Delhi Liquor Scam: ದೆಹಲಿಯ ಮತ್ತೊಬ್ಬ ಸಚಿವನಿಗೆ ಜಾರಿ ನಿರ್ದೇಶನಾಲಯ ಸಮನ್ಸ್
Team Udayavani, Mar 30, 2024, 10:48 AM IST
ನವದೆಹಲಿ: ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಕೆಲ ದಿನಗಳ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಅವರನ್ನು ಬಂಧಿಸಿದ್ದು ಇದೀಗ ದೆಹಲಿ ಸಾರಿಗೆ ಸಚಿವ ಮತ್ತು ಎಎಪಿ (AAP) ನಾಯಕ ಕೈಲಾಶ್ ಗಹ್ಲೋಟ್ (Kailash Gahlot) ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ಜಾರಿ ನಿರ್ದೇಶನಾಲಯ ಕಳುಹಿಸಿದ ನೊಟೀಸ್ ನಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ಕೈಲಾಶ್ ಗಹ್ಲೋಟ್ (Kailash Gahlot) ಅವರನ್ನು ಕೇಳಿಕೊಂಡಿದೆ.
ನಜಾಫ್‌ಗಢದ ಆಮ್ ಆದ್ಮಿ ಪಕ್ಷದ ಶಾಸಕರಾಗಿರುವ ಗೆಹ್ಲೋಟ್, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ಸಾರಿಗೆ, ಗೃಹ ಮತ್ತು ಕಾನೂನು ಸಚಿವರಾಗಿದ್ದಾರೆ. ಮದ್ಯ ನೀತಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಮತ್ತು ಪಿಎಂಎಲ್‌ಎ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಲು ಗೆಹ್ಲೋಟ್ ಅವರನ್ನು ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಮದ್ಯ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ ಎನ್ನಲಾಗಿದೆ, ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ (Manish Sisodia) ಮತ್ತು ಸಂಜಯ್ ಸಿಂಗ್ (Sanjay Singh) ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇದನ್ನೂ ಓದಿ: Water Crisis; ಕರ್ನಾಟಕ ಸೇರಿ ದಕ್ಷಿಣ ಭಾರತದ ಜಲಾಶಯಗಳು ಖಾಲಿ.. ಖಾಲಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.