![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jan 27, 2024, 1:29 PM IST
ಕೊಲ್ಲಂ: ಕೇರಳದಲ್ಲಿ ಕಾರ್ಯಕ್ರಮವೊಂದಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎಸ್‌ಎಫ್‌ಐ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ ಕಾರಣಕ್ಕೆ ಸಿಟ್ಟುಗೊಂಡ ರಾಜ್ಯಪಾಲ ಆರಿಫ್ ಮೊಹಮ್ಮದ್ ಅವರು ಕಾರಿನಿಂದ ಇಳಿದು ರಸ್ತೆ ಬದಿಯಲ್ಲೇ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆದಿದೆ.
ಕೇರಳದಲ್ಲಿ ನಡೆಯುತಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭ ರಸ್ತೆ ಬದಿಯಲ್ಲಿ ನಿಂತಿದ್ದ ಎಸ್‌ಎಫ್‌ಐ ಕಾರ್ಯಕರ್ತರು ರಾಜ್ಯಪಾಲರ ಕಾರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಬಳಿಕ ಗೋ ಬ್ಯಾಕ್ ಎಂಬ ಘೋಷಣೆಗಳನ್ನು ಕೂಗಿದ್ದಾರೆ ಇದರಿಂದ ಕೋಪಗೊಂಡ ರಾಜ್ಯಪಾಲರು ಕಾರನ್ನು ನಿಲ್ಲಿಸಿ ರಸ್ತೆಬದಿಯಲ್ಲೇ ಕುಳಿತು ಕಾರ್ಯಕರ್ತರನ್ನು ಬಂಧಿಸುವಂತೆ ಒತ್ತಾಯಿಸಿ ಧರಣಿ ಕುಳಿತರು. ಅಲ್ಲದೆ ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸುತ್ತಿದ್ದ ಎಸ್‌ಎಫ್‌ಐ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಅಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೂ ಛೀಮಾರಿ ಹಾಕಿದ್ದಾರೆ.
ಅಲ್ಲದೆ ಘಟನೆಯ ಕುರಿತು ಕೇಂದ್ರ ಗೃಹ ಸಚಿವರಿಗೆ ಕರೆ ಮಾಡಿ ಇಲ್ಲದಿದ್ದರೆ ಪ್ರಧಾನಿಗೆ ಕರೆ ಮಾಡುವಂತೆ ತಮ್ಮ ಅಧಿಕಾರಿಗಳಿಗೆ ರಾಜ್ಯಪಾಲರು ಕೇಳಿಕೊಂಡಿದ್ದಾರೆ.
ಈ ಗದ್ದಲದ ಬಗ್ಗೆ ಎಸ್‌ಎಫ್‌ಐ ಕಾರ್ಯಕರ್ತರೊಬ್ಬರು ಮಾತನಾಡಿ, ಯಾವುದೇ ಅರ್ಹತೆ ಇಲ್ಲದೇ ಬಿಜೆಪಿ ಕಚೇರಿಯಿಂದ ಶಿಫಾರಸು ಪಡೆದು ಸುರೇಂದ್ರನ್ ಅವರನ್ನು ಮತ್ತೆ ಸೆನೆಟ್‌ಗೆ ಕರೆದೊಯ್ಯಲಾಗಿದೆ. ಹಾಗಾಗಿ ಎಸ್‌ಎಫ್‌ಐ ಕಳೆದ ಹಲವು ತಿಂಗಳಿಂದ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ನಾವು ಯಾವುದೇ ರಾಜಿಗೆ ಸಿದ್ಧರಿಲ್ಲ. ಅವರು ನಮ್ಮನ್ನು “ಅಪರಾಧಿಗಳು” ಎಂದು ಕರೆದರು, ಆದ್ದರಿಂದ ನಾವು ರಾಜ್ಯಾದ್ಯಂತ ಪ್ರತಿಭಟನೆ ಮಾಡುವ ಮೂಲಕ ನಮ್ಮ ಪ್ರತಿಭಟನೆಯ ಶಕ್ತಿಯನ್ನು ಅವರಿಗೆ ತೋರಿಸುತ್ತೇವೆ. ಎಸ್‌ಎಫ್‌ಐ ಯಾವುದೇ ರಾಜಿಗೆ ಸಿದ್ಧವಿಲ್ಲ ಎಂಬ ಸಂದೇಶವನ್ನು ರವಾನಿಸಲು ಬಯಸುತ್ತೇವೆ ಎಂದು ಹೇಳಿದರು.
13 ಜನರ ವಿರುದ್ಧ ಪ್ರಕರಣ
ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆಗೆ ಸಂಬಂಧಿಸಿ ಪೊಲೀಸರು ಇದೀಗ 13 ಎಸ್‌ಎಫ್‌ಐ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಅವರ ವಿರುದ್ಧ ಐಪಿಸಿ ಸೆಕ್ಷನ್ 143, 144, 147, 283, 353, 124, 149 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
#WATCH | Kollam: SFI holds black-flag protest against Kerala Governor Arif Mohammed Khan. pic.twitter.com/OGFdg214Wm
— ANI (@ANI) January 27, 2024
Kerala Governor Arif Mohammad Khan sitting in protest on the roadside in Nilamel, Kollam after SFI cadres came close to his car with black flag.
The Gov stopped his car, questioned police, pulled out a chair from a nearby tea shop and is sitting on the roadside. pic.twitter.com/UoTophCPkN
— Megh Updates 🚨™ (@MeghUpdates) January 27, 2024
Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.