ಭಾರತಕ್ಕೆ ಬರಬೇಕಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ
Team Udayavani, Aug 15, 2022, 11:20 PM IST
ಹೊಸದಿಲ್ಲಿ: ಶಾರ್ಜಾದಿಂದ ಹೈದರಾಬಾದ್‌ಗೆ ಹೊರಟಿದ್ದ ಇಂಡಿಗೋ ವಿಮಾನವು ಪಾಕಿಸ್ಥಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಸೋಮವಾರ ನಡೆದಿದೆ.
ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದೇ ಇದಕ್ಕೆ ಕಾರಣ. ಕಳೆದ 2 ವಾರಗಳಲ್ಲಿ ಈ ರೀತಿ ಪಾಕಿಸ್ಥಾನದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಿದ ಭಾರತದ ಎರಡನೇ ವಿಮಾನವಿದು.
ಶಾರ್ಜಾದಿಂದ ಹೊರಟಿದ್ದ ವಿಮಾನದಲ್ಲಿ ಏಕಾಏಕಿ ತಾಂತ್ರಿಕ ದೋಷವಿರುವುದು ಪೈಲಟ್‌ನ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆ ಯಲ್ಲಿ ಕೂಡಲೇ ವಿಮಾನವನ್ನು ಪಾಕಿಸ್ಥಾನದ ಕರಾಚಿಯತ್ತ ತಿರುಗಿಸಲಾಯಿತು. ಅಲ್ಲಿನ ಅಧಿಕಾರಿಗಳ ಅನುಮತಿ ಪಡೆದು ವಿಮಾನ ವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ಜತೆಗೆ, ಪ್ರಯಾಣಿಕರನ್ನು ಭಾರತಕ್ಕೆ ಕರೆತರುವ ಸಲುವಾಗಿ ಬೇರೊಂದು ಹೆಚ್ಚುವರಿ ವಿಮಾನ ವನ್ನು ಕರಾಚಿಗೆ ಕಳುಹಿಸಲಾಗಿದೆ ಎಂದು ಇಂಡಿಗೋ ಏರ್‌ಲೈನ್ಸ್ ತಿಳಿಸಿದೆ.
ಜುಲೈ 5ರಂದು ಸ್ಪೈಸ್‌ಜೆಟ್‌ನ ದಿಲ್ಲಿ- ದುಬಾೖ ವಿಮಾನದ ಇಂಧನ ಸೂಚಕದಲ್ಲಿ ಲೋಪ ಕಂಡುಬಂದ ಕಾರಣ, ವಿಮಾನವನ್ನು ಪಾಕಿಸ್ಥಾನದ ಕರಾಚಿಯಲ್ಲಿ ಭೂಸ್ಪರ್ಶ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.