![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 15, 2020, 10:03 AM IST
ಹೊಸದಿಲ್ಲಿ: ದೇಶದಲ್ಲಿ ಕೋವಿಡ್ ಸೋಂಕು ದಿನೇ ದಿನೆ ತೀವ್ರವಾಗಿ ಏರುತ್ತಿರುವುದರಿಂದ, ಸೆ. 25ರಿಂದ ಮತ್ತೆ 46 ದಿನಗಳ ದಿಗ್ಬಂಧನ ಹೇರಲಾಗುತ್ತದೆ! ಹೀಗೊಂದು ವದಂತಿ ಸಾಮಾಜಿಕ ತಾಣಗಳಲ್ಲಿ ಜೋರಾಗಿದೆ. ಇದನ್ನು ಸ್ವತಃ ಪ್ರೆಸ್ ಬ್ಯೂರೋ ಆಫ್ ಇಂಡಿಯಾ (ಪಿಐಬಿ) ನಿರಾಕರಿಸಿದೆ.
ಅಂತಹ ಯಾವುದೇ ಪ್ರಸ್ತಾವಗಳು ಸರಕಾರದ ಮುಂದಿಲ್ಲ ಎಂದು ಖಚಿತಪಡಿಸಿದೆ. ಸದ್ಯ ಸಾಮಾಜಿಕ ತಾಣಗಳಲ್ಲಿ, ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ್ದೆಂದು (ಎನ್‌ಡಿಎಂಎ) ಹೇಳಲಾಗಿರುವ ಆದೇಶದ ಪ್ರತಿಯೊಂದು ಓಡಾಡುತ್ತಿದೆ. ಅದರ ಪ್ರಕಾರ, ಎನ್‌ಡಿಎಂಎ, ಯೋಜನಾ ಆಯೋಗದ ಜತೆ ಸೇರಿ, ಸೆ. 25ರ ಮಧ್ಯರಾತ್ರಿಯಿಂದ ಮತ್ತೆ 46 ದಿನಗಳ ಕಾಲ ದಿಗ್ಬಂಧನ ಜಾರಿ ಮಾಡಬೇಕೆಂದು, ಸ್ವತಃ ಪ್ರಧಾನಮಂತ್ರಿ ಕಚೇರಿ, ಕೇಂದ್ರ ಗೃಹಕಚೇರಿಗೇ ನಿರ್ದೇಶನ ನೀಡಿದೆ!
ಹೀಗೆ ಎಲ್ಲೆಡೆ ಮತ್ತೆ ಲಾಕ್ ಡೌನ್ ಎಂಬ ಸುದ್ದಿ ಹರಿದಾಡುತ್ತಿದ್ದು, ಇದರ ಸತ್ಯಾಸತ್ಯತೆಯನ್ನು ಪರಿಶೀಲಿಸಿದಾಗ, ಎನ್‌ಡಿಎಂಎ ಅಂತಹ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಸ್ಪಷ್ಟವಾಗಿದೆ. ಪಿಐಬಿ ಫ್ಯಾಕ್ಟ್ ಚೆಕ್ ನಲ್ಲಿ ಇಂತಹ ಯಾವುದೇ ಆದೇಶ ಕೇಂದ್ರ ಸರ್ಕಾರ ಹೊರಡಿಸಿಲ್ಲ ಎಂದು ಪಿಐಬಿ ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ.
Claim: An order purportedly issued by National Disaster Management Authority claims that it has directed the government to re-impose a nationwide #Lockdown from 25th September. #PIBFactCheck: This order is #Fake. @ndmaindia has not issued any such order to re-impose lockdown. pic.twitter.com/J72eeA62zl
— PIB Fact Check (@PIBFactCheck) September 12, 2020
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.