ಡಿಆರ್‌ಡಿಒ ಅಭಿವೃದ್ಧಿಪಡಿಸಿದ ಔಷಧ ತುರ್ತು ಸಂದರ್ಭದಲ್ಲಿ ಬಳಕೆಗೆ ಅನುಮತಿ
Team Udayavani, May 8, 2021, 9:06 PM IST
ನವದೆಹಲಿ: ‘ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್‌ಡಿಒ) ಕೋವಿಡ್ ತಡೆಗೆ ಅಭಿವೃದ್ಧಿಪಡಿಸಿದ ಔಷಧವನ್ನು ತುರ್ತು ಸಂದರ್ಭದಲ್ಲಿ ಸಹಾಯಕ ಚಿಕಿತ್ಸೆಯ ರೂಪದಲ್ಲಿ ಬಳಸಲು ಭಾರತೀಯ ಔಷಧ ಮಹಾನಿಯಂತ್ರಕರು (ಡಿಸಿಜಿಐ) ಅನುಮತಿ ನೀಡಿದ್ದಾರೆ’ ಎಂದು ರಕ್ಷಣಾ ಸಚಿವಾಲಯವು ಶನಿವಾರ ತಿಳಿಸಿದೆ.
2–ಡಯಾಕ್ಸಿ–ಡಿ–ಗ್ಲೂಕೋಸ್ (2–ಡಿಜಿ) ಎಂಬ ಬಾಯಿಯಿಂದ ಸೇವಿಸಬಹುದಾದ ಈ ಔಷಧವು ಕೋವಿಡ್‌ಗೆ ಒಳಗಾಗಿ ಆಸ್ಪತ್ರೆಗೆ ಸೇರಿದ ರೋಗಿಗಳು ಶೀಘ್ರವಾಗಿ ಗುಣಮುಖರಾಗಲು ನೆರವಾಗುತ್ತದೆ. ಅಲ್ಲದೆ, ಆಮ್ಲಜನಕದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ. ಸಣ್ಣ ಪೊಟ್ಟಣಗಳಲ್ಲಿ ಪುಡಿಯ ರೂಪದಲ್ಲಿ ಬರುವ ಈ ಔಷಧವನ್ನು ನೀರಿನಲ್ಲಿ ಮಿಶ್ರಣ ಮಾಡಿ ಸೇವಿಸಬಹುದು. ಈ ಔಷಧವು ಸೋಂಕಿತ ಕೋಶಗಳ ಮೇಲೆ ಕಾರ್ಯಾಚರಣೆ ಮಾಡುವುದರಿಂದ ಅಮೂಲ್ಯ ಜೀವಗಳನ್ನು ಉಳಿಸಲು ಇದು ನೆರವಾಗಲಿದೆ ಎಂದು ಪ್ರಯೋಗಗಳಿಂದ ದೃಢಪಟ್ಟಿದೆ ಸಚಿವಾಲಯ ಹೇಳಿದೆ.
2–ಡಿಜಿ ಔಷಧವನ್ನು ಹೈದರಾಬಾದ್‌ನ ಡಾ. ರೆಡ್ಡೀಸ್ ಲ್ಯಾಬ್‌ನ ಸಹಯೋಗದಲ್ಲಿ ಡಿಆರ್‌ಡಿಒದ ಇನ್‌ಸ್ಟಿಟ್ಯೂಟ್ ಆಫ್ ನ್ಯೂಕ್ಲಿಯರ್ ಮೆಡಿಸಿನ್ ಅಂಡ್ ಅಲೈಡ್ ಸೈನ್ಸಸ್ (ಐಎನ್‌ಎಂಎಎಸ್) ಪ್ರಯೋಗಾಲಯದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಈ ಔಷಧವು ದೇಹವನ್ನು ಸೇರಿದ ಬಳಿಕ ಸೋಂಕಿತ ಜೀವಕೋಶಗಳ ಮೇಲೆ ಸಂಗ್ರಹಗೊಂಡು, ಅಲ್ಲಿ ವೈರಸ್ ಅಭಿವೃದ್ಧಿಹೊಂದುವುದನ್ನು ತಡೆಯುತ್ತದೆ. 2–ಡಿಜಿ ಔಷಧದ ಸಹಾಯದಿಂದ ಚಿಕಿತ್ಸೆ ಪಡೆದ ರೋಗಿಗಳು ಇತರ ರೋಗಿಗಳಿಗಿಂತ ಶೀಘ್ರದಲ್ಲಿ ಗುಣಮುಖರಾಗಿರುವುದು ಕಂಡುಬಂದಿದೆ ಎಂದು ಸಚಿವಾಲಯ ತಿಳಿಸಿದೆ.
ಈ ಔಷಧವನ್ನು ಸುಲಭವಾಗಿ ತಯಾರಿಸಿ ಎಲ್ಲರಿಗೂ ಪೂರೈಸಬಹುದಾಗಿದೆ. ಸಾಮಾನ್ಯದಿಂದ ಗಂಭೀರ ಸ್ವರೂಪದ ಕೋವಿಡ್ ರೋಗಿಗಳ ಮೇಲೆ ಈ ಔಷಧವನ್ನು ತುರ್ತು ಸಂದರ್ಭದಲ್ಲಿ ಸಹಾಯಕ ಚಿಕಿತ್ಸೆಯ ರೂಪದಲ್ಲಿ (ಪ್ರಾಥಮಿಕ ಚಿಕಿತ್ಸೆಯ ಜತೆಯಲ್ಲೇ, ಅದಕ್ಕೆ ಪೂರಕವಾಗುವಂತೆ ಇನ್ನೊಂದು ಚಿಕಿತ್ಸೆ ನೀಡುವುದನ್ನು ಸಹಾಯಕ ಚಿಕಿತ್ಸೆ ಎನ್ನಲಾಗುತ್ತದೆ) ಬಳಸಲು ಮೇ 1ರಂದು ಡಿಸಿಜಿಐ ಅನುಮತಿ ನೀಡಿತ್ತು ಎಂದು ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.