ಬಿಜೆಪಿ ವಿರೋಧಿ ರಂಗ ಸಾಧ್ಯತೆ : ಪವಾರ್ ಭೇಟಿಯಾದ ರಾಹುಲ್
Team Udayavani, Mar 15, 2018, 11:36 AM IST
ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿ ವಿರೋಧಿ ರಂಗವನ್ನು ರೂಪಿಸುವ ನಿಟ್ಟಿನಲ್ಲಿ ಸಮಾನ ಮನಸ್ಕ ನಾಯಕರನ್ನು ತಲುಪುವ ಯತ್ನವಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು, ಅವರ ನಿವಾಸದಲ್ಲೇ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ರಾಹುಲ್ ಗಾಂಧಿ ಈಗಿನ್ನು ಈ ವಿಷಯದಲ್ಲಿ ಇದೇ ಮಾರ್ಚ್ 28ರಂದು ದಿಲ್ಲಿಗೆ ಭೇಟಿ ನೀಡಲಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಲಿದ್ದಾರೆ. 2019ರ ಮಹಾ ಚುನಾವಣೆಯಲ್ಲಿ ತಾವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಎದುರಿಸಲು ಬಲಿಷ್ಠವಾದ ಮೈತ್ರಿಕೂಟವನ್ನು ರಚಿಸುವ ಅಗತ್ಯವಿದೆ ಎಂಬುದನ್ನು ರಾಹುಲ್, ಮಮತಾ ಬ್ಯಾನರ್ಜಿಗೆ ಮನವರಿಕೆ ಮಾಡಲಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಇದೇ ವಿಷಯಕ್ಕೆ ಸಂಬಂಧಿಸಿ ವಿರೋಧ ಪಕ್ಷಗಳ ನಾಯಕರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ದಿಲ್ಲಿಯಲ್ಲಿ ಮೈತ್ರಿ ಭೋಜನ ಕೂಟವನ್ನು ಏರ್ಪಡಿಸಿದ್ದರು. ಅದರಲ್ಲಿ 20 ರಾಜಕೀಯ ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು.
ಉತ್ತರ ಪ್ರದೇಶದ ಎರಡು ನಿರ್ಣಾಯಕ ಸಂಸದೀಯ ಕ್ಷೇತ್ರಗಳಾದ ಗೋರಖ್‌ಪುರ ಮತ್ತು ಫೂಲ್‌ಪುರ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವಲ್ಲಿ ಎಸ್‌ಪಿ-ಬಿಎಸ್‌ಪಿ ಮೈತ್ರಿ ಕೂಟಕ್ಕೆ ಸಾಧ್ಯವಾಗಿರುವ ಹಿನ್ನೆಲೆಯಲ್ಲಿ, ಮುಂದಿನ ಮಹಾ ಚುನಾವಣೆಗೆ ಬಿಜೆಪಿ ವಿರೋಧಿ ಬಲಿಷ್ಠ ಮೈತ್ರಿ ರಂಗವನ್ನು ರೂಪಿಸುವುದು ಈಗ ಬಹುತೇಕ ಖಚಿತವಾಗಿರುವಂತಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.