಗಿ ಪುರುಷೋತ್ತಮ್ ಅವರ ಹಿರಿಯ ಸಹೋದರ ನಾಗರಾಜು ಅವರನ್ನು ಮಹಿಳೆಯ ಮನೆಯವರು ಕರೆದಿದ್ದಾರೆ.
ಇದನ್ನೂ ಓದಿ: ಹೀಗೂ ಉಂಟು: ಸಮಕಾಲೀನರಲ್ಲಿ ಓರ್ವ ಸಿಎಂ ಆದರೂ ಮತ್ತೊಬ್ಬರಿಗೆ ಸಚಿವ ಸ್ಥಾನವೂ ಸಿಗಲಿಲ್ಲ!
ಮಹಿಳೆಯ ಕುಟುಂಬ ಸದಸ್ಯರು ಮತ್ತು ನಾಗರಾಜು ಅಜ್ಞಾತ ಸ್ಥಳಕ್ಕೆ ಕಾರಿನಲ್ಲಿ ಹೋಗುತ್ತಿದ್ದಾಗ, ಮಹಿಳೆಯ ಮನೆಯವರು ನಾಗರಾಜು ಅವರನ್ನು ಥಳಿಸಿದ್ದಾರೆ. ಆ ಬಳಿಕಅವರನ್ನು ಕಾರಿನೊಳಗೆ ಹಗ್ಗದಿಂದ ಕಟ್ಟಿಹಾಕಲಾಗಿದೆ. ನಂತರ ಕಾರಿನಿಂದ ಇಳಿದು ಅದರ ಮೇಲೆ ಪೆಟ್ರೋಲ್ ಹಾಕಿ ಬೆಂಕಿಯಿಟ್ಟಿದ್ದಾರೆ.ಬೆಂಕಿ ಆಗುತ್ತಿದ್ದ ಕಾರನ್ನು ಬೆಟ್ಟದ ಕೆಳಗೆ ದೂಡಲು ಯತ್ನಿಸಿದ್ದಾರೆ. ಆದರೆ ಅದು ಸಾಧ್ಯವಾಗದೇ ಮರಕ್ಕೆ ಢಿಕ್ಕಿ ಹೊಡೆದು ಕಾರು ಅಲ್ಲೇ ನಿಂತಿದೆ. ಕಾರಿನೊಳಗಿದ್ದ ನಾಗರಾಜು ಬೆಂಕಿಯಲ್ಲಿ ಸಜೀವ ದಹನವಾಗಿದ್ದಾರೆ ಎಂದು ʼಇಂಡಿಯಾ ಟುಡೇʼ ವರದಿ ತಿಳಿಸಿದೆ.
ಅಕ್ಕಪಕ್ಕದಲ್ಲಿದ್ದ ಕೆಲ ಜನರು ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರಿನೊಳಗಿದ್ದ ನಾಗರಾಜು ಅವರನ್ನು ಉಳಿಸುವ ಯತ್ನವನ್ನು ಮಾಡಿದ್ದಾರೆ. ಆದರೆ ಅದು ಸಾಧ್ಯವಾಗಿಲ್ಲ. ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡು, ಆರೋಪಿಗಳಿಗೆ ಹುಡಕಾಟ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.