ಎಚ್ಚರ! ಇನ್ನೆರಡು ತಿಂಗಳು ಪರಿತಾಪ! ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚು ಖಚಿತ

ಮಳೆಯಿಂದ ಪರಿಸ್ಥಿತಿ ನಿಯಂತ್ರ ನಿರೀಕ್ಷೆ: ಐಎಂಡಿ

Team Udayavani, Apr 1, 2023, 7:15 AM IST

ಎಚ್ಚರ! ಇನ್ನೆರಡು ತಿಂಗಳು ಪರಿತಾಪ! ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚು ಖಚಿತ

ನವದೆಹಲಿ/ಬೆಂಗಳೂರು: ಪ್ರಸಕ್ತ ಸಾಲಿನ ಬೇಸಗೆ ಪ್ರಖರವಾಗಿ ಇರಲಿದೆ ಎನ್ನುವುದು ತಾಪಮಾನ ಏರಿಕೆಯಿಂದ ದೃಢವಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಕೂಡ ಶನಿವಾರ ಈ ಅಂಶವನ್ನು ಪುಷ್ಟೀಕರಿಸಿದೆ. ಕರ್ನಾಟಕ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಮುಂದಿನ 2 ತಿಂಗಳು ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿಯೇ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ಮುನ್ನೆಚ್ಚರಿಕೆ ನೀಡಿದೆ.

ಏಪ್ರಿಲ್‌ನಿಂದ ಜೂನ್‌ ಅವಧಿಯಲ್ಲಿ ದೇಶದ ಕೇಂದ್ರ, ಪೂರ್ವ, ವಾಯವ್ಯ ಭಾಗದಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚೇ ಆಗಿರುತ್ತದೆ. ಇದರ ಜತೆಗೆ ಬಿಹಾರ, ಜಾರ್ಖಂಡ್‌, ಉತ್ತರ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ಛತ್ತೀಸ್‌ಗಡ, ಮಹಾರಾಷ್ಟ್ರ, ಗುಜರಾತ್‌, ಪಂಜಾಬ್‌, ಹರ್ಯಾಣಗಳ ಕೆಲವು ಭಾಗಗಳಲ್ಲಿ ತಾಪಮಾನ ಸಾಮನ್ಯಕ್ಕಿಂತ ಹೆಚ್ಚೇ ಆಗಿರಲಿದೆ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ತಿಳಿಸಿದ್ದಾರೆ.

ನಿರ್ಧಾರ ಹೇಗೆ?
ಬಯಲು ಪ್ರದೇಶದಲ್ಲಿ ತಾಪಮಾನ ಕನಿಷ್ಠ 40 ಡಿಗ್ರಿ ಸೆಲಿÏಯಸ್‌, ಕರಾವಳಿಯಲ್ಲಿ 37 ಡಿಗ್ರಿ ಸೆಲಿÏಯಸ್‌, ಗುಡ್ಡಗಾಡು ಪ್ರದೇಶದಲ್ಲಿ 30 ಡಿಗ್ರಿ ಸೆಲಿÏಯಸ್‌ ಏರಿಕೆಯಾದರೆ ಅದನ್ನು ಬಿಸಿ ಗಾಳಿಯ ಪರಿಸ್ಥಿತಿ ಎಂದು ತೀರ್ಮಾನಿಸಲಾಗುತ್ತದೆ. 1901ರ ಬಳಿಕ ಫೆಬ್ರವರಿಯಲ್ಲಿ ಎರಡನೇ ಅತ್ಯಧಿಕ ತಾಪಮಾನ ತಿಂಗಳು ಎಂದು ದಾಖಲೂ ಆಗಿತ್ತು. ಕಳೆದ ವರ್ಷದ ಮಾರ್ಚ್‌ನಲ್ಲಿ ಕೂಡ 121 ವರ್ಷಗಳ ಮೂರನೇ ಅತ್ಯಂತ ಗರಿಷ್ಠ ಒಣ ಹವೆ ಎಂಬ ಅಂಶ ಕೂಡ ದಾಖಲಾಗಿತ್ತು.

ಮಳೆಯೂ ಬೀಳಲಿದೆ:
ತಾಪಮಾನ ಏರಿಕೆಯ ಜತೆಗೆ ಈ ತಿಂಗಳಲ್ಲಿ ದೇಶದ ಅಲ್ಲಲ್ಲಿ ಮಳೆಯೂ ಬೀಳಲಿದೆ. ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವರ್ಷ ಧಾರೆಯ ಸಿಂಚನ ತಂಪನ್ನೆರೆಯುವ ನಿರೀಕ್ಷೆ ಇದೆ. 1971ರಿಂದ 2020ರ ನಡುವಿನ ಅವಧಿಯಲ್ಲಿ ಏಪ್ರಿಲ್‌ನಲ್ಲಿ ಸರಾಸರಿ ಮಳೆಯಾಗಿತ್ತು. ಹೀಗಾಗಿ, ಈ ತಿಂಗಳಲ್ಲಿ ಮಳೆ ಬೀಳುವ ಸಾಧ್ಯತೆಯನ್ನು ಐಎಂಡಿ ನೀಡಿದೆ.

ಬೆಳೆಗಳಿಗೆ ಹಾನಿ:
ಮುಂಗಾರು ಪೂರ್ವ ಮಳೆಯಿಂದಾಗಿ ಉತ್ತರ ಪ್ರದೇಶದ ಕೆಲವು ಭಾಗಗಳು, ಹರ್ಯಾಣ, ಪಂಜಾಬ್‌, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳಲ್ಲಿನ ತರಕಾರಿ ಮತ್ತು ಹಣ್ಣುಗಳ ನಾಶವಾಗಿದೆ.

ಬೆಂಗಳೂರಲ್ಲಿ 35; ಕಲಬುರಗಿಯಲ್ಲಿ 38
ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ತಾಪಮಾನ 35 ಡಿಗ್ರಿ ಸೆಲಿÏಯಸ್‌ ದಾಖಲಾಗಿದೆ. ಕಲಬುರಗಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ 38 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ರಾಯಚೂರು 37, ಗದಗ 36.2, ವಿಜಯಪುರ, ಮೈಸೂರು, ಶಿವಮೊಗ್ಗ ತಲಾ 36, ಮಂಡ್ಯ 35.6, ಮಂಗಳೂರು 34.5 ಡಿಗ್ರಿ ಸೆಲಿÏಯಸ್‌ ಉಷ್ಣಾಂಶ ದಾಖಲಾಗಿದೆ.

ಇದೇ ವೇಳೆ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಏ.3ರ ವರೆಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ಕೊಟ್ಟಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಏ.3ರ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಗಳಿವೆ.

ಶನಿವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆದಿದೆ. ಕೋಲಾರದ ರಾಯಲ್ಪಾಡುವಿನಲ್ಲಿ 7 ಸೆಂ.ಮೀ, ದೇವನಹಳ್ಳಿಯಲ್ಲಿ 3 ಸೆಂ.ಮೀ ಮಳೆಯಾಗಿದೆ.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.