ತಿರುಪತಿಯಲ್ಲಿ ವ್ಯಕ್ತಿ ಆತ್ಮಹತ್ಯೆ: ಇತಿಹಾಸದಲ್ಲೇ ಇದೇ ಮೊದಲು
Team Udayavani, Dec 14, 2019, 10:13 PM IST
ಸಾಂದರ್ಭಿಕ ಚಿತ್ರ.
ತಿರುಮಲ: ವಿಶ್ವವಿಖ್ಯಾತ ತಿರುಪತಿ ದೇವಸ್ಥಾನದ ಸಮೀಪ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೇ ಮೊದಲ ಬಾರಿಗೆ ಇಂತಹ ಘಟನೆ ಸಂಭವಿಸಿದೆ.
ದೇಗುಲ ಬಳಿ ಶುಕ್ರವಾರ ನಸುಕಿನಲ್ಲಿ ತಮಿಳುನಾಡು ಮೂಲದ 40 ವರ್ಷದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೊದಲು ಇದನ್ನು ಸಹಜ ಸಾವು ಎನ್ನಲಾಗಿತ್ತು. ಪರಿಶೀಲನೆ ನಡೆಸಿದಾಗ ಆತ್ಮಹತ್ಯೆ ಎಂಬುದು ದೃಢಪಟ್ಟಿದೆ. ಘಟನೆ ಬಳಿಕ ಈ ಸ್ಥಳದಲ್ಲಿ ಶುದ್ಧೀಕರಣ ಕಾರ್ಯ ನೆರವೇರಿಸಲಾಯಿತು. ಇದಕ್ಕಾಗಿ ದೇಗುಲಕ್ಕೆ ಹೋಗುವ ರಸ್ತೆಯನ್ನು ಬಂದ್ ಮಾಡಲಾಗಿತ್ತು. ದೇಗುಲದ ಇತಿಹಾಸದಲ್ಲೇ ಪ್ರಪ್ರಥಮ ಬಾರಿ ಇಂತಹ ಘಟನೆ ನಡೆದಿದ್ದು, ವಿಮೋಚನೆ ಸಿಗುತ್ತದೆ ಎಂಬ ಮೌಡ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಪವಿತ್ರ ಕ್ಷೇತ್ರದಲ್ಲಿ ಬಲವಂತವಾಗಿ ಜೀವ ತ್ಯಜಿಸುವುದು ಅಪಶಕುನವಾಗುತ್ತದೆ. ಕ್ಷೇತ್ರದಲ್ಲಿ ಭಕ್ತರು ಇಂತಹ ಕೆಟ್ಟ ನಿರ್ಧಾರ ಕೈಗೊಳ್ಳಬೇಡಿ ಎಂದು ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.