ED ಮುಂದೆ ಹಾಜರಾಗಿ; ಕಾನೂನಿನೊಂದಿಗೆ ಆಡಬೇಡಿ: ಕಾರ್ತಿಗೆ ಸುಪ್ರೀಂ
Team Udayavani, Jan 30, 2019, 6:21 AM IST
ಹೊಸದಿಲ್ಲಿ : ಏರ್‌ಸೆಲ್ ಮ್ಯಾಕ್ಸಿಸ್ ಮತ್ತು ಐಎನ್‌ಎಕ್ಸ್ ಕೇಸುಗಳಿಗೆ ಸಂಬಂಧಿಸಿ ಮಾರ್ಚ್ 5, 6, 7 ಮತ್ತು 12ರಂದು ವಿಚಾರಣೆಗೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ಇಂದು ಬುಧವಾರ ಆದೇಶಿಸಿದೆ; ಮಾತ್ರವಲ್ಲ ಕಾನೂನಿನೊಂದಿಗೆ ಆಟವಾಡಕೂಡದೆಂಬ ಖಡಕ್ ಎಚ್ಚರಿಕೆಯನ್ನೂ ನೀಡಿದೆ.
ವಿದೇಶಕ್ಕೆ ಹೋಗುವುದಕ್ಕೆ ಅನುಮತಿ ನೀಡಿರುವಲ್ಲಿನ ಶರತ್ತುಗಳಲ್ಲಿ ಒಂದಾಗಿದ್ದ ಪ್ರಕಾರ 10 ಕೋಟಿ ರೂ.ಗಳನ್ನು ಕೋರ್ಟ್ ರಿಜಿಸ್ಟ್ರಿಯಲ್ಲಿ ಜಮೆ ಮಾಡುವಂತೆಯೂ ಸುಪ್ರೀಂ ಕೋರ್ಟ್, ಕಾರ್ತಿ ಚಿದಂಬರಂ ಗೆ ಅಪ್ಪಣೆ ಮಾಡಿದೆ.
ತನಗೆ ಫೆ.21ರಿಂದ 28ರ ತನಕ ಫ್ರಾನ್ಸಿಗೆ ಹೋಗುವುದಕ್ಕೆ ಅನುಮತಿ ನೀಡಬೇಕೆಂದು ಕೋರಿ ಕಾರ್ತಿ, ಕಳೆದ ವರ್ಷ ನವೆಂಬರ್‌ನಲ್ಲಿ ಕೋರ್ಟಿಗೆ ಮನವಿ ಮಾಡಿಕೊಂಡಿದ್ದರು.
“ನೀವು ಎಲ್ಲಿಗೆ ಬೇಕಾದರೂ ಹೋಗಬಹುದು; ಏನು ಬೇಕಾದರೂ ಮಾಡಬಹುದು. ಆದರೆ ಕಾನೂನಿನೊಂದಿಗೆ ಮಾತ್ರ ಆಟವಾಡಕೂಡದು. ವಿಚಾರಣೆಗೆ ನಿಮ್ಮಿಂದ ಸಹಕಾರ ಸಿಗುತ್ತಿಲ್ಲ ಎಂಬ ಬಗ್ಗೆ ಒಂದು ಬಿಂದುವಿನಷ್ಟು ಸಂದೇಹ ನಮಗೆ ಬಂದರೂ ನಾವು ನಿಮ್ಮನ್ನು ಕಟುವಾಗಿ ದಂಡಿಸುವೆವು’ ಎಂದು ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠ, ಕಾರ್ತಿ ಚಿದಂಬರಂ ಗೆ ಖಡಕ್ ಎಚ್ಚರಿಕೆ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.