ಅಯೋಧ್ಯೆ ಸಂಧಾನ ಪ್ರಕ್ರೀಯೆ ಪುನಾರಂಭಕ್ಕೆ ಮನವಿ
Team Udayavani, Sep 17, 2019, 5:18 AM IST
ನವದೆಹಲಿ: ಅಯೋಧ್ಯೆ ವಿಚಾರದಲ್ಲಿ ಸಂಧಾನ ಪ್ರಕ್ರಿಯೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿ ಒಂದು ತಿಂಗಳು ಕಳೆದ ಬಳಿಕ ಮತ್ತೆ ಮಧ್ಯಸ್ಥಿಕೆ ವಹಿಸಬೇಕು ಎಂಬ ಬೇಡಿಕೆ ಬಂದಿದೆ. ಸುನ್ನಿ ವಕ್ಫ್ ಮಂಡಳಿ, ನಿರ್ವಾಣಿ ಅಖಾಡ ಈ ಬಗ್ಗೆ ಸರ್ವೋನ್ನತ ನ್ಯಾಯಾಲಯದ ಮಧ್ಯಸ್ಥಿಕೆ ಮಂಡಳಿಗೆ ಪತ್ರ ಬರೆದಿವೆ. ಮಂಡಳಿಯ ಮುಖ್ಯಸ್ಥರಾಗಿದ್ದ ನಿವೃತ್ತ ನ್ಯಾಯ ಮೂರ್ತಿ ಎಫ್.ಎಂ.ಐ.ಖಲೀಫುಲ್ಲಾ ನೇತೃತ್ವದ ಸಮಿತಿ ಅದನ್ನು ಸ್ವೀಕರಿಸಿದೆ. ಸಮಿತಿ ಈಗ ಸುಪ್ರೀಂಕೋರ್ಟ್ ನಿರ್ದೇಶನವನ್ನು ಎದುರು ನೋಡುತ್ತಿದೆ.
ವಿರೋಧ: ಈ ನಡುವೆ ಜಮೀನು ಮಾಲೀಕತ್ವ ಕೇಸಿನಲ್ಲಿ ಶ್ರೀರಾಮ ಹುಟ್ಟಿದ ಸ್ಥಳವನ್ನು ಪಾರ್ಟಿಯನ್ನಾಗಿ ಮಾಡುವುದರ ಬಗ್ಗೆ ಮುಸ್ಲಿಂ ಸಂಘಟನೆಗಳು ವಿರೋಧ ಮಾಡಿವೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಸಾಂವಿಧಾನಿಕ ಪೀಠದ ಮುಂದೆ ವಾದಿಸಿದ ರಾಜೀವ್ ಧವನ್ ವಿವಾದಿತ ಸ್ಥಳದ ಬಗ್ಗೆ ಯಾರೂ ಹಕ್ಕು ಪ್ರತಿಪಾದಿಸದಂತೆ ಇರುವ ಹುನ್ನಾರ ಇದಾಗಿದೆ ಎಂದರು.
ಇದೇ ವೇಳೆ ಅಯೋಧ್ಯೆ ವಿಚಾರದಲ್ಲಿ ಸುಪ್ರೀಂಕೋರ್ಟ್‌ಗೆ ವಿಚಾರಣೆ ನಡೆಸಲು ಹಕ್ಕು ಇಲ್ಲ ಎಂದು ವ್ಯಕ್ತಿ ಮುಖ್ಯ ನ್ಯಾಯಮೂರ್ತಿಗಳಿಗೆ 117 ಪತ್ರ ಬರೆದಿದ್ದಾನೆ. ಈ ಬಗ್ಗೆ ಆತ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾನೆ ಎಂದು ಮುಸ್ಲಿಂ ಸಂಘಟನೆಗಳ ಪರ ವಕೀಲ ರಾಜೀವ್ ಧವನ್ ಹೇಳಿದ್ದಾರೆ. ಅದಕ್ಕೆ ನ್ಯಾಯಪೀಠ ಈ ಬಗ್ಗೆ ತಮಗೆ ಅರಿವು ಇಲ್ಲ ಎಂದಿತು.
ಮತ್ತೂಂದೆಡೆ ಅಯೋಧ್ಯೆ ಪ್ರಕರಣದ ವಿಚಾರಣೆಯ ನೇರ ಪ್ರಸಾರ ನಡೆಸಲು ಸಾಧ್ಯವಿದೆಯೇ ಎಂಬ ವಿಚಾರದ ಬಗ್ಗೆ ಪರಿಶೀಲನೆ ನಡೆಸುವಂತೆ ಮುಖ್ಯ ನ್ಯಾಯಮೂರ್ತಿ ಸುಪ್ರೀಂಕೋರ್ಟ್ ರಿಜಿಸ್ಟ್ರಿಗೆ ಸೂಚನೆ ನೀಡಿದ್ದಾರೆ. ಎಷ್ಟು ಸಮಯದ ಅವಧಿಯಲ್ಲಿ ಅದನ್ನು ಜಾರಿಗೊಳಿಸಲು ಸಾಧ್ಯವಿದೆ ಎನ್ನುವುದನ್ನು ಸೂಚಿಸಿ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.