ಜಾಮಿಯಾ ವಿವಿ ಹಿಂಸಾಚಾರ: ಕಾಂಗ್ರೆಸ್ ಮಾಜಿ ಶಾಸಕರ ವಿರುದ್ಧ ಎಫ್ಐಆರ್ ದಾಖಲು
Team Udayavani, Dec 18, 2019, 8:31 AM IST
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಾನುವಾರದಂದು (ಡಿ. 15) ನಡೆಸಿದ ಪ್ರತಿಭಟನೆ ಹಿಂಸಾತ್ಮಕ ರೂಪ ತಾಳಿತ್ತು. ಇದೀಗ ಪೊಲೀಸರು ಎಫ್ ಐಆರ್ ದಾಖಲಿಸಿದ್ದು ಜನರನ್ನು ಪ್ರಚೋದಿಸಿದ ಮತ್ತು ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್ ನ ಮಾಜಿ ಶಾಸಕ ಆಸಿಫ್ ಖಾನ್ ವಿರುದ್ಧ ಪ್ರಕರಣ ದಾಖಲಾಗಿದೆ.
ಜಾಮಿಯಾ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ನಲ್ಲಿ ಓಖ್ಲಾ ಮಾಜಿ ಕಾಂಗ್ರೆಸ್ ಶಾಸಕ ಆಸಿಫ್ ಜೊತೆಗೆ ಇತರ ಆರು ಜನರ ಹೆಸರು ಕೂಡ ತಳಕು ಹಾಕಿಕೊಂಡಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಪ್ರಕರಣದಲ್ಲಿ ಇತರ ಆರೋಪಿಗಳೆಂದರೆ ಸ್ಥಳೀಯ ರಾಜಕಾರಣಿಗಳಾದ ಆಶು ಖಾನ್, ಮುಸ್ತಾಫಾ ಮತ್ತು ಹೈದರ್, ಎಐಎಸ್ಎ ಸದಸ್ಯ ಚಂದನ್ ಕುಮಾರ್, ಎಸ್ಐಒ ಸದಸ್ಯ ಆಸಿಫ್ ತನ್ಹಾ ಮತ್ತು ಸಿವೈಎಸ್ಎಸ್ ಸದಸ್ಯ ಕಾಸಿಮ್ ಉಸ್ಮೈನ್.
ಡಿಸೆಂಬರ್ 15 ರ ಭಾನುವಾರದಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿತ್ತು. ಅಪಾರ ಸಾರ್ವಜನಿಕ ಆಸ್ತಿಪಾಸ್ತಿಗಳು ನಷ್ಟವಾಗಿದ್ದವು.
ಈ ಕುರಿತು ಸ್ಪಷ್ಟನೆ ನೀಡಿದ ಕಾಂಗ್ರೆಸ್ ನ ಮಾಜಿ ಶಾಸಕ ಆಸಿಫ್ ಖಾನ್, ನಾವು ದಂಗೆಕೋರರಲ್ಲ. ಕಾನೂನಿನ ವ್ಯಾಪ್ತಿಯನ್ನು ಮೀರಿ ವರ್ತಿಸಿಲ್ಲ. ಶಾಂತಿಯುತ ಪ್ರತಿಭಟನೆಯಲ್ಲಿ ಮಾತ್ರ ಭಾಗಿಯಾಗಿದ್ದೇವು. ಎಂದು ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.