ರೈತರ ಬೇಡಿಕೆ ಈಡೇರಿಸದಿದ್ರೆ…ಮತ್ತೆ ದೆಹಲಿಯಲ್ಲಿ ಸತ್ಯಾಗ್ರಹ ಆರಂಭ: ಅಣ್ಣಾ ಹಜಾರೆ
ಅಂದು ಭೇಟಿಯಾಗಿದ್ದ ಸಚಿವರು, ಮುಖ್ಯಮಂತ್ರಿ ಬೇಡಿಕೆ ಈಡೇರಿಕೆ ಬಗ್ಗೆ ಭರವಸೆ ನೀಡಿದ್ದರು.
Team Udayavani, Dec 29, 2020, 12:31 PM IST
ಪುಣೆ:ಕೇಂದ್ರ ಸರ್ಕಾರ ಜಾರಿಗೆ ತಂದು ನೂತನ ಕೃಷಿ ಕಾಯ್ದೆಯನ್ನು ರದ್ದುಗೊಳಿಸಬೇಕೆಂಬ ರೈತರ ಬೇಡಿಕೆಯನ್ನು ಒಂದು ವೇಳೆ ಕೇಂದ್ರ ಸರ್ಕಾರ ಈಡೇರಿಸದಿದ್ದರೆ 2021ರ ಜನವರಿಯಲ್ಲಿ ಚಳವಳಿ ಹಮ್ಮಿಕೊಳ್ಳುವುದಾಗಿ ಸಾಮಾಜಿಕ ಕಾರ್ಯಕರ್ತ, ಭ್ರಷ್ಟಾಚಾರ ನಿಗ್ರಹ ಹೋರಾಟಗಾರ ಅಣ್ಣಾ ಹಜಾರೆ ತಿಳಿಸಿದ್ದಾರೆ.
ರಾಲೇಗಣ್ ಸಿದ್ದಿಯಲ್ಲಿರುವ ಅಣ್ಣಾ ಹಜಾರೆ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆ ಪ್ರಕಾರ, 2021ರ ಜನವರಿಯಲ್ಲಿ ಮತ್ತೆ ಸತ್ಯಾಗ್ರಹ ಮುಂದುವರಿಸುವುದಾಗಿ ತಿಳಿಸಿದ್ದು, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ.
ಆದರೆ ಸತ್ಯಾಗ್ರಹ ಆರಂಭಿಸುವ ಕುರಿತು ಪ್ರಕಟಣೆಯಲ್ಲಿ ಖಚಿತ ದಿನಾಂಕವನ್ನು ಉಲ್ಲೇಖಿಸಿಲ್ಲ. ನಾನು ರೈತರ ಪರವಾಗಿ ಕಳೆದ ಮೂರು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದೇನೆ. ಆದರೆ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಏನೂ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.
ರೈತರ ಬೇಡಿಕೆ ಈಡೇರಿಗಾಗಿ ಮೊದಲು ದೆಹಲಿಯ ರಾಮ ಲೀಲಾ ಮೈದಾನದಲ್ಲಿ 2018ರ ಮಾರ್ಚ್ 21ರಂದು ಉಪವಾಸ ಸತ್ಯಾಗ್ರಹ ಆರಂಭಿಸಿದ್ದೆ. ನಂತರ 7ನೇ ದಿನ ಕೃಷಿ ಖಾತೆ ರಾಜ್ಯ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿಯಾಗಿದ್ದರು ಎಂದು ಹಜಾರೆ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
ಇದನ್ನೂ ಓದಿ:ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಕೋಲಿನಿಂದ ಹೊಡೆದು ಕೊಂದ ದುಷ್ಟರು! ಮೂಕ ಪ್ರೇಕ್ಷಕರಾದ ಜನ
ಅಂದು ಭೇಟಿಯಾಗಿದ್ದ ಸಚಿವರು, ಮುಖ್ಯಮಂತ್ರಿ ಬೇಡಿಕೆ ಈಡೇರಿಕೆ ಬಗ್ಗೆ ಭರವಸೆ ನೀಡಿದ್ದರು. ಆದರೆ ಅದು ಈವರೆಗೂ ಈಡೇರಿಲ್ಲ. ಅದರ ಪರಿಣಾಮ 2019ರ ಜನವರಿ 30ರಂದು ಮತ್ತೊಮ್ಮೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದೆ. ಆ ಸಂದರ್ಭದಲ್ಲಿಯೂ ಕೇಂದ್ರ ಕೃಷಿ ಸಚಿವ ರಾಧಾಮೋಹನ್ ಸಿಂಗ್, ರಕ್ಷಣಾ ಸಚಿವಾಲಯದ ರಾಜ್ಯ ಖಾತೆ ಸಚಿವ ಸುಭಾಶ್ ಭಾಮ್ರೆ ಮತ್ತು ಫಡ್ನವೀಸ್ ಅವರು ಭರವಸೆ ಈಡೇರಿಕೆ ಕುರಿತು ಲಿಖಿತ ಭರವಸೆ ನೀಡಿದ್ದರು. ಆದರೆ ಅದು ಈವರೆಗೂ ಈಡೇರಿಲ್ಲ ಎಂದು ಆರೋಪಿಸಿದ್ದಾರೆ.
ಆ ಹಿನ್ನೆಲೆಯಲ್ಲಿ ನಾನು ದೆಹಲಿಯಲ್ಲಿ ಹೊಸ ವರ್ಷದ ಜನವರಿ ತಿಂಗಳಿನಲ್ಲಿ ಮತ್ತೆ ಸತ್ಯಾಗ್ರಹ ಆರಂಭಿಸುತ್ತೇನೆ ಎಂದು ಅಣ್ಣಾ ಹಜಾರೆ ತಿಳಿಸಿದ್ದು, ಈ ಮೂಲಕ ರೈತರ ಪ್ರತಿಭಟನೆಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.