Congress ಪಕ್ಷ ವಿರೋಧಿ ಚಟುವಟಿಕೆ: ಹರಿಯಾಣದಲ್ಲಿ 13 ನಾಯಕರ ಉಚ್ಚಾಟನೆ
Team Udayavani, Sep 28, 2024, 12:01 AM IST
ಚಂಡೀಗಢ: ಹರಿಯಾಣದಲ್ಲಿ ವಿಧಾನಸಭಾ ಚುನಾ ವಣೆ ಸಮೀಪಿಸುತ್ತಿರುವಂತೆಯೇ ಪ್ರದೇಶ ಕಾಂಗ್ರೆಸ್ ಸಮಿತಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ 13 ಮಂದಿಯನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾ ಟಿಸಿದೆ. ಅಧಿಕೃತ ಅಭ್ಯರ್ಥಿಗಳ ವಿರುದ್ಧ ಉಚ್ಚಾಟನೆಗೊಂಡ ನಾಯಕರು ಕೆಲಸ ಮಾಡಿದ್ದಾರೆ ಎಂಬ ಆರೋಪ ಹೊರಿಸಲಾಗಿದೆ. ಅ.5ರಂದು ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಭಾರೀ ಆಕ್ರೋಶ ಉಂಟಾಗಿತ್ತು. ನಾಯಕರ ಅಸಮಾಧಾನ ತಣಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ವರಿಷ್ಠರು ನಡೆಸಿದ ಪ್ರಯತ್ನಗಳು ಕೈಗೂಡಿಲ್ಲ. ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕರು ನಡೆಸಿದ ಸಂಧಾನ ಸೂತ್ರ ಯಶಸ್ವಿಯಾಗಿದೆ. ಕೆಲವೆಡೆ ಸಿಡಿದು ನಿಂತ ನಾಯಕರು ಉಮೇದುವಾರಿಕೆ ಹಿಂಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.