Election: ಮಾ.14 ಅಥವಾ 15ಕ್ಕೆ ಲೋಕ ಚುನಾವಣೆ ದಿನಾಂಕ ಘೋಷಣೆ?
Team Udayavani, Mar 5, 2024, 10:52 PM IST
ನವದೆಹಲಿ: ಬಹು ನಿರೀಕ್ಷಿತ ಲೋಕಸಭೆ ಚುನಾವಣಾ ದಿನಾಂಕ ಮಾ.14 ಅಥವಾ 15ರಂದು ಘೋಷಣೆ ಆಗುವ ಸಾಧ್ಯತೆಗಳಿವೆ. ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಮೂಲಗಳು ಹೇಳಿವೆ. ಏಪ್ರಿಲ್-ಮೇನಲ್ಲಿ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.
2019ರಲ್ಲೂ ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆಗೆ ಚುನಾವಣೆ ನಡೆದಿತ್ತು. ಆಗ ಬಿಜೆಪಿ ಏಕಾಂಗಿಯಾಗಿ 303 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಗೆದ್ದಿದೆ. ಈ ಬಾರಿ ಬಿಜೆಪಿ ಈಗಾಗಲೇ 195 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ಪ್ರಧಾನಿ ಮೋದಿ ವಾರಾಣಸಿಯಿಂದ ಸ್ಪರ್ಧೆ ಮಾಡಲಿದ್ದಾರೆ. ಜತೆಗೆ ಬಿಜೆಪಿಯೊಂದೇ 370 ಸ್ಥಾನ ಗೆಲ್ಲುವ ಗುರಿಯನ್ನು ಹಾಕಿಕೊಂಡಿದೆ. ಸಾರ್ವತ್ರಿಕ ಚುನಾವಣೆ ವೇಳೆಯೇ ಐಪಿಎಲ್ ಪಂದ್ಯಾವಳಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.