ತಮಿಳ್ನಾಡಲ್ಲಿ ಪ್ರತಿಭಟನೆ ಕಿಚ್ಚಿಟ್ಟ ಅನಿತಾ ಆತ್ಮಹತ್ಯೆ


Team Udayavani, Sep 3, 2017, 11:15 AM IST

anita.jpg

ಚೆನ್ನೈ: ವೈದ್ಯಕೀಯ ಸೀಟಿಗಾಗಿ ನೀಟ್‌ ಪರೀಕ್ಷೆ ಕಡ್ಡಾಯದ ವಿರುದ್ಧ ಹೋರಾಟಕ್ಕೆ ನಾಂದಿ ಹಾಡಿದ್ದ ದಲಿತ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಪ್ರಕರಣ ಈಗ ರಾಜಕೀಯವಾಗಿ ಮಹತ್ವ ಪಡೆದುಕೊಳ್ಳುತ್ತಿದೆ. ಶನಿವಾರ ತಮಿಳು ಸಂಘಟನೆಗಳು ಹಾಗೂ ವಿಪಕ್ಷಗಳು ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಿಳಿದಿವೆ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ತೀವ್ರ ಆಕ್ರೋಶ ವ್ಯಕ್ತಗೊಂಡಿದೆ.

ನೀಟ್‌ ಪರೀಕ್ಷೆಯಿಂದ ತಮಿಳುನಾಡಿಗೆ ವಿನಾಯ್ತಿ ನೀಡುವಂತೆ ಕೋರಿ ಕೋರ್ಟ್‌ ಮೆಟ್ಟಿಲೇರಿದ್ದ ವಿದ್ಯಾರ್ಥಿನಿ ಅನಿತಾ ತೀರ್ಪು ತನ್ನ ಪರವಾಗಿ ಬಂದಿಲ್ಲ ಎನ್ನುವ ಕಾರಣಕ್ಕಾಗಿ ಸಾಕಷ್ಟು ನೊಂದಿದ್ದಳು. ವ್ಯವಸ್ಥೆಯ ಬಗ್ಗೆಯೂ ಆಕ್ರೋಶಗೊಂಡಿದ್ದ ಅನಿತಾ ಅಸಹಾಯಕತೆ ಬಗ್ಗೆ ಡೆತ್‌ನೋಟ್‌ನಲ್ಲಿ ಬರೆದಿಟ್ಟು, ನೇಣು ಬಿಗಿದುಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದರು.

ವಿದ್ಯಾರ್ಥಿನಿಯೊಬ್ಬಳ ಸಾವಿಗೆ ಕಾರಣವಾದ ನೀಟ್‌ ಮಾದರಿ ಪರೀಕ್ಷೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಕೆಲ ರಾಜಕೀಯ ಸಂಘಟನೆಗಳು, ತಮಿಳು ಪರ ಸಂಘಟನೆಗಳು, ಸಿಪಿಎಂ, ಎಸ್‌ಎಫ್ಐ, ಡಿವೈಎಫ್ಐ ಸಂಘಟನೆಗಳು ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆ ನಡೆಸಿವೆ. ರಸ್ತೆಗಳನ್ನು ಬಂದ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿವೆ. ಕೂಡಲೇ ಕೇಂದ್ರ ಪರೀಕ್ಷಾ ಮಂಡಳಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳ ಬೇಕೆಂದು ಒತ್ತಾಯಿಸಿವೆ. ಸಾಮಾಜಿಕ ಜಾಲತಾಣ ಗಳಲ್ಲಿ ಅನಿತಾ ಸಾವಿನ ಬಗ್ಗೆ ದೇಶಾದ್ಯಂತ ಅನೇಕರು ಆಕ್ರೋಶ ದಿಂದ ಪೋಸ್ಟ್‌ಗಳನ್ನು ಪ್ರಕಟಿಸಿ ವಿರೋಧ ವ್ಯಕ್ತಪಡಿಸಿದ್ದಾರೆ.

ಎಐಎಡಿಎಂಕೆ ನಾಯಕ ಟಿಟಿವಿ ದಿನಕರನ್‌ ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಸಾಂತ್ವನ ಹೇಳಿ, “”ಅನಿತಾ ಸಾವು ಶಾಕ್‌ ನೀಡಿದೆ. ಇದೊಂದು ದುರಂತ” ಎಂದು ಟ್ವೀಟ್‌ ಮಾಡಿದ್ದಾರೆ. ಅಂತೆಯೇ ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ. ಸ್ಟಾಲಿನ್‌ ಕೂಡ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ, ಸಿಎಂ ಪಳನಿಸ್ವಾಮಿ ಅವರು ಅನಿತಾ ಕುಟುಂಬಕ್ಕೆ 7 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಟಾಪ್ ನ್ಯೂಸ್

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Australia won the BGT 2024-25

INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್‌ ಗಾವಸ್ಕರ್‌ ಟ್ರೋಫಿ ಸೋತ ಭಾರತ

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

BNG-winter

Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ

Womens-Commssion

Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!

HDK

JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್‌.ಡಿ.ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

1-army

Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ

1-mc

Twist; ಛತ್ತೀಸ್‌ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

New Delhi; Argument with classmates;

New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Australia won the BGT 2024-25

INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್‌ ಗಾವಸ್ಕರ್‌ ಟ್ರೋಫಿ ಸೋತ ಭಾರತ

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

BNG-winter

Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.